1:57 AM Monday15 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ, ಗರ್ಭಿಣಿಯರ ಸಾವು: ತನಿಖೆಗೆ ಅಗ್ರಹಿಸಿ ಜನವಾದಿ ಮಹಿಳಾ ಸಂಘಟನೆ ಪ್ರತಿಭಟನೆ

28/11/2024, 22:26

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಬಳ್ಳಾರಿ ನಗರದ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿಯರು ಹಾಗೂ ಗರ್ಭಿಣಿಯರ ಸಾವುಗಳು ಸಂಭವಿಸಿರುವುದನ್ನು ನಗರದ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಸದಸ್ಯರು ಖಂಡಿಸಿ ಪ್ರತಿಭಟನೆ ನಡೆಸಿ ಸಾವುಗಳ ತನಿಖೆಗೆ ಒತ್ತಾಯಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಜಿಲ್ಲಾ ಆಸ್ಪತ್ರೆ ಯಲ್ಲಿ ಹೆರಿಗೆಂದು ನವಂಬರ್ 9 ರಂದು ದಾಖಲಾಗಿದ್ದು ಸಿಝರೆನಿಗೆ ಒಳಗಾಗಿದ್ದು ಲಲಿತಮ್ಮ ಮತ್ತು ನಂದಿನಿ ಎಂಬುವರು ಹೈಪಟೆಸ್ ಸಿ ರಿನಲ್ ಸೇಫ್ಟಿಕ್ ಫೇಲ್ಯುರ್ (ಮೂತ್ರಪಿಂಡ ವೈಫಲದಿಂದ ಮತ್ತು ಬಹು ಅಂಗಾಂಗ ವೈಫಲ್ಯ ದಿಂದಾಗಿ ಮತಪಟ್ಟಿದ್ದಾರೆ ಎಂದು ಅಲ್ಲಿಯ ವ್ಯದ್ಯಾಧಿಕಾರಿಗಳು ಸಬೂಬುಯನ್ನು ಹೇಳುತ್ತಿದ್ದಾರೆ. ಇದೇ ಸಮಸ್ಯೆ ಯನ್ನು ಎದುರಿಸುತ್ತಿರುವ ಇವರನ್ನು ಜಿಲ್ಲಾ ಆಸ್ಪತ್ರೆಯಿಂದ ವಿಮ್ಸಗೆ ದಾಖಲಿಸಲಾಗಿತ್ತು. ಮತ್ತು ರೋಜಾ ಎಂಬುವರು ವಿಮ್ಸನಲ್ಲಿ ಬುಧವಾರ ಕೊನೆ ಉಸಿರು ಎಳೆದಿದ್ದಾರೆ. ಈಗ ಇನ್ನೊಬ್ಬರ ಸ್ಥಿತಿ ಚಿಂತಾ ಜನಕವಾಗಿದೆ ಮತ್ತು ಇನ್ನೂ ಮೂವರನ್ನು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ಈ ಮೂಲಕ ಮೃತರ ಸಂಖ್ಯೆ ನಾಲ್ಕುಗೆ ಏರಿದೆ ಮತ್ತು ಬುಧವಾರ ವಿಮ್ಸ್ ಆಸ್ಪತ್ರೆಯಲ್ಲಿ ಇನ್ನೊಬ್ಬ ಮಹಿಳೆ ಹೆರಿಗೆಗಾಗಿ ದಾಖಲಾಗಿದ್ದ ಮಹಾಲಕ್ಷ್ಮಿ ಎಂಬವರು ಸಾವನ್ನಪ್ಪಿದ್ದಾರೆ. ಈ ಘಟನೆ ಗಳನ್ನು ಗಮನಿಸಿದರೆ ಆಸ್ಪತ್ರೆ ವ್ಯದ್ಯರು ನಿರ್ಲಕ್ಷ ಕಾಣುತ್ತದೆ. ಅವರಿಗೆ ನೀಡಿದ ಔಷಧಗಳ ಬಗ್ಗೆ ಸಮಗ್ರ ತನಿಖೆಯನ್ನು ನಡಸಬೇಕು ಎಂದು ಸಂಘಟನೆ ಆಗ್ರಹಿಸಿದೆ.
ಹೆರಿಗೆಗಾಗಿ ಸರ್ಕಾರಿ ಆಸ್ಪತ್ರೆಗಳನ್ನು ಆರಿಸಿಕೊಂಡು ಬರುವ ಗ್ರಾಮೀಣ ಪ್ರದೇಶದ ಬಡ ಮಹಿಳೆಯರಿಗೆ ಸರಿಯಾದ ಆರೋಗ್ಯ ಸೌಲಭ್ಯಗಳು ಸಿಗದೇ ಈ ರೀತಿ ಅನಾಯಾಸವಾಗಿ ಜೀವನ
ತೆರುತ್ತಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಇಂದಿಗೂ ಕೂಡ ಅವಶ್ಯಕತೆಗಳು ವೈದ್ಯಕೀಯ ಸಿಬ್ಬಂದಿ ಕೊರತೆ ಜೊತೆಗೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಬಡ ಮಹಿಳೆಯರ ಪಾಲಿಗೆ ಸರ್ಕಾರಿ ಆಸ್ಪತ್ರೆಗಳೆ ಸಾವಿನ ಕೂಪಗಳಾಗುತ್ತವೆ. ಪ್ರಸವಪೂರ್ವ ಮತ್ತು ಪ್ರಸವದ ನಂತರ ತಾಯಂದಿರ ಸಾವುಗಳಲ್ಲಿ ಹೈದರಾಬಾದ್‌ ಕರ್ನಾಟಕದ ಜಿಲ್ಲೆಗಳ ಮೊದಲು ಸ್ಥಾನದಲ್ಲಿದೆ. ಕರ್ನಾಟಕ ರಾಜ್ಯದ ಆರೋಗ್ಯ ಮಂತ್ರಿಗಳು ಈ ಘಟನೆಗಳ ಬಗ್ಗೆ ಗಮನಹರಿಸದೆ ನಿರ್ಲಕ್ಷ ವಹಿಸುತ್ತಿರುವುದನ್ನು ಜನವಾದಿ ಮಹಿಳಾ ಸಂಘಟನೆ ತೀವ್ರವಾಗಿ ಖಂಡನೆ ಮಾಡುತ್ತಿದೆ. ಸರ್ಕಾರ ಕೂಡಲೆ ಎಚ್ಚೆತ್ತುಕೊಂಡು ಬಾಣಂತಿಯರ ಸಾವಿನ ಬಗ್ಗೆಯೂ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧವಾಗಿ ಕಠಿಣವಾದ ಕ್ರಮಗಳನ್ನು ಕೈಗೊಳ್ಳಬೇಕೆಂದು ಮತ್ತು ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರವನ್ನು ಒದಗಿಸಬೇಕೆಂದು ಮತ್ತು ಸರ್ಕಾರ ಆಸ್ಪತ್ರೆಗಳಿಗೆ ಮೂಲಭೂತ ಸೌಲಭ್ಯ ಓದಿಗಿಸ ಬೇಕೆಂದು ಸಂಘಟನೆ ಒತ್ತಾಯಿಸಿದೆ.ಈ ಕುರಿತು ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರವನ್ನೂ ಸಲ್ಲಿಸಿದೆ.
*ಬೇಡಿಕೆ ಗಳು:*
1. ಬಾಣಂತಿಯರ ಸಾವಿನ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು
2. ಮೃತರ ಕುಟುಂಬಕ್ಕೆ 10 ಲಕ್ಷ ಪರಿಹಾರವನ್ನು ಒದಗಿಸಬೇಕು
3. ಸರ್ಕಾರಿ ಆಸ್ಪತ್ರೆಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು
ರಾಜ್ಯ ಸಮಿತಿ ಜಂಟಿ ಕಾರ್ಯ ದರ್ಶಿ ಜೆ . ಚಂದ್ರ ಕುಮಾರಿ ಅಧ್ಯಕ್ಷರು ತರಂಗಣಿ ಜಿಲ್ಲಾ ಸಮಿತಿ ಸದಸ್ಯರು ಕೆ ರುದ್ರಮ್ಮ , ಮಂಗಮ್ಮ , ಮಾರೆಮ್ಮ, ಟಿ ಈರಮ್ಮ , ನೀಲಮ್ಮ , ಅರುಣಾ, ಚಿಕ್ಕಮ್ಮ
ಮುಂತಾದವರು ಭಾಗವಹಿಸಿಧ್ದರು.

ಇತ್ತೀಚಿನ ಸುದ್ದಿ

ಜಾಹೀರಾತು