4:10 AM Saturday17 - January 2026
ಬ್ರೇಕಿಂಗ್ ನ್ಯೂಸ್
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ…

ಇತ್ತೀಚಿನ ಸುದ್ದಿ

ಬಾಳೂರು: ಯುವ ಕೃಷಿಕ, ಬಿಜೆಪಿ ಕಾರ್ಯಕರ್ತ ಎಚ್.ಆರ್. ಚೇತನ್ ಹೃದಯಾಘಾತಕ್ಕೆ ಬಲಿ

17/01/2025, 21:00

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲ್ಲೂಕಿನ ಬಾಳೂರು ಹೋಬಳಿ ಹಾದಿಹೋಣಿ ಹೊಸ್ಮನೆಮಕ್ಕಿ ಗ್ರಾಮದ ಕೃಷಿಕ, ಬಿಜೆಪಿ ಕಾರ್ಯಕರ್ತ ಎಚ್.ಆರ್. ಚೇತನ್ (35) ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.
ಚೇತನ್ ಅವರು ಗುರುವಾರ ಬೆಳಿಗ್ಗೆ ಮನೆಯೆದುರು ಕಾಫಿ ಕಣದಲ್ಲಿದ್ಧಾಗ ಹೃದಯಾಘಾತಕ್ಕೋಳಗಾಗಿ ಇದ್ದಕ್ಕಿದಂತೆ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಬಾಳೆಹೊನ್ನೂರು ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ ಅವರು ಆಸ್ಪತ್ರೆಗೆ ಹೋಗುವ ದಾರಿಮಧ್ಯದಲ್ಲಿಯೇ ಪ್ರಾಣ ಬಿಟ್ಟಿದ್ದಾರೆ.
ಚೇತನ್ ಅವರು ಕೂವೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ರಮೇಶ್ ಗೌಡ ಅವರ ಏಕೈಕ ಪುತ್ರ. ಚೇತನ್ ಪತ್ನಿ, ಇಬ್ಬರು ಇಬ್ಬರ ಚಿಕ್ಕ ಮಕ್ಕಳು, ತಂದೆ ತಾಯಿ, ಶತಾಯುಷಿಯಾಗಿರುವ ಅಜ್ಜಿ, ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಅವರ ಅಕಾಲಿಕ ನಿಧನದಿಂದ ಕುಟುಂಬದ ಸದಸ್ಯರು ತೀವ್ರ ಆಘಾತಕ್ಕೆ ಒಳಗಾಗಿದ್ದಾರೆ.
ಚೇತನ್ ಅವರು ಬಿಜೆಪಿ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿದ್ದರು, ಸಾರ್ವಜನಿಕ ಕಾರ್ಯಗಳಲ್ಲಿ ಸಕ್ರಿಯರಾಗಿದ್ದರು. ಸ್ನೇಹಜೀವಿಯಾಗಿದ್ದ ಚೇತನ್ ಬಾಳಿಬದುಕಬೇಕಾದ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ. ಅವರ ಸಾವಿನ ಸುದ್ದಿ ಕೇಳಿ ಸ್ನೇಹಿತರು, ಗ್ರಾಮಸ್ಥರು ತೀವ್ರ ಸಂತಾಪ ಸೂಚಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಚಿಕ್ಕ ವಯಸ್ಸಿನಲ್ಲಿಯೇ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು