7:49 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಬಾಳೆಹೊನ್ನೂರು: ಕಾಡಾನೆ ದಾಳಿಗೆ ಕೇವಲ 4 ದಿನಗಳಲ್ಲಿ ಮತ್ತೊಂದು ಬಲಿ; ಅರಣ್ಯ ಇಲಾಖೆ ವಿರುದ್ಧ ಪ್ರತಿಭಟನೆ

28/07/2025, 11:56

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಆನೆ ದಾಳಿಗೆ ಕಾಫಿನಾಡಲ್ಲಿ ಮತ್ತೊಂದು ಬಲಿಯಾಗಿದೆ. ಕೇವಲ 4 ದಿನಗಳ ಅಂತರದಲ್ಲಿ ಎನ್.ಆರ್.ಪುರ ತಾಲೂಕಿನಲ್ಲಿ
ಮತ್ತೊಬ್ಬರು ಪ್ರಾಣ ಕಳೆದು ಕೊಂಡಿದ್ದಾರೆ.ಬಾಳೆಹೊನ್ನೂರು ಸಮೀಪದ ಅಂಡುವಾನೆ ಗ್ರಾಮದ ಬಳಿ ಈ ಘಟನೆ ನಡೆದಿದೆ.
ಕಾಡಾನೆ ದಾಳಿಗೆ ಸುಬ್ರಾಯ ಗೌಡ (65) ಎಂಬ ಹಿರಿಯ ನಾಗರಿಕರು ಸಾವನ್ನಪ್ಪಿದ್ದಾರೆ. 4 ದಿನಗಳ ಹಿಂದೆ ಕಳೆದ ಗುರುವಾರವಾಷ್ಟೆ 25 ವರ್ಷದ ಯುವತಿ ಕವಿತಾ ಆನೆ ದಾಳಿಗೆ ಬಲಿಯಾಗಿದ್ದರು.ಇದೀಗ 4 ದಿನ ಕಳೆಯುವಷ್ಟರಲ್ಲಿ ಮತ್ತೊಬ್ಬರು ಆನೆ ದಾಳಿಗೆ ಕೊನೆಯುಸಿರೆಳೆದಿದ್ದಾರೆ.


ಮಲೆನಾಡಲ್ಲಿ ಕಾಡಾನೆ ಹಾವಾಳಿ ಮಿತಿ ಮೀರಿದೆ.
ಭಾನುವಾರ ಮೂಡಿಗೆರೆ-ಬೇಲೂರು ಗಡಿಯಲ್ಲಿ 25 ಕಾಡಾನೆಗಳು ಕಾಣಿಸಿಕೊಂಡಿದ್ದವು. ಮೇಲಿಂದ ಮೇಲೆ ಆನೆ ದಾಳಿ ಪ್ರಕರಣ ಕಂಡು ಮಲೆನಾಡಿಗರು ಕಂಗಾಲಾಗಿದ್ದಾರೆ.
ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
*ಪ್ರತಿಭಟನೆ:* ಬಾಳೆಹೊನ್ನೂರಲ್ಲಿ ಆನೆ ದಾಳಿಗೆ ವ್ಯಕ್ತಿ ಬಲಿ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ವಿರುದ್ದ ಮಲೆನಾಡಿಗರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಾಳೆಹೊನ್ನೂರಿನ ಅರಣ್ಯ ಇಲಾಖೆ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ, ಅರಣ್ಯ ಇಲಾಖೆಯ ವಿರುದ್ಧ ಧಿಕ್ಕಾರ ಕೂಗಿದರು.

ಇತ್ತೀಚಿನ ಸುದ್ದಿ

ಜಾಹೀರಾತು