4:03 AM Wednesday15 - January 2025
ಬ್ರೇಕಿಂಗ್ ನ್ಯೂಸ್
ಗರೋಡಿ ಜಾತ್ರೆಗೂ ಊರವರಿಗೆ ನೀರಿಲ್ಲ!: 5 ದಿನಗಳಿಂದ ನೋ ವಾಟರ್!!; ಮೇಯರ್ ಅವರೇ… ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಸಚಿವ ಜಮೀರ್‌ ಭಾವಚಿತ್ರಕ್ಕೆ ಸಗಣಿ ಬಳಿದು ಬಿಜೆಪಿ… ಕೆಚ್ಚಲು ಕೊಯ್ದ ಪ್ರಕರಣ: ದನದ ಮಾಲೀಕನ ತಾಯಿಗೆ 3 ಹಸು ಕೊಡಿಸಿದ ಸಚಿವ… 5 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ: ಆರೋಪಿಯ ತಕ್ಷಣ ಬಂಧಿಸಲು ಆಗ್ರಹಿಸಿ ಎಐಎಂಎಸ್ಎಸ್… ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ… ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ ಶಬರಿಮಲೆ: ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ಭಕ್ತರಿಗೆ ಮಕರ ಜ್ಯೋತಿ ದರ್ಶನ: ಪುನೀತರಾದ… ನಂಜನಗೂಡು: ಶಿವಶರಣ ಶ್ರೀ ಸಿದ್ದರಾಮೇಶ್ವರ ರ ಜಯಂತಿ ಆಚರಣೆ ಜಿಹಾದಿ ಮನಸ್ಥಿತಿಯನ್ನು ಪೋಷಿಸಿ ಬೆಳೆಸುತ್ತಿರುವ ಸಿದ್ದರಾಮಯ್ಯ ಸರಕಾರ: ಸಂಸದ ಕ್ಯಾ ಬ್ರಿಜೇಶ್ ಚೌಟ… ವಿಜಯಪುರ: 4 ಮಂದಿ ಮಕ್ಕಳ ಜತೆ ಕಾಲುವೆಗೆ ಜಿಗಿದ ಹೆತ್ತಬ್ಬೆ: ಮಕ್ಕಳ ದಾರುಣ…

ಇತ್ತೀಚಿನ ಸುದ್ದಿ

ಬಹು ನಿರೀಕ್ಷಿತ, ಬಹು ತಾರಾಗಣದ ‘ಲಾಸ್ಟ್ ಬೆಂಚ್’ ಕರಾವಳಿಯಾದ್ಯಂತ ನಾಳೆ ತೆರೆಗೆ

15/12/2022, 22:11

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಪ್ರಧಾನ್ ಎಂಪಿ ನಿರ್ದೇಶನದಲ್ಲಿ ತಯಾರಾದ ವಿಐಪೀಸ್ ಲಾಸ್ಟ್ ಬೆಂಚ್ ತುಳು-ಕನ್ನಡ ಸಿನಿಮಾ ಡಿಸೆಂಬರ್ 16ರಂದು ತೆರೆ ಕಾಣಲಿದೆ.
ಎ.ಎಸ್. ಪ್ರೊಡಕ್ಷನ್ ಲಾಂಛನದಲ್ಲಿ ಆಶೀಕಾ ಸುವರ್ಣ ನಿರ್ಮಾಣದಲ್ಲಿ ಲಾಸ್ಟ್ ಬೆಂಚ್ ತೆರೆ ಕಾಣಲಿದೆ.

ಪ್ರಧಾನ್ ಎಂಪಿ ನಿರ್ದೇಶನದಲ್ಲಿ ತಯಾರಾದ ವಿಐಪೀಸ್ ಲಾಸ್ಟ್ ಬೆಂಚ್ ತುಳು-ಕನ್ನಡ ಸಿನಿಮಾ ಡಿಸೆಂಬರ್ 16 ರಂದು ತೆರೆ ಕಾಣಲಿದೆ.
ಆಶಿಕಾ ಸುವರ್ಣ ನಿರ್ಮಾಪಕರಾಗಿ ಮತ್ತು ಕಿರಣ್ ಶೆಟ್ಟಿ ಸಹ ನಿರ್ಮಾಪಕರಾಗಿದ್ದಾರೆ.

ಮಂಗಳೂರು, ಉಡುಪಿ ಸಹಿತ ಬೇರೆ ಬೇರೆ ಪ್ರದೇಶಗಳಲ್ಲಿ ಸಿನಿಮಾ ತೆರೆಗೆ ಬರಲಿದೆ.ಈ ಸಿನಿಮಾಕ್ಕೆ ಒಂದೇ ಹಂತದಲ್ಲಿ‌ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಚಿತ್ರೀಕರಣ ನಡೆಸಲಾಗಿದೆ.

ಸಿನಿಮಾದಲ್ಲಿ ಪ್ರಮುಖ ಪಾತ್ರಗಳಲ್ಲಿ ಪೃಥ್ವಿ ಅಂಬಾರ್, ರೂಪೇಶ್ ಶೆಟ್ಟಿ, ವಿನೀತ್ ಕುಮಾರ್, ಅಥರ್ವ ಪ್ರಕಾಶ್ ಪಾಂಡೇಶ್ವರ್, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ವಿಸ್ಮಯ ವಿನಾಯಕ, ರವಿ ರಾಮಕುಂಜ, ಪ್ರವೀಣ್ ಮರ್ಕಮೆ, ಆರಾಧ್ಯ ಶೆಟ್ಟಿ, ನಿರಿಕ್ಷಾ ಶೆಟ್ಟಿ ಪುತ್ತೂರು, ರೂಪ ವರ್ಕಾಡಿ, ಅನಿತಾ, ಐಸಿರಿ, ಪ್ರಾರ್ಥನಾ ಸುವರ್ಣ, ಮೊದಲಾದ ಬಹು ತಾರಾಗಣ ಈ ಸಿನಿಮಾದಲ್ಲಿದೆ. ಮುಖ್ಯವಾಗಿ ತುಳು ಸಿನಿಮಾರಂಗದ ಖ್ಯಾತ ನಾಮ ಕಲಾವಿದರಾದ ಪೃಥ್ವಿ ಅಂಬಾರ್, ರೂಪೇಶ್ ಶೆಟ್ಟಿ, ವಿನಿತ್ ಕುಮಾರ್ ಮೊದಲ ಬಾರಿಗೆ ಈ ಸಿನಿಮಾದ ಮೂಲಕ ಒಟ್ಟಾಗಿ ಕಾಣಿಸಿಕೊಂಡಿರುವುದು ಈ ಸಿನಿಮಾದ ವಿಶೇಷತೆಯಾಗಿದೆ.

ಮಲ್ಟಿ ಸ್ಟಾರ್ಸ್ ಕಲಾವಿದರ ಜೊತೆಗೆ ಹಾಸ್ಯ ಕಲಾವಿದರ ದೊಡ್ಡ ದಂಡೇ ಈ ಸಿನಿಮಾದಲ್ಲಿ ಇದೆ. ಹೀಗಾಗಿ ನಗುವಿಗೆ ಬರವಿಲ್ಲ. ಅಲ್ಲದೆ ಹೊಸ ಕಲಾವಿದರಿಗೂ ಅಭಿನಯಿಸಲು ನಿರ್ದೇಶಕರು ಅವಕಾಶ ಮಾಡಿ ಕೊಟ್ಟಿದ್ದಾರೆ.

ಪ್ರಧಾನ್ ಎಂಪಿ ನಿರ್ದೇಶನದ ಸಿನಿಮಾಕ್ಕೆ ಕೀರ್ತನ್ ಭಂಡಾರಿ ಮತ್ತು ಸೃಜನ್ ಪೇಜಾವರ್ ಸಾಹಿತ್ಯ- ಸಂಭಾಷಣೆ ರಚಿಸಿದ್ದಾರೆ. ಸಹ ನಿರ್ದೇಶಕರಾಗಿ ರಜು ಬಿಲಿಗಿರಿ, ಆನಂದ್, ಸುಮನ್ ಸುವರ್ಣ, ಹರೀಶ್ ಇದ್ದಾರೆ. ಕ್ಯಾಮರಾ ಪ್ರಸಣ್ಣ ಕುಮಾರ್, ವಿನಾಯಕ ಆಚಾರ್ಯ, ಸಂಕಲನ ಸಚಿನ್, ಸಂಗೀತ ವಿನ್ಯಾಸ್ ಮದ್ಯ,ಈ ಸಿನಿಮಾಕ್ಕೆ ಅಶಿಕಾ ಸುವರ್ಣ ನಿರ್ಮಾಪಕರಾಗಿದ್ದು, ಕಿರಣ್ ಶೆಟ್ಟಿ ಸಹ ನಿರ್ಮಾಪಕರಾಗಿದ್ದಾರೆ. ಕಿಶೋರ್ ಕಾರ್ಯಕಾರಿ ನಿರ್ಮಾಪಕರಾಗಿರುತ್ತಾರೆ.

*ಕಥಾಹಂದರ:* ವಿಐಪೀಸ್ ಲಾಸ್ಟ್ ಬೆಂಚ್ ತುಳುವಿನ ಮೊದಲ ಬಹು ನಾಯಕರಿರುವ ಸಿನಿಮಾ ಆಗಿದೆ. ಇದು ಮೂರು ಬೇಜವಾಬ್ದಾರಿ ಹುಡುಗರ ಕಾಲೇಜು ಜೀವನದ ಕಥೆಯನ್ನು ಹೊಂದಿದೆ. ಆದರೆ ಅವರು ಅತಿಯಾಗಿ ಪ್ರೀತಿಸುತ್ತಿದ್ದ ಬಾಲಕನಿಂದ ಕಥೆಗೆ ಹೊಸ ತಿರುವು ಸಿಗುತ್ತದೆ.
ಈ ಸಿನಿಮಾವು ಹಾಸ್ಯ ಪ್ರಧಾನವಾಗಿದ್ದರೂ ಸೆಂಟಿಮೆಂಟಲ್ ಕಥೆಯನ್ನೂ ಹೊಂದಿದೆ. ಒಂದು ಕಥೆ ಹಾಸ್ಯದ ಹೊನಲು, ಮತ್ತೊಂದು ಭಾವನಾತ್ಮಕ ಸನ್ನಿವೇಶಗಳ ಮಿಶ್ರಣವಾಗಿರುವ ಈ ಕಥೆಯಲ್ಲಿ ಪ್ರೇಕ್ಷಕರಿಗೆ ಹೊಟ್ಟೆ ತುಂಬಾ ನಗಾಡಲು ಯಥೇಚ್ಛ ಅವಕಾಶಗಳಿವೆ. ಕೋಸ್ಟಲ್‌ವುಡ್‌ನ ಖ್ಯಾತನಾಮ ಕಲಾವಿದರೆಲ್ಲರೂ ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಸಿನಿಮಾವನ್ನು ಮಂಗಳೂರು ಸುತ್ತಮುತ್ತಲಿನ ಹಲವಾರು ಅತ್ಯಾಕರ್ಷಕ ಸ್ಥಳಗಳಲ್ಲಿ ಚಿತ್ರೀಕರಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು