5:16 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಬಳ್ಳಾರಿ: ವಿರೋಧ ಪಕ್ಷಗಳ ಷಡ್ಯಂತ್ರ ವಿರುದ್ಧ, ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಬೃಹತ್ ಜಾಥಾ

05/08/2024, 20:11

ಗಣೇಶ ಇನಾಂದಾರ ಬಳ್ಳಾರಿ

info.reporterkarnataka@gmail.com

ವಿರೋಧ ಪಕ್ಷಗಳ ಷಡ್ಯಂತ್ರ ಮತ್ತು ರಾಜ್ಯಪಾಲರ ಅನುಮಾಸ್ಪದ ನಡೆಯನ್ನು ಖಂಡಿಸಿ, ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಪರವಾಗಿ ಇಲ್ಲಿಯ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಮತ್ತು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟಗಳ ವತಿಯಿಂದ ಮುಖ್ಯಮಂತ್ರಿ
ಪರವಾಗಿ ಬೆಂಬಲಿಸಿ ಬೃಹತ್ ಜಾಥಾ ನಡೆಯಿತು.
ಬಳ್ಳಾರಿ ನಗರದ ಗಾಂಧಿ ಭವನದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ, ಬೃಹತ್ ಜಾಥಾದಲ್ಲಿ ನಗರ ಶಾಸಕ ಭರತ್ ರೆಡ್ಡಿ, ಸಂಸದ ಈ ತುಕಾರಾಂ, ಕಂಪ್ಲಿ ಶಾಸರ ಗಣೇಶ್ ಮುಂತಾದವರು ಮಾತನಾಡಿ ರಾಜ್ಯಪಾಲರ ಕ್ರಮವನ್ನು ಖಂಡಿಸಿದರು.
ನಂತರ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಇಮಾಮ್ ಗೋಡೆಕರ್ ರಾಷ್ಟ್ರಪತಿ, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ಚಂದ್ರಚೂಡ್ ಅವರಿಗೆ ಬರೆದ ಮನವಿ ಪತ್ರವನ್ನು ಓದಿ ಜಿಲ್ಲಾಧಿಕಾರಿ ಮೂಲಕ ಸಲ್ಲಿಸಲಾಯಿತು.
ಜಾಥಾದಲ್ಲಿ  ಡಿಎಸ್ಎಸ್ ರಾಜ್ಯ ಸಂಚಾಲಕ ಎ. ಮಾನಯ್ಯ, ಶೋಷಿತ ಸಮುದಾಯಗಳ ಒಕ್ಕೂಟದ ಅಧ್ಯಕ್ಷ ಡಾ.ಗಾದಿ ಲಿಂಗನಗೌಡ, ಹುಮಾಯೂನ್ ಖಾನ್, ಮಾನಯ್ಯ, ಮುಂಡ್ರಿಗಿ ನಾಗರಾಜ್, ಸಂಗನಕಲ್ಲು ವಿಜಯಕುಮಾರ್,
ಚಿದಾನಂದಪ್ಪ ಯಾದವ್, ನರಸಪ್ಪ, ಶಿವಶಂಕರ್, ರಫೀಕ್, ಬೆಣಕಲ್ ಬಸವರಾಜಗೌಡ, ಪಿ.ಜಗನ್ನಾಥ, ಗಾದೆಪ್ಪ, ಕುಡಿತಿನಿ ರಾಮಾಂಜನೇಯ, ಯರ್ರಿಸ್ವಾಮಿ,ಧನಂಜಯ.
ಹಮಲ್,ಭಾಗವಹಿಸಿದ್ದರು.ಕೆಪಿಸಿಸಿ, ಡಿಸಿಸಿ, ಬಿಸಿಸಿ ಪದಾಧಿಕಾರಿಗಳು,
ನಿಗಮ ಮತ್ತು ಮಂಡಳಿಗಳ ಅಧ್ಯಕ್ಷರುಗಳು ಮತ್ತು ಸದಸ್ಯರು, ಮಹಾನಗರ ಪಾಲಿಕೆಯ ಸದಸ್ಯರು,ಮುಖಂಡರು ಮತ್ತು ಕಾರ್ಯಕರ್ತರು ಹಾಗೂ ಸಿದ್ದರಾಮಯ್ಯ ನವರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಪ್ರತಿಭಟನಾ ಮೆರವಣಿಗೆಯನ್ನು ಬೆಂಬಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು