11:59 AM Friday30 - January 2026
ಬ್ರೇಕಿಂಗ್ ನ್ಯೂಸ್
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ…

ಇತ್ತೀಚಿನ ಸುದ್ದಿ

ಬಾಳೂರು: ನ.20ರಂದು ಪ್ಯಾರಾಲಂಪಿಕ್ ಚಿನ್ನ ಗೆದ್ದ ರಕ್ಷಿತಾರಾಜುಗೆ ಸನ್ಮಾನ, ಅಭಿನಂದನಾ ಸಮಾರಂಭ

18/11/2023, 17:56

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬಾಳೂರು ಹೋಬಳಿಯಲ್ಲಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಮಿಂಚಿದ ಕ್ರೀಡಾಪಟುಗಳಿಗೆ ಬಾಳೂರು ನಾಗರೀಕರ ವೇದಿಕೆ ಹಾಗೂ ಗ್ರಾಮ ಪಂಚಾಯಿತಿ ವತಿಯಿಂದ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಬಾಳೂರು ಹೋಬಳಿಯ ನಾಗರೀಕರ ವೇದಿಕೆಯ ಅಧ್ಯಕ್ಷ ಸೋಮೇಶ್ ಮರ್ಕಲ್ ಹೇಳಿದರು.

ಅವರು ಬಾಳೂರಿನಲ್ಲಿ ಸುದ್ದಿ ಗೋಷ್ಟಿಯಲ್ಲಿ ಮಾತನಾಡಿದ ಅವದು, ಚೀನಾದ ಹ್ಯಾಂಗ್ ಝ್ ನಲ್ಲಿ ಏಷ್ಯನ್ ಪ್ಯಾರಾಲಂಪಿಕ್ ಕ್ರೀಡಾಕೂಟದಲ್ಲಿ ಬಾಳೂರು ಗ್ರಾಮದ ಹೆಸರನ್ನು ಚಿನ್ನದ ಪದಕ ಪಡೆಯುವ ಮೂಲಕ ರಾಷ್ಟ್ರ ಮಟ್ಟದಲ್ಲಿ ಗುರುತಿಸಿದ ಸ್ಥಳೀಯ ಕ್ರೀಡಾಪಟು ರಕ್ಷಿತಾರಾಜು ಹಾಗೂ ಅವರ ಕೋಚ್ ರಾಹುಲ್ ಬಾಲಕೃಷ್ಣ ಅವರನ್ನು ಸನ್ಮಾನಿಸಲಾಗುವುದು. ನಂತರ ಬಾಳೂರು ಹೋಬಳಿಯಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಅಭಿನಂದಿಸಿ ಸನ್ಮಾನಿಸಲಾಗುವುದು. ಇದೇ ತಿಂಗಳ 20ರಂದು ಬೆಳಗ್ಗೆ 10 ಗಂಟೆಗೆ ರಕ್ಷಿತಾರಾಜು ಅವರನ್ನು ಕಲ್ಲಕ್ಕಿ ಸರ್ಕಾರಿ ಶಾಲೆಯಿಂದ ಬಾಳೂರು ದರ್ಬಾರ್ ಪೇಟೆವರೆಗೆ ಮೆರವಣಿಗೆ ನಡೆಸಲಾಗುವುದು. ನಂತರ 11 ಗಂಟೆಗೆ ದರ್ಬಾರ್ ಪೇಟೆ ಅಂಗನವಾಡಿ ಬಳಿ ಸಭಾ ಕಾರ್ಯಕ್ರಮವನ್ನು ಶಾಸಕರಾದ ನಯನಾ ಮೋಟಮ್ಮ ಉದ್ಘಾಟಿಸಲಿದ್ದಾರೆ. ವಿಧಾನ ಪರಿಷತ್ ಉಪ ಸಭಾಪತಿಗಳಾದ ಎಂ.ಕೆ.ಪ್ರಾಣೇಶ್, ಬಾಳೂರು ಹೋಬಳಿಯ ಎಲ್ಲಾ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಗ್ರಾಮಸ್ಥರು, ಕ್ರೀಡಾ ಸಾಧಕರು ಪಾಲ್ಗೊಳ್ಳಲಿದ್ದಾರೆ ಎಂದು ಅವರು ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು