7:14 PM Thursday16 - January 2025
ಬ್ರೇಕಿಂಗ್ ನ್ಯೂಸ್
ಕುರ್ಚಿಗಾಗಿ ಕಾದಾಟದಲ್ಲೇ ಎಲ್ಲರೂ ಮಗ್ನ, ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆ: ಪ್ರತಿಪಕ್ಷ… ಕೆಎಎಸ್‌ ಪೂರ್ವಭಾವಿ ಮರುಪರೀಕ್ಷೆಯ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್… ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ 6 ಬಾರಿ ಚಾಕು ಇರಿತ: ಮುಂಜಾನೆ… ಗರೋಡಿ ಜಾತ್ರೆಗೂ ಊರವರಿಗೆ ನೀರಿಲ್ಲ!: 5 ದಿನಗಳಿಂದ ನೋ ವಾಟರ್!!; ಮೇಯರ್ ಅವರೇ… ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಸಚಿವ ಜಮೀರ್‌ ಭಾವಚಿತ್ರಕ್ಕೆ ಸಗಣಿ ಬಳಿದು ಬಿಜೆಪಿ… ಕೆಚ್ಚಲು ಕೊಯ್ದ ಪ್ರಕರಣ: ದನದ ಮಾಲೀಕನ ತಾಯಿಗೆ 3 ಹಸು ಕೊಡಿಸಿದ ಸಚಿವ… 5 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ: ಆರೋಪಿಯ ತಕ್ಷಣ ಬಂಧಿಸಲು ಆಗ್ರಹಿಸಿ ಎಐಎಂಎಸ್ಎಸ್… ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ… ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ ಶಬರಿಮಲೆ: ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ಭಕ್ತರಿಗೆ ಮಕರ ಜ್ಯೋತಿ ದರ್ಶನ: ಪುನೀತರಾದ…

ಇತ್ತೀಚಿನ ಸುದ್ದಿ

ಬಳ್ಳಾಲ್ ಬಾಗ್ ಸರಣಿ ಅಪಘಾತ ಪ್ರಕರಣ:  ಗಾಯಾಳು ಮಹಿಳೆ ಗಂಭೀರ; ಆರೋಪಿ ಚಾಲಕನಿಗೆ ಪೊಲೀಸ್ ಕಸ್ಟಡಿ

11/04/2022, 22:27

ಮಂಗಳೂರು(reporterkarnataka.com): ನಗರದ ಬಲ್ಲಾಳ್‌ಬಾಗ್‌ನಲ್ಲಿ ಶನಿವಾರ ಮಧ್ಯಾಹ್ನ ನಡೆದ ಸರಣಿ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬಿಎಂಡಬ್ಲ್ಯು ಕಾರಿನ ಚಾಲಕ ಶ್ರವಣ್ ಕುಮಾರ್‌ನನ್ನು ಸಂಚಾರ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಪೊಲೀಸ್  ವಿಧಿಸಲಾಗಿದೆ.

ನ್ಯಾಯಾಲಯವು ಆರೋಪಿಗೆ ಏಪ್ರಿಲ್ 12ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿದೆ. ಜನ ಮತ್ತು ಸಂಚಾರ ದಟ್ಟಣೆಯಿಂದ ಕೂಡಿದ ಪ್ರಮುಖ ರಸ್ತೆಯಲ್ಲಿ ಅತೀ ವೇಗವಾಗಿ ಮತ್ತು ನಿರ್ಲಕ್ಷ್ಯತನದಿಂದ ಚಾಲನೆ ಮಾಡಿದ ಹಿನ್ನೆಲೆಯಲ್ಲಿ ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆ ಕಲಂ 308, 279, 337, 338ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಆರೋಪಿಯು ಗಂಭೀರವಾದ ನಿರ್ಲಕ್ಷ್ಯ ತೋರಿಸಿರುವುದರಿಂದ ಕಾನೂನು ತಜ್ಞರ ಸಲಹೆ ಪಡೆದು ಆರೋಪಿ ವಿರುದ್ಧ ಅಪರೂಪವೆಂಬಂತೆ ಕಲಂ 308ರ ಅನ್ವಯ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಆರೋಪಿ ಮದ್ಯ ಅಥವಾ ಡ್ರಗ್ಸ್ ಸೇವನೆ ಮಾಡಿದ್ದಾನೆಯೇ ಎಂಬ ಬಗ್ಗೆಯೂ ತನಿಖೆ ನಡೆಸಲು ಮಾದರಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.

ಶ್ರವಣ್ ಕುಮಾರ್ ಚಲಾಯಿಸುತ್ತಿದ್ದ ಬಿಎಂಡಬ್ಲ್ಯು ಕಾರಿನ ದಾಖಲೆಗಳು ಸಮರ್ಪಕವಾಗಿರಲಿಲ್ಲ ಎಂದು ತಿಳಿದು ಬಂದಿದೆ.ದಾಖಲೆಯ ಬಗ್ಗೆ ಕೆಲವು ಗೊಂದಲಗಳಿವೆ.ದಾಖಲೆಗಳು ಆತನ ಹೆಸರಿಗೆ ವರ್ಗಾವಣೆ ಆಗಿರಲಿಲ್ಲ ಎಂಬ ಮಾಹಿತಿ ಇದೆ.

ಈ ಬಗ್ಗೆಯೂ ತನಿಖೆ ನಡೆಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಕಾರು ಢಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಕರಂಗಲ್ಪಾಡಿಯ ಪ್ರೀತಿ ಮನೋಜ್(47)ರ ಆರೋಗ್ಯ ಸ್ಥಿತಿ ಗಂಭೀರವಾಗಿಯೇ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು