1:04 AM Wednesday27 - November 2024
ಬ್ರೇಕಿಂಗ್ ನ್ಯೂಸ್
ಅಡಿಕೆ ಬೆಳೆಗಾರರ ಸಮಸ್ಯೆ: ಕರಾವಳಿ ಸಂಸದರಿಂದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್… ಡಿ.8ರಂದು ಉರ್ವ ಪೊಂಪೈ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಹಬ್ಬ: ಬಿಷಪ್ ಡಾ. ಪೀಟರ್… ಕರ್ತವ್ಯಲೋಪ: ಚಿಕ್ಕಮಗಳೂರು ನಗರ ಠಾಣೆ ಇನ್ಸ್ ಪೆಕ್ಟರ್ ರೇಣುಕಾ ಪ್ರಸಾದ್ ಅಮಾನತು ರಾಜ್ಯ ಸರಕಾರದ ಜನಪರ ಕೆಲಸಕ್ಕೆ ಮತದಾರರ ಜೈ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್… ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ…

ಇತ್ತೀಚಿನ ಸುದ್ದಿ

ಬಕ್ರೀದ್ ಹಬ್ಬವನ್ನು ಸರಕಾರದ ನಿಯಮಾನುಸಾರ ಆಚರಿಸಿ: ಪೊಲೀಸ್ ಕಮೀಷನರ್ ಶಶಿಕುಮಾರ್

17/07/2021, 20:22

ಸುರತ್ಕಲ್(reporterkarnataka news): ಕೋವಿಡ್ ನ ಮಹಾಮಾರಿಯಿಂದಾಗಿ ದೇವಸ್ಥಾನ, ಚರ್ಚ್, ಮಸೀದಿಗಳಲ್ಲಿ ಸಾರ್ವಜನಿಕ ನಿರ್ಬಂಧ ಹೇರಲಾಗಿತ್ತು‌. ಆದರೆ ಲಾಕ್ ಡೌನ್ ಸಡಿಲವಾದ ಬಳಿಕ ಎಲ್ಲಕ್ಕೂ ವಿನಾಯಿತಿ ನೀಡಲಾಗಿದೆ. ತ್ಯಾಗ ಬಲಿದಾನ ಪ್ರತೀಕವಾದ ಬಕ್ರೀದ್ ಹಬ್ಬವನ್ನು ಸರಕಾರದ ನಿಯಾನುಸಾರ ಕಟ್ಟುನಿಟ್ಟಾಗಿ ಪಾಲಿಸಬೇಕೆಂಬ ಹಿತದೃಷ್ಟಿಯಿಂದ ಎಲ್ಲಾ ಪ್ರಮುಖ ಮಸೀದಿಗಳಿಗೂ ಭೇಟಿ ನೀಡಿ ಹೆಚ್ಚು ಜನ ಸೇರದೆ, ಅಗತ್ಯ ನಿಯಮಗಳನ್ನು ಪಾಲಿಸಿ ಹಬ್ಬ ಆಚರಿಸಲು ಮಸೀದಿಯ ಆಡಳಿತ ಮಂಡಳಿಯವರಿಗೆ ಮಾಹಿತಿಯನ್ನು ನೀಡಲಾಗಿದೆ ಎಂದು ಮಂಗಳೂರು ಪೊಲೀಸ್  ಕಮಿಷನರ್ ಎನ್. ಶಶಿಕುಮಾರ್ ಹೇಳಿದರು. 

ಅವರು ಕೃಷ್ಣಾಪುರ 7ನೇ ವಿಭಾಗದ ಬದ್ರಿಯಾ ಜುಮ್ಮಾ ಮಸೀದಿ, ಕೇಂದ್ರ ಜಮಾತ್ ನಲ್ಲಿ ಆಡಳಿತ ಮಂಡಳಿಯವರಿಗೆ ಸರಕಾರದ ನಿಯಮದ ಕುರಿತು ಮಾಹಿತಿ ನೀಡುತ್ತಾ ಹಬ್ಬದ ಸಂದರ್ಭದಲ್ಲಿ 5೦ ಜನರಿಗಿಂತ ಅಧಿಕ ಜನರು ಸೇರದೇ, ಸಾಮಾಜಿಕ ಅಂತರವನ್ನು ಕಾಪಾಡಬೇಕು.

ಸರಕಾರದ ನಿಯಮವನ್ನು ಪ್ರತಿಯೊಬ್ಬರು ಪಾಲಿಸತಕ್ಕದ್ದು. ಕೋವಿಡ್ ನಿಯಮಾವಳಿಗಳನ್ನು ಗಾಳಿಗೆ ತೂರದೇ ಎಲ್ಲರೂ ಪಾಲಿಸಬೇಕು.

ಅಲ್ಲದೇ ಯಾವುದೇ ಅಹಿತಕರ ಘಟನೆ ನಡೆಯದಂತೆ, ಶಾಂತಿ ಸುವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯು ಸದಾ ಸಿದ್ಧವಾಗಿದೆ‌‌ ಎಂದರು‌. 

ಡಿಸಿಪಿ ಬಿ.ಪಿ ದಿನೇಶ್ ಕುಮಾರ್, ಪಣಂಬೂರು ಎಸಿಪಿ ಮಹೇಶ್ ಕುಮಾರ್, ಸುರತ್ಕಲ್ ಠಾಣಾಧಿಕಾರಿ ಕೆ. ಚಂದ್ರಪ್ಪ, ಖತೀಬ್ ಉಮ್ಮರ್ ಫಾರೂಕು, ಬದ್ರಿಯಾ ಜುಮ್ಮಾ ಮಸೀದಿ ಕೇಂದ್ರಿಯ ಜಮಾತ್ ಅಧ್ಯಕ್ಷ ಜಲೀಲ್ ಬದ್ರಿಯಾ ಹಾಗೂ ಬದ್ರಿಯಾ ಜುಮ್ಮಾ ಮಸೀದಿ ಕೇಂದ್ರಿಯ ಜಮಾತ್ ಪದಾಧಿಕಾರಿಗಳು ಮತ್ತು ಸಮಿತಿ ಸದಸ್ಯರು‌ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು