7:32 AM Tuesday26 - May 2026
ಬ್ರೇಕಿಂಗ್ ನ್ಯೂಸ್
ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು

ಇತ್ತೀಚಿನ ಸುದ್ದಿ

ಬಾಗಲಕೋಟೆ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು ಪೊಲೀಸ್ ಅಧಿಕಾರಿಗಳ ಎತ್ತಂಗಡಿ

06/04/2026, 15:01

ಬಾಗಲಕೋಟೆ(reporterkarnataka.com):ಬಾಗಲಕೋಟೆ ಕ್ಷೇತ್ರದ ಉಪ ಚುನಾವಣೆ ಏಪ್ರಿಲ್ 9ರಂದು ನಡೆಯುತ್ತಿದ್ದು ಕಣದಲ್ಲಿರುವ ಅಭ್ಯರ್ಥಿಗಳು ಭರ್ಜರಿಯಾಗಿ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ. ಈ ಮಧ್ಯೆ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ವಿರುದ್ಧ NSUI ಘಟಕದಿಂದ ಕರಪತ್ರ ಹಂಚಿಕೆ ಆರೋಪ ಕೇಳಿಬಂದಿತ್ತು. ಹೀಗಾಗಿ ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಎತ್ತಂಗಡಿ ಮಾಡಲಾಗಿದೆ. ಬಾಗಲಕೋಟೆಯ ಕುಮಾರೇಶ್ವರ ಕ್ಯಾಂಪಸ್​​ನಲ್ಲಿ ಕರಪತ್ರ ಹಿಡಿದು ಬಂದಿದ್ದ NSUI ಕಾರ್ಯಕರ್ತರು ಹಾಗೂ ಬಿಜೆಪಿಯ ಕಾರ್ಯಕರ್ತರ ನಡುವೆ ಗಲಾಟೆಯಾಗಿತ್ತು. ಬಳಿಕ ಐವರು NSUI ಕಾರ್ಯಕರ್ತರನ್ನು ಪೊಲೀಸರು ಠಾಣೆಗೆ ಕರೆ ತಂದು ವಿಚಾರಣೆ ನಡೆಸಲಾಗಿತ್ತು. ಇದೀಗ ಬಾಗಲಕೋಟೆ ಮಹಿಳಾ ಪೊಲೀಸ್ ಠಾಣೆ ಸಿಪಿಐ ವಿಜಯ ಮುರಗುಂಡಿ ಮತ್ತು ನವನಗರ ಪೊಲೀಸ್ ಠಾಣೆ ಪಿಎಸ್​ಐ ಅಶೋಕ ಚೌಹಾಣ್​​ರನ್ನು ವರ್ಗಾವಣೆ ಮಾಡಿ ಡಿಜಿ & ಐಜಿಪಿ ಡಾ.ಎಂ.ಎ.ಸಲೀಂ ಆದೇಶ ಹೊರಡಿಸಿದ್ದಾರೆ.
ವಿಜಯಪುರ ಮಹಿಳಾ ಠಾಣೆಗೆ ಸಿಪಿಐ ವಿಜಯ ಮುರಗುಂಡಿ ಅವರನ್ನ ವರ್ಗಾವಣೆ ಮಾಡಲಾಗಿದ್ದರೆ ಬೆಳಗಾವಿ ಉತ್ತರ ವಲಯ ಐಜಿಪಿ ಕಚೇರಿಗೆ ಪಿಎಸ್ ಐ ಅಶೋಕ್​ರನ್ನ ವರ್ಗಾವಣೆ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು