3:01 AM Tuesday1 - July 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,… ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕೊಂಡೇ ಅಧಿಕಾರಕ್ಕೆ ಬರಬೇಕು, ಸ್ವಂತ ಶಕ್ತಿಯಿಂದ… Karnataka CM | ಸರಕಾರ 5 ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ: ಮೈಸೂರಿನಲ್ಲಿ ಸಿಎಂ… ಮಾಂಸಕ್ಕಾಗಿ ಜಿಂಕೆ ಕೊಲ್ಲುತ್ತಿದ್ದ ಪಾಪಿಯ ಬಂಧನ: 10 ಜಿಂಕೆ,1 ಕಾಡು ಹಂದಿ ಮಾಂಸ,… Shivamogga | ಯುವತಿಗೆ ಲೈಂಗಿಕ ಕಿರುಕುಳ: ಮೆಗ್ಗಾನ್ ಆಸ್ಪತ್ರೆ ವೈದ್ಯ ಡಾ.ಅಶ್ವಿನ್ ಹೆಬ್ಬಾರ್… Chikkamagaluru | 3 ದಿನಗಳು ಕಳೆದರೂ ನಾಪತ್ತೆಯಾದ ಫಾರೆಸ್ಟ್ ಗಾರ್ಡ್ ಪತ್ತೆ ಇಲ್ಲ:…

ಇತ್ತೀಚಿನ ಸುದ್ದಿ

ಬಹುನಿರೀಕ್ಷಿತ ‘ಮೀರಾ’ ಚಲನಚಿತ್ರ ಫೆ.21ಕ್ಕೆ ತೆರೆಗೆ: ತುಳು ಚಿತ್ರರಂಗಲ್ಲಿ ಮೊದಲ ಬಾರಿಗೆ AI ತಂತ್ರಜ್ಞಾನ ಬಳಕೆ

17/01/2025, 07:17

ಮಂಗಳೂರು(reporterkarnataka.com): ಅಸ್ತ್ರ ಪ್ರೊಡಕ್ಷನ್‌ನ ಬ್ಯಾನರ್ ನಲ್ಲಿ ಲಂಚು ಲಾಲ್ ಕೆ.ಎಸ್. ನಿರ್ಮಿಸಿರುವ, ಅಶ್ವಥ್ ನಿರ್ದೇಶನದ
‘ಮೀರಾ’ ಚಲನಚಿತ್ರ ಫೆಬ್ರವರಿ 21ಕ್ಕೆ ದೇಶಾದ್ಯಂತ ಬಿಡುಗಡೆಯಾಗಲಿದೆ.


ಚಿತ್ರದ ನಿರ್ಮಾಪಕ ಲಂಚುಲಾಲ್ ಕೆ.ಎಸ್. ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು.
ಈ ಚಿತ್ರವನ್ನು ಲಂಚುಲಾಲ್ ಕೆ.ಎಸ್.ನಿರ್ಮಿಸಿದ್ದು ಅಶ್ವಥ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿದ್ದಾರೆ, ಈ ಚಿತ್ರ ತುಳು ಚಿತ್ರರಂಗದಲ್ಲಿ ಮಹತ್ವದ ಮೈಲಿಗಲ್ಲು ಆಗಲಿದೆ, ಈ ಚಿತ್ರ ತುಳು ಸಿನಿಮಾ ಇಂಡಸ್ಟ್ರಿಯಲ್ಲಿ ಮೊದಲ ಮಹಿಳಾ ಪ್ರಧಾನ ಚಿತ್ರವಾಗಿದೆ. ಚಿತ್ರದಲ್ಲಿ ಇಶಿತಾ ಶೆಟ್ಟಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅರವಿಂದ್ ಬೋಳಾರ್, ಸ್ವರಾಜ್ ಶೆಟ್ಟಿ, ಜೆ.ಪಿ.ತೂಮಿನಾಡು, ಪ್ರಕಾಶ್ ತೂಮಿನಾಡು, ಮಂಜು ರೈ ಮೂಳೂರು, ರೂಪಶ್ರೀ ವರ್ಕಾಡಿ, ಯತೀಶ್ ಪೂಜಾರಿ, ಅಶ್ವಥ್, ಬೇಬಿ ಲಕ್ಷ್ಯ ಎಲ್. ಮುಂತಾದ ಕೋಸ್ಟಲ್ ವುಡ್ ನ ಹೆಸರಾಂತ ಕಲಾವಿದರ ಜತೆ ಮುಂಬೈ ಮೂಲದ ತುಳು
ಬ್ಲಾಗರ್ ನಟಿ ರಕ್ಷಿತಾ ಶೆಟ್ಟಿ ಈ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದಲ್ಲದೆ ಕರಾವಳಿ ಭಾಗದ ಅನೇಕ ಪ್ರತಿಭೆಗಳೂ ಈ ಚಿತ್ರದಲ್ಲಿ ಬಣ್ಣ ಹಚ್ಚಿದ್ದಾರೆ.
ಮೀರಾ ಚಲನಚಿತ್ರದ ಡಿಒಪಿ ಅಜಯ್ ಕೆ.ಎಸ್, ಸಂಕಲನ ಜಾಬಿನ್ಸ್ ಸೆಬಾಸ್ಟಿಯನ್ ನಿರ್ವಹಿಸುತ್ತಿದ್ದು ಸಂಗೀತ
ಸಂಯೋಜನೆ ರಜ್ಜು ಜಯಪ್ರಕಾಶ್, ಗೀತೆರಚನೆ ಜಯಪ್ರಕಾಶ್ ಕಳೇರಿ ನಿರ್ವಹಿಸುತ್ತಿದ್ದಾರೆ. ಮಲಯಾಳಂ ಸಿನೆಮಾ
`ಭ್ರಮಯುಗಂ’ ಖ್ಯಾತಿಯ ಲಿಜು ಪ್ರಭಾಕರ್ ಚಿತ್ರದ ಡಿ.ಐ ವಿಭಾಗವನ್ನು ನಿರ್ವಹಿಸುತ್ತಿದ್ದಾರೆ. ಎಸ್.ಎಫ್.ಎಕ್ಸ್. ಮತ್ತು ಅಂತಿಮ ಮಿಶ್ರಣವನ್ನು ಯುನಿಟಿ ಸ್ಟುಡಿಯೋಸ್ ನಿರ್ವಹಿಸಿದ್ದು, ಜಿತಿನ್ ಕುಂಬ್ಳೆ ಸಹಾಯಕ ನಿರ್ದೇಶಕರಾಗಿ, ಜಯ
ಸುವರ್ಣ ಮೇಕ್‌ಅಪ್ ಹಾಗೂ ಪಿ.ಆರ್.ಒ ಆಗಿ ಬಾಳ ಜಗನ್ನಾಥ ಶೆಟ್ಟಿ ಉಸ್ತುವಾರಿ ವಹಿಸಿದ್ದಾರೆ. ಈ ಚಿತ್ರದಲ್ಲಿ 5 ಹಾಡುಗಳಿದ್ದು ದಕ್ಷಿಣ ಭಾರತ ಹೆಸರಾಂತ ಹಿನ್ನೆಲೆ ಗಾಯಕರಾದ ಮಧುಬಾಲಕೃಷ್ಣ ಸೇರಿದಂತ ಹೆಸರಾಂತ ಗಾಯಕರ ಧ್ವನಿಯಲ್ಲಿ ಮೂಡಿ ಬಂದಿದೆ. ತುಳು ಚಿತ್ರರಂಗಲ್ಲಿ ಇದೇ ಮೊದಲ ಬಾರಿಗೆ A.I ತಂತ್ರಜ್ಞಾನದಲ್ಲಿ
ತಯಾರಿಸಿ ಹಾಡು ಕೂಡ ಈ ಚಿತ್ರದಲ್ಲಿ ಇದೆ“ ಎಂದರು.
ತನ್ನ ಕನಸುಗಳನ್ನು ನನಸಾಗಿಸುವ ಪಯಣದಲ್ಲಿ ಸಮಾಜದಿಂದ ಸವಾಲುಗಳನ್ನು ಎದುರಿಸುವ ಯುವತಿಯ
ಕಥೆಯನ್ನು ಈ ಚಿತ್ರ ಹೇಳುತ್ತದೆ. ಈ ಚಲನಚಿತ್ರವು ಮಹಿಳೆಯರಿಗೆ ಅವರ ಕನಸನ್ನು ಜಯಿಸಲು ಮತ್ತು ಸಾಧಿಸಲು
ಸ್ಫೂರ್ತಿ ನೀಡುತ್ತದೆ. ಮಂಗಳೂರು, ಕಟೀಲು, ಕಾಸರಗೋಡು, ಸೀತಾಂಗೋಳಿ, ಕುಂಬಳ ಮತ್ತು ಕರಾವಳಿ ಪ್ರದೇಶದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿತ್ರೀಕರಣಗೊಂಡ ‘ಮೀರಾ’ ತುಳು ಚಿತ್ರರಂಗದಲ್ಲಿ ಒಂದು ಮೈಲಿಗಲ್ಲು
ಆಗಲಿದ್ದು, ಉತ್ತಮ ಕಥೆ, ಅಭಿನಯ ಮತ್ತು ಸಾಮಾಜಿಕ ಸಂದೇಶದೊಂದಿಗೆ ಫೆಬ್ರವರಿ 21 ರಂದು ಬಿಡುಗಡೆಯಾದಾಗ ಪ್ರೇಕ್ಷಕರ ಮೇಲೆ ಗಮನಾರ್ಹ ಪರಿಣಾಮ ಬೀರುವ ನಿರೀಕ್ಷೆಯಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ನಿರ್ದೇಶಕ ಅಶ್ವಥ್, ನಟಿ ಇಶಿತಾ ಶೆಟ್ಟಿ, ಸಂಗೀತ ನಿರ್ದೇಶಕ-ರಜ್ಜು ಜಯಪ್ರಕಾಶ್, ನಟ ಯತೀಶ್ ಪೂಜಾರಿ, ಸಹಾಯಕ ನಿರ್ದೇಶಕ ಜಿತಿನ್ ಕುಂಬ್ಳೆ, ನಟ – ಚರಣ್ ಸಿ ಆರ್ ಬಿ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು