9:53 AM Friday10 - July 2026
ಬ್ರೇಕಿಂಗ್ ನ್ಯೂಸ್
ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:…

ಇತ್ತೀಚಿನ ಸುದ್ದಿ

ಬ್ಯಾಲೆಟ್ ಇರಲಿ , ಇವಿಎಂ ಇರಲಿ ಫಲಿತಾಂಶ ಮಾತ್ರ ಬಿಜೆಪಿ ಪರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

25/12/2025, 10:23

ಸ್ಥಳೀಯ ಸಂಸ್ಥೆಯಲ್ಲಿ ಬಿಜೆಪಿಗೆ ಜನರ ನಿರ್ಣಾಯಕ ಆದೇಶ; ಪ್ರಲ್ಹಾದ ಜೋಶಿ

ನವದೆಹಲಿ(reporterkarnataka.com): ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಬೆಂಗಳೂರು ಸೇರಿದಂತೆ ವಿವಿಧೆಡೆ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಬಾರಿಸಿರುವುದು ಪ್ರಧಾನಿ ಮೋದಿ ಅವರ ದೂರದೃಷ್ಟಿಯ ನಾಯಕತ್ವಕ್ಕೆ ಸಿಕ್ಕ ಜನಾದೇಶ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಬಣ್ಣಿಸಿದ್ದಾರೆ.
ಚುನಾವಣೆಗೆ ಬ್ಯಾಲೆಟ್ ಪೇಪರ್ ಆಗಲಿ ಅಥವಾ ಇವಿಎಂ ಬಳಕೆಯಾಗಲಿ ಫಲಿತಾಂಶ ಮಾತ್ರ ಒಂದೇ ಆಗಿರುತ್ತದೆ. ಜನಾದೇಶ ಬಿಜೆಪಿ ಪರವೇ ಇರುತ್ತದೆ ಎಂದು ಸಚಿವರು ಕಾಂಗ್ರೆಸ್ ಗೆ ತಿರುಗೇಟು ಕೊಟ್ಟಿದ್ದಾರೆ.
ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಕ್ಲೀನ್ ಸ್ವೀಪ್ ಮಾಡಿದೆ. ಚುನಾವಣೆ ನಡೆದ ಎಲ್ಲಾ 5 ಪಟ್ಟಣ ಪಂಚಾಯತಿಗಳು ಮತ್ತು 2 ವಾರ್ಡ್ ಉಪಚುನಾವಣೆಗಳಲ್ಲಿ ಅಧಿಕ ಅಂತರದಿಂದ ಗೆಲವು ಸಾಧಿಸಿದೆ. ಇದು ಜನರ ಮನಸ್ಥಿತಿಯನ್ನು ಪ್ರತಿಬಿಂಬಿಸಿದೆ ಎಂದು ಜೋಶಿ ಪ್ರತಿಕ್ರಿಯಿಸಿದ್ದಾರೆ.
ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್​​ಗೆ ಭಾರಿ ಮುಖಭಂಗವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಜಪೆ, ಕಿನ್ನಿಗೋಳಿ ಪ.ಪಂ., ಉತ್ತರ ಕನ್ನಡದ ಮಂಕಿ ಪ.ಪಂ. ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಗಳಲ್ಲಿ ಬಿಜೆಪಿ ಬಹುಮತ ಪಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರಸಭೆ ಮತ್ತು ರಾಯಚೂರು ಜಿಲ್ಲೆ ತುರವಿಹಾಳ ಪ.ಪಂ.ಗಳ ಒಂದೊಂದು ವಾರ್ಡ್ ಉಪಚುನಾವಣೆಯಲ್ಲಿ ಸಹ ಬಿಜೆಪಿ ಗೆಲುವಿನ ನಗೆ ಬೀರಿರುವುದು ಜನರು ಬಿಜೆಪಿ ಆಡಳಿತದ ನಿರೀಕ್ಷಿಯಲ್ಲಿರುವುದಕ್ಕೆ ಸಾಕ್ಷಿಯಾಗಿದೆ ಎಂದು ಪ್ರಲ್ಹಾದ ಜೋಶಿ ಅಭಿಪ್ರಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು