7:31 AM Sunday14 - September 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ

ಇತ್ತೀಚಿನ ಸುದ್ದಿ

ಬಾಹ್ಯಾಕಾಶಕ್ಕೆ ಜಿಗಿಯಲಿದೆ ವಿದ್ಯಾರ್ಥಿನಿಯರು ತಯಾರಿಸಿದ ಪುಟ್ಟ ಸ್ಯಾಟಲೈಟ್..!: ಇದರ ತೂಕ ಎಷ್ಟು ಗೊತ್ತೇ?

31/07/2022, 18:39

ಹೊಸದಿಲ್ಲಿ(reporterkarnataka.com): ದೇಶದಲ್ಲಿ ಪ್ರಪ್ರಥಮ ಬಾರಿಗೆ ವಿವಿಧ ಶಾಲೆಗಳ ವಿದ್ಯಾರ್ಥಿನಿಯರು ಸೇರಿಕೊಂಡು ತಯಾರಿಸಿದ ಪುಟ್ಟ ಉಪಗ್ರಹವೊಂದು ಬಾಹ್ಯಾಕಾಶಕ್ಕೆ ಜಿಗಿಯಲು ಸಿದ್ಧತೆ ನಡೆಸಿದೆ. ದೇಶದ 75 ಶಾಲೆಗಳ 750 ವಿದ್ಯಾರ್ಥಿನಿಯರು ಸೇರಿ ತಯಾರಿಸಿರುವ ಪುಟಾಣಿ ಉಪಗ್ರಹ ಇದಾಗಿದೆ.

ಈ ಉಪಗ್ರಹವು ಕೇವಲ 8 ಕೆ.ಜಿ ತೂಕ ಹೊಂದಿದ್ದು, ತನ್ನದೇ ಸೌರ ಫಲಕ, ದೀರ್ಘ ವ್ಯಾಪ್ತಿಯ ಸಂವಹನ ಸಲಕರೆಣೆ, ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇದರ ಜೀವಿತಾವಧಿ ಮಾತ್ರ 6 ತಿಂಗಳುಗಳಾಗಿವೆ.

ವಿಶ್ವಸಂಸ್ಥೆಯ ’ಬಾಹ್ಯಾಕಾಶದಲ್ಲಿ ಮಹಿಳೆಯರು’ ಎಂಬ ವಿಷಯದ ಆಧಾರದಲ್ಲಿ ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್ ಮತ್ತು ಗಣಿತ ಕ್ಷೇತ್ರದಲ್ಲಿ ಮಹಿಳೆಯರಿಗೆ ಉತ್ತೇಜನ ನೀಡುವ ಉದ್ದೇಶದಿಂದ ಈ ಉಪಗ್ರಹ ನಿರ್ಮಾಣವಾಗಿದೆ ಎಂದು ಮುಖ್ಯ ತಂತ್ರಜ್ಞಾನ ಅಧಿಕಾರಿ ರಿಫಾತ್ ಶಾರೂಕ್ ತಿಳಿಸಿದ್ದಾರೆ.

75ನೇ ಸ್ವಾತಂತ್ರ್ಯೋತ್ಸವದ ಸ್ಮರಣಾರ್ಥ ಈ ಉಪಗ್ರಹವು ಮುಂದಿನ ತಿಂಗಳ ಆರಂಭದಲ್ಲಿ ಇಸ್ರೋನ ಸಣ್ಣ ಉಪಗ್ರಹ ಉಡಾವಣೆ ನೌಕೆ ಎಸ್‌ಎಸ್‌ಎಲ್‌ವಿ ಮೂಲಕ ಉಡಾವಣೆಯಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು