9:35 AM Wednesday23 - April 2025
ಬ್ರೇಕಿಂಗ್ ನ್ಯೂಸ್
ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ…

ಇತ್ತೀಚಿನ ಸುದ್ದಿ

ಬಜಪೆ ಠಾಣೆ ವ್ಯಾಪ್ತಿಯಲ್ಲಿ ಇಬ್ಬರು ಯುವತಿಯರು ಕಾಣೆ: ಪ್ರಕರಣ ದಾಖಲು; ಪತ್ತೆಗೆ ಮನವಿ

10/02/2022, 19:40

ಮಂಗಳೂರು(reporterkarnataka.com): ನಗರದ ಬಜಪೆ ಗ್ರಾಮದ ಕೊಂಚಾರ್ ಎಂಬಲ್ಲಿ ವಾಸವಿದ್ದ ಮುಬೀನಾ (22 ) ಹಾಗೂ ಬುಶ್ರಾ (21) ಇದೇ ಫೆ.7ರಿಂದ ಕಾಣೆಯಾಗಿದ್ದಾರೆ.

ಈ ಬಗ್ಗೆ ನಗರದ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಕಾಣೆಯಾದವರ ಚಹರೆ ಇಂತಿದೆ:

ಮುಬೀನಾ ಎಂಬವರು 4 ಅಡಿ 2 ಇಂಚು ಎತ್ತರ, ಎಣ್ಣೆ ಕಪ್ಪು ಮೈ ಬಣ್ಣ, ಕಪ್ಪು ಕೂದಲು ಹೊಂದಿರುತ್ತಾರೆ, ಬಿಳಿ ಬಣ್ಣದ ಟಾಪ್ ಹಾಗೂ ನೀಲಿ ಬಣ್ಣದ ಪ್ಯಾಂಟ್ (ಚೂಡಿದಾರ) ಧರಿಸಿರುತ್ತಾರೆ. ಬ್ಯಾರಿ, ಹಿಂದಿ, ಇಂಗ್ಲೀಷ್, ತುಳು, ಕನ್ನಡ ಭಾಷೆ ಮಾತನಾಡುತ್ತಾರೆ.

ಬುಶ್ರಾ ಎಂಬವರು 4 ಅಡಿ 5 ಇಂಚು ಎತ್ತರ, ಬಿಳಿ ಮೈಬಣ್ಣ, ಕಪ್ಪು ಕೂದಲು ಹೊಂದಿರುತ್ತಾರೆ, ಕಂದು ಬಣ್ಣದ ಟಾಪ್ ಹಾಗೂ ಕಪ್ಪು ಬಣ್ಣದ ಪ್ಯಾಂಟ್(ಚೂಡಿದಾರ) ಧರಿಸಿರುತ್ತಾರೆ. ಬ್ಯಾರಿ, ತುಳು, ಕನ್ನಡ ಭಾಷೆ ಮಾತನಾಡುತ್ತಾರೆ.

ಇವರು ಪತ್ತೆಯಾದಲ್ಲಿ ಕಂಟ್ರೊಲ್ ರೂಂ ದೂ.ಸಂಖ್ಯೆ:0824-2220800 ಅಥವಾ ಬಜಪೆ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು