3:17 PM Friday30 - January 2026
ಬ್ರೇಕಿಂಗ್ ನ್ಯೂಸ್
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ…

ಇತ್ತೀಚಿನ ಸುದ್ದಿ

ಬಾಳೆಬೈಲಿನ ಸಿದ್ದೇಶ್ವರ ಬೆಟ್ಟದ ಸಿದ್ದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಡಿ. 14ರಂದು 32ನೇ ವರ್ಷದ ದೀಫೋತ್ಸವ

12/12/2024, 19:25

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ಪಟ್ಟಣದ ಪ್ರಸಿದ್ಧ ಐತಿಹಾಸಿಕ ದೇಗುಲವಾಗಿರುವ ಬಾಳೆಬೈಲಿನ ಸಿದ್ದೇಶ್ವರ ಬೆಟ್ಟದಲ್ಲಿ ಡಿ.14ರಂದು 32ನೇ ವರ್ಷದ ಕಾರ್ತಿಕ ದೀಪೋತ್ಸವದ ವೈಭವದಿಂದ ನಡೆಯಲಿದೆ.
ಸುಮಾರು 1000 ಅಡಿ ಬೆಟ್ಟದ ಮೇಲಿರುವ ದೇಗುಲಕ್ಕೆ ಸಾವಿರಾರು ಭಕ್ತರು ಈ ಸಂದರ್ಭದಲ್ಲಿ ಆಗಮಿಸಲಿದ್ದು ಸಿದ್ದೇಶ್ವರ ಸ್ವಾಮಿಯ ದರ್ಶನ ಪಡೆಯಲಿದ್ದಾರೆ.
*ಪೂಜೆ, ದೀಪೋತ್ಸವ, ಅನ್ನ ಸಂತರ್ಪಣೆ:*
ಡಿ. 14ರ ಸಂಜೆ ಸ್ವಾಮಿಗೆ ರುದ್ರಾಭಿಷೇಕ, ವಿಶೇಷ
ಅಲಂಕಾರ ನಂತರ ಸಿದ್ದೇಶ್ವರ ಸ್ವಾಮಿಗೆ ಪೂಜೆ,
ದೀಪೋತ್ಸವ ನೆಡೆಯಲಿದ್ದು ನಂತರ ಬಂದಿರುವ ಎಲ್ಲಾ ಭಕ್ತಾದಿಗಳಿಗೂ ಅನ್ನ ಸಂತರ್ಪಣೆ ನೆಡೆಯಲಿದೆ.ನಂತರ ಉದಯೋನ್ಮುಖ ಕಲಾವಿದರಾದ ರಾಘವೇಂದ್ರ ಮತ್ತು ಗುರುಪ್ರಸಾದ್ ಅವರಿಂದ ಕೊಳಲು ಹಾಗೂ ಸಾಕ್ರೋಫೋನ್ ವಾದನ ನಡೆಯಲಿದೆ.
ಡಿ. 15ರ ಸಂಜೆ 6:30ಕ್ಕೆ ಮಂದಾರ್ತಿ ಮಾದೇವಿ ನೃತ್ಯ ರೂಪಕ ಕಾರ್ಯಕ್ರಮ ನಡೆಯಲಿದೆ. ನಿಸರ್ಗ ಮಾತೆಯ ಮುಡಿಯಲ್ಲಿರುವ ಸಿದ್ದೇಶ್ವರ ಬೆಟ್ಟದ ತುದಿಯವರೆಗೆ ಜಗಮಗಿಸುವ ವಿದ್ಯುತ್ ದೀಪಾಲಂಕಾರ,ಸಿಡಿ ಮದ್ದಿನ ಜೇಂಕಾರದೊಂದಿಗೆ ಸ್ವಾಮಿಯ ದೀಪೋತ್ಸವ ವೀಕ್ಷಿಸಿ ಸ್ವಾಮಿಯ ಅನುಗ್ರಹಕ್ಕೆ ಪಾತ್ರರಾಗಲು ಸಿದ್ದೇಶ್ವರ ಸಮಿತಿಯವರು ಕೋರಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು