12:37 PM Thursday19 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

24 ಗಂಟೆಯಲ್ಲಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಬಣಕಲ್ ಪೊಲೀಸರು: 16 ಲಕ್ಷ ಮೌಲ್ಯದ ಚಿನ್ನಾಭರಣ ವಶ

19/03/2026, 12:30

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯಲ್ಲಿ ನಡೆದ ಷಮನೆ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳಲ್ಲೇ ಭೇದಿಸಿದ್ದಾರೆ.
ಮಾರ್ಚ್ 17ರಂದು ಸುರೇಶ್ (54) ಅವರು ಬಣಕಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ತಮ್ಮ ಪತ್ನಿ ಕೆಲಸಕ್ಕೆ ತೆರಳಿದ ವೇಳೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಕಬೋರ್ಡ್‌ನಲ್ಲಿಟ್ಟಿದ್ದ ಚಿನ್ನಾಭರಣಗಳನ್ನು ಕಳ್ಳತನ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ದೂರು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.
ಪೊಲೀಸ್ ಅಧೀಕ್ಷಕರಾದ ಡಾ. ಜಿತೇಂದ್ರಕುಮಾರ್ ಅವರ ಮಾರ್ಗದರ್ಶನದಲ್ಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಮತ್ತು ಉಪಾಧೀಕ್ಷಕರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿ ತನಿಖೆ ನಡೆಸಲಾಯಿತು.


ತನಿಖೆಯ ವೇಳೆ ಆರೋಪಿಯಾದ ಹರೀಶ್ (30)ನನ್ನು ಬಂಧಿಸಿ, ಆತನಿಂದ ಅಂದಾಜು ₹16 ಲಕ್ಷ ಮೌಲ್ಯದ 144 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬಣಕಲ್ ಪೊಲೀಸ್ ಠಾಣೆಯ ಸಿಬ್ಬಂದಿಗಳ ತ್ವರಿತ ಕಾರ್ಯಾಚರಣೆಗೆ ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು