12:26 PM Sunday1 - February 2026
ಬ್ರೇಕಿಂಗ್ ನ್ಯೂಸ್
ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಬಾಗಲಕೋಟೆ ಕುಂಬಾರಹಳ್ಳದಲ್ಲಿ ಸಾಕು ಪ್ರಾಣಿ ಭಕ್ಷಕ ಚಿರತೆ ಪತ್ತೆ; ಭಯಭೀತರಾದ ಗ್ರಾಮಸ್ಥರು; ಅರಣ್ಯ ಇಲಾಖೆ ಎಚ್ಚರಿಕೆ

30/05/2021, 09:49

ಭೀಮಣ್ಣ ಪೂಜಾರ್ ವಿಜಯಪುರ
info.reporterkarnataka@gmail.com

ಬಾಗಲಕೊಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕುಂಬಾರಹಳ್ಳ ಗ್ರಾಮದಲ್ಲಿ ಸಾಕು ಪ್ರಾಣಿ ಭಕ್ಷಕ ಚಿರತೆಯೊಂದು ಕಾಣಿಸಿಕೊಂಡಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ.

ಕುಂಬಾರಹಳ್ಳ ಸುತ್ತಮುತ್ತಲಿನ ಪ್ರದೇಶದಲ್ಲಿ ಕೆಲವು ದಿನಗಳಿಂದ ಸಾಕು ಪ್ರಾಣಿಗಳು ಕಾಡು ಪ್ರಾಣಿಯ ದಾಳಿಗೆ ಸಾವನ್ನಪ್ಪುತ್ತಿತ್ತು. ಇದರಿಂದ ಗ್ರಾಮಸ್ಥರು ಭಯಭೀತರಾಗಿದ್ದರು. ಸ್ಥಳೀಯ ಶಾಸಕ ಆನಂದ ನ್ಯಾಮಗೌಡ ಅವರಿಗೆ ದೂರು ನೀಡಿದ್ದರು. ಶಾಸಕರು ಅರಣ್ಯ ಇಲಾಖೆಗೆ ಮಾಹಿತಿ ನೀಡಿ, ದಾಳಿ ಮಾಡುತ್ತಿರುವುದು ಅದ್ಯಾವ ಪ್ರಾಣಿ ಎಂಬುವುದನ್ನು ಪತ್ತೆ ಹಚ್ಚಲು ಸಿಸಿ ಕ್ಯಾಮೆರಾ ಅಳವಡಿಸುವಂತೆ ಸೂಚಿಸಿದ್ದರು. ಅದರಂತೆ ಕಾರ್ಯಪ್ರವೃತ್ತರಾದ ಅರಣ್ಯ ಇಲಾಖೆಯವರು ಸಿಸಿ ಕ್ಯಾಮೆರಾ ಅಳವಡಿಸಿದ್ದರು. ಇದರ ಪ್ರಕಾರ ದಾಳಿ ಮಾಡುವ ಕಾಡು ಪ್ರಾಣಿ ಚಿರತೆ ಎನ್ನುವುದು ಸ್ಪಷ್ಟವಾಗಿದೆ. ಮನೆಯೊಂದರ ಮುಂದೆ ಕಟ್ಟಿ ಹಾಕಿದ್ದ ಮೇಕೆಯೊಂದರ ಮೇಲೆ ಚಿರತೆ ದಾಳಿ ನಡೆಸಿ, ತಿಂದು ಹಾಕಿರುವುದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕುಂಬಾರಹಳ್ಳ ಸುತ್ತಮುತ್ತಲಿನ ಕುಂಚನೂರು, ಜಕನೂರು, ಸನಾಳ ಹಾಗೂ ಆಲಗೂರಿನ ಗ್ರಾಮಸ್ಥರು ಎಚ್ಚರದಿಂದ ಇರುವಂತೆ ಅರಣ್ಯ ಇಲಾಖೆ ಸೂಚನೆ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು