6:41 PM Saturday21 - December 2024
ಬ್ರೇಕಿಂಗ್ ನ್ಯೂಸ್
ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ: ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ರಾತ್ರಿಯಡೀ ಪೊಲೀಸ್ ವಾಹನದಲ್ಲಿ ಸಿ.ಟಿ. ರವಿ ಸುತ್ತಾಟ!: ಕಾರಣ ಏನು ಗೊತ್ತೇ? ಸಿ.ಟಿ.ರವಿ ಬಂಧನ: ಚಿಕ್ಕಮಗಳೂರು, ಕೊಟ್ಟಿಗೆಹಾರದಲ್ಲಿ ಬಿಜೆಪಿ ಭಾರೀ ಪ್ರತಿಭಟನೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಪಿಒಸಿ ದರ್ಜೆ: ವಿಮಾನಯಾನ ಸಚಿವ ಜತೆ ಸಂಸದ ಕ್ಯಾಪ್ಟನ್… ಮಂಗಳೂರು: ಹೊಸ ವರ್ಷದ ಆಚರಣೆಗೆ ತರಿಸಿದ್ದ 9 ಲಕ್ಷ ರೂ. ಮೌಲ್ಯದ ಡ್ರಗ್ಸ್… ಎನ್.ಆರ್.ಪುರ: ತಂದೆ- ಮಗನ ಮೇಲೆ ಕಾಡಾನೆ ದಾಳಿ; ತಂದೆ ಸಾವು; ಮಗ ತಪ್ಪಿಸಿಕೊಂಡು… ಅರಣ್ಯ ಹಕ್ಕು ಕಾಯ್ದೆಯಡಿ ಇದುವರೆಗೆ 16,665 ಪ್ರಕರಣಗಳಲ್ಲಿ ಹಕ್ಕುಪತ್ರ ವಿತರಣೆ: ಸದನದಲ್ಲಿ ಸಿಎಂ… ರಾಜ್ಯದಲ್ಲಿ ಅನಧಿಕೃತವಾಗಿ ವಾಸವಿದ್ದ 24 ಪಾಕ್, 159 ಬಾಂಗ್ಲಾದೇಶ ಮೂಲದವರ ಬಂಧನ: ಗೃಹ… ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ ವಿಧೇಯಕ 2024ಕ್ಕೆ ವಿಧಾನ ಪರಿಷತ್ತಿನಲ್ಲಿ ಅಂಗೀಕಾರ ಗೃಹಲಕ್ಷ್ಮೀಯರ ಜತೆ ಸುವರ್ಣ ವಿಧಾನಸೌಧಕ್ಕೆ ಆಗಮಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್: ಫಲಾನುಭವಿಗಳು ಫುಲ್…

ಇತ್ತೀಚಿನ ಸುದ್ದಿ

ಬಳ್ಳಾರಿಯಲ್ಲಿ ಸೆ.6ರಂದು ಗೋ ಬ್ಯಾಕ್ ಗವರ್ನರ್ ಚಳವಳಿ: ಕಪ್ಪುಪಟ್ಟಿ, ಬಾವುಟ ಪ್ರದರ್ಶನ

04/09/2024, 13:12

ಗಣೇಶ ಇನಾಂದಾರ ಬಳ್ಳಾರಿ

info.reporterkarnataka@gmail.com

ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರ ಪಕ್ಷಪಾತಿ ಧೋರಣೆ ಖಂಡಿಸಿ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಜಿಲ್ಲಾ ಸಮಿತಿಯ ವತಿಯಿಂದ ಸೆ.6ರಂದು ಬಳ್ಳಾರಿಯಲ್ಲಿ ಗೋ ಬ್ಯಾಕ್ ಗವರ್ನರ್ ಚಳವಳಿಯ ಅಂಗವಾಗಿ ಕಪ್ಪು ಪಟ್ಟಿ, ಬಾವುಟ ಪ್ರದರ್ಶನ ನಡೆಸಲಾಗುವುದು ಎಂದು ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಬಳ್ಳಾರಿ ಜಿಲ್ಲಾ ಸಮಿತಿಯ ಅಧ್ಯಕ್ಷ ಡಾ.ಗಾದಿ ಲಿಂಗನಗೌಡ ಹೇಳಿದರು.
ಬಳ್ಳಾರಿ ಜಿಲ್ಲಾ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಟಿಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಘಟಿಕೋತ್ಸವವು ಸೆ.6ರಂದು ನಡೆಯಲಿದೆ. ಅಂದು ರಾಜ್ಯಪಾಲರ ವಿರುದ್ಧ ಪ್ರತಿಭಟನೆ ನಡೆಸಲಿದ್ದೇವೆ ಎಂದು ಹೇಳಿದರು.
ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಪಕ್ಷಪಾತಿ ಧೋರಣೆ ಅನುಸರಿಸುತ್ತಿದ್ದಾರೆ. ಅವರ ನಡೆಯಿಂದಾಗಿ ಪ್ರಜಾಪ್ರಭುತ್ವದ ಕಗ್ಗೊಲೆ ನಡೆಯುತ್ತಿದೆ ಎಂದು ಹೇಳಿದ ಅವರು, ರಾಜ್ಯಪಾಲರು ಕೇಂದ್ರದ ಏಜೆಂಟ್ ರೀತಿಯಲ್ಲಿ ವರ್ತಿಸದೇ ಪ್ರಜಾಪ್ರಭುತ್ವದ ಆಶಯ ಎತ್ತಿ ಹಿಡಿಯಬೇಕೆಂದು ಒತ್ತಾಯಿಸಿ ಕಪ್ಪು ಪಟ್ಟಿ ಪ್ರದರ್ಶನ ನಡೆಸಲಿದ್ದೇವೆ ಎಂದು ಹೇಳಿದರು.
ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ನ್ಯಾಯಾಲಯದ ಆದೇಶ ಏನೇ ಬಂದರೂ ಸ್ವಾಗತಿಸುತ್ತೇವೆ, ಆದರೆ ನಮ್ಮ ಪ್ರತಿಭಟನೆಯ ಉದ್ಧೇಶ ಇರುವುದು ರಾಜ್ಯಪಾಲರ ಧೋರಣೆಯ ವಿರುದ್ಧ ಎಂದು ಹೇಳಿದ ಡಾ.ಗಾದಿಲಿಂಗನಗೌಡ, ರಾಜ್ಯಪಾಲರ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ರಾಜಕೀಯ ಪ್ರೇರಿತ ಎಂದು ಹೇಳಿದರು.
ಸುದ್ದಿಗೋಷ್ಟಿಯಲ್ಲಿ ಹಾಜರಿದ್ದು ಮಾತನಾಡಿದ ಸಮಿತಿಯ ಗೌರವಾಧ್ಯಕ್ಷ ಎ.ಮಾನಯ್ಯ; ಮಾಜಿ ಸಿಎಂ ಕುಮಾರಸ್ವಾಮಿ ಅವರು ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡು, ಕಾಂಗ್ರೆಸ್ ನಾಯಕರ ಮೇಲೆ ಅನಗತ್ಯ ಆರೋಪ ಮಾಡುವ ಕುತಂತ್ರ ನಡೆಸಿದ್ದಾರೆ ಎಂದು ಆರೋಪಿಸಿದರು.
ಕೇಂದ್ರ ಸರ್ಕಾರ ದೇಶದ ವಿವಿಧ ರಾಜ್ಯಗಳಲ್ಲಿರುವ ಬಿಜೆಪಿಯೇತರ ರಾಜ್ಯ ಸರ್ಕಾರಗಳನ್ನು ಅಸ್ಥಿರಗೊಳಿಸುವ ಪ್ರಯತ್ನ ನಡೆದಿದೆ, ಕೇಂದ್ರ ಸರ್ಕಾರದ ಈ ಪ್ರಜಾಪ್ರಭುತ್ವ ವಿರೋಧಿ ನಿಲುವುಗಳನ್ನು ಜನರಿಗೆ ತಿಳಿಸುವ ಪ್ರಯತ್ನ ನಮ್ಮ ಹೋರಾಟದ ಮೂಲಕ ಮಾಡುತ್ತಿದ್ದೇವೆ ಎಂದು ಮತ್ತೊಬ್ಬ ಗೌರವಾಧ್ಯಕ್ಷ ವಿ.ಎಸ್.ಶಿವಶಂಕರ್ ಹೇಳಿದರು.
ಅನುಮತಿಗಾಗಿ ತಮ್ಮ ಕಚೇರಿಗೆ ಬಂದ ಕಡತಗಳ ಪೈಕಿ ರಾಜ್ಯಪಾಲರು ಮುಡಾ ಹಗರಣದ ವಿಚಾರಕ್ಕೆ ತಕ್ಷಣ ಸ್ಪಂದಿಸಿದರು, ಆದರೆ ಅದೇ ರೀತಿ ಬಿಜೆಪಿಯ ಹಲವು ನಾಯಕರ ಕಡತಗಳು ಬಾಕಿ ಇರುವುದು ರಾಜ್ಯಪಾಲರ ಪಕ್ಷಪಾತಿತನವನ್ನು ತೋರಿಸುತ್ತದೆ ಎಂದು ಶಿವಶಂಕರ್ ಹೇಳಿದರು.
ಮಹಾನಗರ ಪಾಲಿಕೆಯ ಸದಸ್ಯ ಪಿ.ಗಾದೆಪ್ಪ, ಕಾಂಗ್ರೆಸ್ ಮುಖಂಡ ಪಿ.ಜಗನ್ನಾಥ, ಮೊಹಮ್ಮದ್ ರಫೀಕ್, ಕೆ.ಯರ್ರಿಸ್ವಾಮಿ, ಕೆರಕೋಡಪ್ಪ, ಗಾದಿಲಿಂಗಪ್ಪ, ಕಪ್ಪಗಲ್ಲು ಓಂಕಾರೆಪ್ಪ, ಚಂದ್ರು, ರಾಮು ನಾಯ್ಕ್, ಜೋಗಿನ್ ವಿಜಯ್, ಎಲ್.ಮಾರೆಣ್ಣ, ಕೆ.ಮಲ್ಲಿಕಾರ್ಜುನ, ಧನಂಜಯ ಹಮಲ್, ಸಂಗನಕಲ್ಲು ವಿಜಯಕುಮಾರ್, ಬಿ.ಎಂ.ಪಾಟೀಲ್, ಇಮಾಮ್ ಗೋಡೆಕಾರ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು