ಇತ್ತೀಚಿನ ಸುದ್ದಿ
ಕಡಲನಗರಿ ಮಂಗಳೂರಿನಲ್ಲಿ ಇಂದು ಬಹು ಸಂಸ್ಕೃತಿ ಉತ್ಸವ: ಮುಖ್ಯಮಂತ್ರಿ ಉದ್ಘಾಟನೆ
17/01/2025, 07:03
ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಮತ್ತು ಉಡುಪಿ ಮತ್ತು ಕೊಡಗು ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ತುಳು, ಬ್ಯಾರಿ, ಕೊಂಕಣಿ, ಅರೆ ಭಾಷೆ, ಕೊಡವ ಸಾಹಿತ್ಯ ಅಕಾಡೆಮಿ ಮತ್ತು ಯಕ್ಷಗಾನ ಅಕಾಡೆಮಿ, ಮಂಗಳೂರು ಮಹಾನಗರಪಾಲಿಕೆ ವತಿಯಿಂದ ಜ.17 ರಂದು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಬಹು ಸಂಸ್ಕೃತಿ ಉತ್ಸವ ಆಯೋಜಿಸಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಿಗ್ಗೆ 10 ಗಂಟೆಗೆ ಬಹು ಸಂಸ್ಕೃತಿ ಉತ್ಸವ ಉದ್ಘಾಟಿಸಲಿದ್ದಾರೆ.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಫರೀದ್ ಉಪಸ್ಥಿತರಿರುವರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪುಸ್ತಕ ಪ್ರದರ್ಶನ ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದ ಭವ್ಯ ಸಾಂಸ್ಕೃತಿಕ ಮೆರವಣಿಗೆಗೆ ವಿಧಾನಸಭಾ ಸ್ಫೀಕರ್ ಯು.ಟಿ. ಖಾದರ್ ಫರೀದ್ ಸಂಜೆ 4 ಗಂಟೆಗೆ ನಗರದ ಟಿ.ಎಂ.ಎ.ಪೈ ಆವರಣದಲ್ಲಿ ಉದ್ಘಾಟಿಸಲಿದ್ದಾರೆ.
ವಿವಿಧ ಅಕಾಡೆಮಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು, ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾದ ಜಿಲ್ಲಾ ಮಟ್ಟದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದೆ.
ಸಂಜೆ 4:30ರಿಂದ ಕರ್ನಾಟಕ ಯಕ್ಷಗಾನ ಅಕಾಡೆಮಿ, ಚಾರ ಪ್ರದೀಪ ಹೆಬ್ಬಾರ್ ವಿರಚಿತ ಶ್ರೀದೇವಿ ಭುವನೇಶ್ವರಿ ಕನ್ನಡ ಯಕ್ಷಗಾನ ಪ್ರದರ್ಶನ ನಡೆಯಲಿದೆ.
‘ಕರ್ನಾಟಕಕ್ಕೆ ಒಡನಾಡಿ ಬ್ಯಾರಿ ಸಮುದಾಯಗಳ ಕೊಡುಗೆ’ ಎಂಬ ವಿಷಯದಲ್ಲಿ ಆಯ್ದ ವಿದ್ಯಾರ್ಥಿಗಳು ವಿಚಾರ ಮಂಡನೆ ಮಾಡಲಿದ್ದಾರೆ.