1:12 PM Wednesday3 - December 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ…

ಇತ್ತೀಚಿನ ಸುದ್ದಿ

ಬೈಕಂಪಾಡಿ ಮೀನಕಳಿಯದ ಸರಕಾರಿ ಪ್ರೌಢಶಾಲೆಗೆ ‘ನೈರ್ಮಲ್ಯ ಶಾಲಾ ಅಭ್ಯುದಯ’ ರಾಜ್ಯ ಪ್ರಶಸ್ತಿ

09/08/2024, 11:54

ಮಂಗಳೂರು(reporterkarnataka.com): ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿ ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್ ನೀಡುವ 2024ರ ರಾಜ್ಯಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ರಾಜ್ಯ ಪ್ರಶಸ್ತಿ ಮಂಗಳೂರಿನ ಬೈಕಂಪಾಡಿ ಮೀನಕಳಿಯದ ಸರಕಾರಿ ಪ್ರೌಢಶಾಲೆಗೆ ಲಭಿಸಿದೆ.
ಮುದ್ದೇನಹಳ್ಳಿಯಲ್ಲಿ ಇತ್ತೀಚೆಗೆ ನಡೆದ ರಾಜ್ಯಮಟ್ಟದ ಸಮಾವೇಶದಲ್ಲಿ ಟ್ರಸ್ಟಿನ ಸಂಸ್ಥಾಪಕರಾದ ಶ್ರೀ ಸದ್ಗುರು ಮಧುಸೂಧನ ಸಾಯಿ ಅವರು ಶಾಲಾ ಮುಖ್ಯೋಪಾಧ್ಯಾಯರಾದ ಲಕ್ಷ್ಮೀನಾರಾಯಣ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಉತ್ತಮ ಶಾಲಾ ನೈರ್ಮಲ್ಯ, ಶಾಲಾ ಕೈತೋಟ, ಹಸಿರುವನ, ಪ್ರಯೋಗಾಲಯ,ವೈವಿಧ್ಯಮಯ ಪಠ್ಯಪೂರಕ ಚಟುವಟಿಕೆಗಳ ಆಧಾರದ ಮೇಲೆ ಟ್ರಸ್ಟ್ ಪ್ರತ್ಯಕ್ಷ ಪರಿಶೀಲನೆ ಹಾಗೂ ಮೌಲ್ಯಮಾಪನ ನಡೆಸಿ ಶಾಲೆಯನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿರುತ್ತಾರೆ. ಈ ಪ್ರಶಸ್ತಿಯು ರೂ.10000 ನಗದು ಬಹುಮಾನ,ಪ್ರಶಸ್ತಿ ಫಲಕ, ಶಿಕ್ಷಕರ ಡೈರಿ ಹಾಗೂ ಶಾಲಾ ವಿದ್ಯಾರ್ಥಿಗಳ ಮೌಲ್ಯಾಧಾರಿತ ಗ್ರಂಥಾಲಯ ಪುಸ್ತಕಗಳನ್ನು ಒಳಗೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು