6:11 PM Thursday10 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಬಗಂಬಿಲ: ಸೋಮೇಶ್ವರ ಪುರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ18 ಲಕ್ಷ ಲೀಟರ್ ಸಾಮರ್ಥ್ಯದ ಟ್ಯಾಂಕ್ ನಿರ್ಮಾಣಕ್ಕೆ ಚಾಲನೆ

18/06/2024, 18:26

ಉಳ್ಳಾಲ(reporterkarnataka.com): ಸೋಮೇಶ್ವರ ಪುರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ 18 ಲಕ್ಷ ಲೀಟರ್ ನೀರು ಶೇಖರಣ ಸಾಮರ್ಥ್ಯದ ಟ್ಯಾಂಕ್ ನಿರ್ಮಾಣಕ್ಕೆ ಭಾನುವಾರ ಬಗಂಬಿಲ ಮೈದಾನದಲ್ಲಿ ಸ್ಥಳೀಯ ಶಾಸಕರೂ ಆದ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಖಾದರ್,
ಮುಂದಿನ ಐದು ವರ್ಷಗಳಲ್ಲಿ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸದಿದ್ದರೆ ನನ್ನ ಕ್ಷೇತ್ರಕ್ಕೆ ಕಾಲಿಡುವುದಿಲ್ಲ ಎಂದು ಕಳೆದ ಅವಧಿಯಲ್ಲಿ ಕೊಟ್ಟ ಭರವಸೆಯಂತೆ ದಿನದ 24ಗಂಟೆಯೂ ಕುಡಿಯುವ ನೀರು ಕೊಡುವಂತಹ ಯೋಜನೆಗೆ ಚಾಲನೆ ನೀಡಲಾಗುತ್ತಿದೆ ಎಂದರು.
ಕ್ಷೇತ್ರದಲ್ಲಿ ನೀರಿನ ವ್ಯವಸ್ಥೆಗೆ 2ನೇ ಹಂತದ ಕಾಮಗಾರಿಗೆ ಮುಖ್ಯಮಂತ್ರಿ 300 ಕೋಟಿ ರೂ. ಅನುದಾನ ಹೆಚ್ಚುವರಿಯಾಗಿ ಬಿಡುಗಡೆ ಮಾಡಿದ್ದಾರೆ. 18 ಲಕ್ಷ ಲೀಟರ್ ನೀರಿನ ಟ್ಯಾಂಕ್ ಆಗಲಿದ್ದು, ನೀರು ತುಂಬೆಯಿಂದ ಕೊಣಾಜೆಗೆ ಸರಬರಾಜು ಮಾಡಿ ಅಲ್ಲಿಂದ ಶುದ್ಧಿಗೊಂಡು ಸೋಮೇಶ್ವರಕ್ಕೆ ಸರಬರಾಜು ಆಗಲಿದೆ. ಯೋಜನೆಗೆ ಶಿಲಾನ್ಯಾಸ ನಡೆದ ದಿನ ಇತಿಹಾಸದ ಪುಸ್ತಕದಲ್ಲಿ ಬರೆದಿಡುವಂತದ್ದು. ಮುಂದಿನ ದಿನಗಳಲ್ಲಿ ಗ್ರಾಮೀಣ ಭಾಗದ ಯೋಜನೆಗೆ ಮುಖ್ಯಮಂತ್ರಿಯೇ ಚಾಲನೆ ನೀಡಲಿದ್ದಾರೆ ಎಂದು ಹೇಳಿದರು.
ಮೂಡಾದ ಅಧ್ಯಕ್ಷ ಸದಾಶಿವ ಉಳ್ಳಾಲ್, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಶೆಟ್ಟಿ ಬೋಳಿಯಾರ್, ಸೋಮೇಶ್ವರ ಪುರಸಭಾ ಸದಸ್ಯರಾದ ಮಾಲತಿ, ಜಯಣ್ಣ, ಮೋಹನ್ ಶೆಟ್ಟಿ, ಕೊಣಾಜೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಶೌಕತ್ ಆಲಿ, ಮುಖಂಡರಾದ ನವೀನ್ ಬಗಂಬಿಲ, ರಹ್ಮಾನ್ ಕೋಡಿಜಾಲ್, ಸಲಾಂ ಉಚ್ಚಿಲ್, ಪುರುಷೋತ್ತಮ ಶೆಟ್ಟಿ, ಮನ್ಸೂರ್ ಮಂಚಿಲ ಉಪಸ್ಥಿತರಿದ್ದರು.
ಜಿಲ್ಲಾ ಮುಖಂಡ ದಿನೇಶ್ ಕುಂಪಲ ಪ್ರಾಸ್ತಾವಿಕವಾಗಿ ಮಾತನಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು