2:45 AM Tuesday6 - October 2026
ಬ್ರೇಕಿಂಗ್ ನ್ಯೂಸ್
ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್

ಇತ್ತೀಚಿನ ಸುದ್ದಿ

ಬಳ್ಳಾರಿ: ದರೋಡೆಗೆ ಪೊಲೀಸ್ ಸಾಥ್; ಹೆಡ್ ಕಾನ್ ಸ್ಟೇಬಲ್ ಸೇರಿ 7 ಆರೋಪಿಗಳ ಬಂಧನ

21/09/2024, 23:07

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಕಳ್ಳರ ಜೊತೆಗೆ ಜೊತೆಗೆ ಪೊಲೀಸ್ ಒಬ್ಬರು ಸೇರಿಕೊಂಡ ದರೋಡೆ ನಡೆಸಿರುವ ಪ್ರಕರಣ ಬಳ್ಳಾರಿಯಲ್ಲಿ ನಡೆದಿದೆ.
ನಗರದ ಬ್ರೂಸ್ ಪೇಟ್ ಠಾಣೆಯ ಹೆಡ್ ಕಾನ್ಸಟೇಬಲ್ ಕಳ್ಳರ ಗುಂಪಿಗೆ ಸಾಥ್ ನೀಡಿದ್ದು, ಆತನನ್ನು ಇಲಾಖೆಯಿಂದ ಅಮಾನತು ಮಾಡಿ ಬಂಧಿಸಲಾಗಿದೆ.
ಈ ಘಟನೆಯ ಕುರಿತು ಇಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಿದ್ದಾರೆ.
ರಘು ಎನ್ನುವ ಉದ್ಯಮಿ ‌ ಸೆ.12 ರಂದು ಬೆಳಿಗಿನ ಜಾವ ಬೈಕ್ ನಲ್ಲಿ 22 ಲಕ್ಷದ 99 ಸಾವಿರ ನಗದು ಮತ್ತು 318 ಗ್ರಾಂ ಬಂಗಾರ ತೆಗೆದುಕೊಂಡು ಹೋಗುತ್ತಿದ್ದರು. ರಾಯದುರ್ಗಾ ಬಸ್ ನಿಲ್ದಾಣದ ಕಡೆ ಹೋಗುತ್ತಿರುವಾಗ ಅವರಿಗೆ ಕಣ್ಣಿಗೆ ಖಾರದ ಪುಡಿ ಎರಚಿ ಹಣ ಒಡೆವೆ ದರೋಡೆ ಮಾಡಲಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಪೊಲೀಸರ ಪ್ರಮುಖ ಆರೋಪಿ ತೌಸೀಫ್ ಜಾವೀದ್, ಪೀರ್, ದಾದಾ ಖಲಂದರ್, ಮುಸ್ತಕಾ ಅಲಿ ರೆಹಮಾನ್, ಆರೀಫ್ ನನ್ನು ಬಂಧಿಸಿದ್ದಾರೆ. ಕಳ್ಳತನಕ್ಕೆ ಸಾಥ್‌ ನೀಡಿದ ಬ್ರೂಸ್ ಪೇಟ್ ಠಾಣೆಯ ಹೆಡ್ ಕಾನ್ಸಟೇಬಲ್ ಮೆಹಬೂಬ್ ಪಾಷನನ್ನೂ ಬಂಧಿಸಲಾಗಿದೆ.
ಹೆಡ್‌ ಕಾನ್ಸಟೇಬಲ್ ಮೆಹಬೂಬ್ ಪಾಷ ಮತ್ತು ಪ್ರಮುಖ ಆರೋಪಿ ಅಸೀಫ್ ಆತ್ಮೀಯ ಗೆಳೆಯರಾಗಿದ್ದರು. ಅಸೀಫ್ ಈ ಮೊದಲು ಹೋಮ್ ಗಾರ್ಡ್ ಕೆಲಸ ಮಾಡುತ್ತಿದ್ದ. ಆ ಸಲುಗೆಯಿಂದಲೇ ದರೋಡೆ ಮಾಡುವ ಪ್ಲಾನ್ ಮಾಡಲಾಗಿತ್ತು. ಆರೋಪಗಳನ್ನು ಬಂಧಿಸಿದಾಗ ಹೆಡ್ ಕಾನ್ಸಟೇಬಲ್ ಪಾತ್ರ ಇರುವುದು ಬಯಲಿಗೆ ಬಂದಿದೆ.

ದರೋಡೆ ಹಣದಲ್ಲಿ ಹೆಡ್ ಕಾನ್ಸಟೇಬಲ್ ಮೆಹಬೂಬ್ 9 ಲಕ್ಷ ಹಣವನ್ನು ಪಡೆದಿದ್ದಾರೆ. ಪೊಲೀಸರು ಸದ್ಯ 15 ಲಕ್ಷದ 91 ಸಾವಿರ ರೂ ನಗದು ಮತ್ತು116 ಗ್ರಾಂ ಚಿನ್ನ ವಶಪಡಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು