ಇತ್ತೀಚಿನ ಸುದ್ದಿ
ಬಜಪೆ ಠಾಣೆಯ ಪೊಲೀಸರ ಅಮಾನತು: ಪ್ರತಿಪಕ್ಷ ಉಪ ನಾಯಕ ಯು.ಟಿ. ಖಾದರ್ ಅಸಮಾಧಾನ
26/04/2022, 21:37
ಮಂಗಳೂರು(reporterkarnataka.com): ಯಾವುದೇ ರೀತಿಯ ವಿಮರ್ಶೆ ಮಾಡದೆ, ತನಿಖೆ ಕೈಗೊಳ್ಳದೆ ಬಜಪೆ ಪೊಲೀಸರನ್ನು ಅಮಾನತುಗೊಳಿಸಿದ ಬಗ್ಗೆ ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟನೆಯಲ್ಲಿ ಹೇಳಿಕೆ ನೀಡಿರುವ ಅವರು ‘ಬಜೈ ಪೊಲೀಸ್ ಠಾಣೆಯ ಓರ್ವ ಇನ್‌ಸ್ಪೆಕ್ಟರ್ ಹಾಗೂ ಮೂವರು ಸಿಬ್ಬಂದಿಯನ್ನು ಅಮಾನತುಗೊಳಿಸಿರುವ ಬಗ್ಗೆ ತೀವ್ರ ಅಸಮಾಧಾನವಿದೆ. ಪ್ರಾಮಾಣಿಕ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸುವ ಇಂತಹ ಘಟನೆಗಳು ಕೆಲವು ಸಮಾಜದ್ರೋಹಿ ಶಕ್ತಿಗಳು ಬೇಕಾಬಿಟ್ಟಿ ಮಾತನಾಡಲು ಹಾಗೂ ಕಾನೂನು ಕೈಗೆತ್ತಿಕೊಳ್ಳಲು ಪ್ರೇರಣೆಯಾಗುತ್ತದೆ.
ಈ ಸರಕಾರ ಅಧಿಕಾರಿಗಳನ್ನು ಪ್ರಾಮಾಣಿಕವಾಗಿ ಕೆಲಸ ಮಾಡಲು ಬಿಡದೆ ಇರುವುದು ಬಹಳ ದುರಂತ ಎಂದು ಯು.ಟಿ.ಖಾದರ್ ಅವರು ಪತ್ರಿಕಾ ಪ್ರಕಟನೆಯ ಮೂಲಕ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.