1:08 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಬಜಪೆ ಠಾಣೆಯ ಪೊಲೀಸರ ಅಮಾನತು: ಪ್ರತಿಪಕ್ಷ ಉಪ ನಾಯಕ ಯು.ಟಿ. ಖಾದರ್ ಅಸಮಾಧಾನ

26/04/2022, 21:37

ಮಂಗಳೂರು(reporterkarnataka.com): ಯಾವುದೇ ರೀತಿಯ ವಿಮರ್ಶೆ ಮಾಡದೆ, ತನಿಖೆ ಕೈಗೊಳ್ಳದೆ ಬಜಪೆ ಪೊಲೀಸರನ್ನು ಅಮಾನತುಗೊಳಿಸಿದ ಬಗ್ಗೆ ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟನೆಯಲ್ಲಿ ಹೇಳಿಕೆ ನೀಡಿರುವ ಅವರು ‘ಬಜೈ ಪೊಲೀಸ್ ಠಾಣೆಯ ಓರ್ವ ಇನ್‌ಸ್ಪೆಕ್ಟರ್ ಹಾಗೂ ಮೂವರು ಸಿಬ್ಬಂದಿಯನ್ನು ಅಮಾನತುಗೊಳಿಸಿರುವ ಬಗ್ಗೆ ತೀವ್ರ ಅಸಮಾಧಾನವಿದೆ. ಪ್ರಾಮಾಣಿಕ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸುವ ಇಂತಹ ಘಟನೆಗಳು ಕೆಲವು ಸಮಾಜದ್ರೋಹಿ ಶಕ್ತಿಗಳು ಬೇಕಾಬಿಟ್ಟಿ ಮಾತನಾಡಲು ಹಾಗೂ ಕಾನೂನು ಕೈಗೆತ್ತಿಕೊಳ್ಳಲು ಪ್ರೇರಣೆಯಾಗುತ್ತದೆ.

ಈ ಸರಕಾರ ಅಧಿಕಾರಿಗಳನ್ನು ಪ್ರಾಮಾಣಿಕವಾಗಿ ಕೆಲಸ ಮಾಡಲು ಬಿಡದೆ ಇರುವುದು ಬಹಳ ದುರಂತ ಎಂದು ಯು.ಟಿ.ಖಾದರ್ ಅವರು ಪತ್ರಿಕಾ ಪ್ರಕಟನೆಯ ಮೂಲಕ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು