6:36 PM Thursday26 - March 2026
ಬ್ರೇಕಿಂಗ್ ನ್ಯೂಸ್
ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್…

ಇತ್ತೀಚಿನ ಸುದ್ದಿ

ಬಾನಂಗಳದಲ್ಲಿ ಮೇಘ ನರ್ತನ; ಆಳ್ವಾಸ್ ವಿರಾಸತ್ ನಲ್ಲಿ ಕಥಕ್ ಸಿಂಚನ: ರಾಮ- ಕೃಷ್ಣರ ನೃತ್ಯಾರಾಧನೆ

13/12/2024, 13:39

ವಿದ್ಯಾಗಿಗಿರಿ
ಮೂಡಬಿದಿರೆ(reporterkarnataka.com):
ಆಗಸದಲ್ಲಿ ಆಗಾಗ್ಗೆ ಮೋಡ ಕವಿದ ವಾತಾವರಣ ಕಂಡರೆ, ಇತ್ತ ‘ಆಳ್ವಾಸ್ ವಿರಾಸತ್’ನ ವೇದಿಕೆಯಲ್ಲಿ ಕಥಕ್ ನೃತ್ಯ ವರ್ಷಧಾರೆ. ಪ್ರೇಕ್ಷಕರೆಲ್ಲ ನೃತ್ಯ ರೂಪಕದ ಸಿಂಚನದಲ್ಲಿ ಮಿಂದೆದ್ದರು.
ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ 30ನೇ ವರ್ಷದ ಆಳ್ವಾಸ್ ವಿರಾಸತ್‍ನ ಮೂರನೇ ದಿನದ ಗಾಯನದ ಬಳಿಕ ಮೂಡಿ ಬಂದ ಸಾಂಸ್ಕೃತಿಕ ವೈಭವ.
ಆಶಿಂಬಂಧು ಚಟರ್ಜಿ ನಿರ್ದೇಶನದಲ್ಲಿ ಪ್ರಸ್ತುತಗೊಂಡ ಭಾರತೀಯ ಶಾಸ್ತ್ರೀಯ ನೃತ್ಯ ಪ್ರಕಾರ ಕಥಕ್ ‘ವರ್ಷಧಾರೆ’ಯನ್ನೇ ಸುರಿಸಿತು. ತುಂತುರು ಮಳೆಯನ್ನು ಸಂಭ್ರಮಿಸುವ ಋತುವಿನ ದರ್ಶನ ನೀಡಿತು.
ಉತ್ತರದ ಕಥಕ್ ಬಳಿಕ ನೃತ್ಯ ಲೋಕವು ದ್ವೀಪ ರಾಷ್ಟ್ರ ಶ್ರೀಲಂಕಾ ಸಂಸ್ಕೃತಿಗೆ ಹೆಜ್ಜೆ ಇಟ್ಟಿತು.
ಅಖಿಲ ಪರಿಮಳನ್ ನಿರ್ದೇಶನದ ಶ್ರೀಲಂಕಾದ ಕ್ಯಾಂಡಿಯನ್ ನೃತ್ಯ, ‘ಭೂಮಿ’ ದ್ವೀಪ ದೇಶದ ಚಮತ್ಕಾರದ ಶಕ್ತಿಯೆಡೆಗೆ ಕೊಂಡೊಯ್ಯಿತು. ತಿರುಗುವ ಚಕ್ರ, ಹಾರುವ ಬೆಂಕಿ ಉಂಡೆ ಇತ್ಯಾದಿಗಳು ಸೊಬಗೇರಿಸಿದವು.
ವಿಷ್ಣು, ಸಮನ್, ಕಾತರಂಗಂ, ಪಟ್ಟಿನಿ, ಕಾಳಿ ಮತ್ತು ಸುನಿಯಂ ಶ್ರೀಲಂಕಾದ ಪ್ರಮುಖ ದೇವ-ದೈವಗಳಾಗಿವೆ. ಅವರ ಆರಾಧನಾ ವಿಧಾನವಾಗಿ ನೃತ್ಯ ಬೆಳೆದು ಬಂದಿದೆ. ಶ್ರೀಲಂಕಾದ ಪ್ರಮುಖ ಪಟ್ಟಣವಾಗಿದ್ದ ‘ಕ್ಯಾಂಡಿ’ಯಲ್ಲಿ ಬೆಳೆದು ಬಂದ ನೃತ್ಯ ಪ್ರಕಾರವೇ ಶ್ರೀಲಂಕಾದ ನೃತ್ಯಪ್ರಕಾರವಾಗಿ ರೂಪುಗೊಂಡಿದೆ.
ಶ್ರೀಲಂಕಾ ಭೂಮಿ ನೃತ್ಯ ರೂಪಕವು ಉದರಾಟ ನಾಟ್ಯ, ಪಹದಾ ರತ ನಾಟ್ಯ, ಸಬರಗಮುವಂ ನಾಟ್ಯಗಳನ್ನು ಒಳಗೊಂಡಿದೆ.
ಬಳಿಕ ಯುವಜನತೆಯ ಮನಸೂರೆಗೊಳಿಸಿದ ಸೃಜನಶೀಲ ರೂಪಕ ನೃತ್ಯ. ‘ಘೂಮರ್ ಘೂಮರ್ ಘೂಮೇ…’ ಹಾಗೂ ‘ಚುಪಪೇ ಘೋರಿ ಚಿಂಗಾರಿ’ ಹಾಡಿಗೆ ಕುಣಿತದ ಆರ್ಭಟ. ಗುಜರಾತಿ, ರಾಜಸ್ತಾನಿ ಸೇರಿದಂತೆ ಉತ್ತರದ ಕುಣಿತಗಳ ಮಿಶ್ರಣದ ಜೊತೆ ಮಣಿಪುರದ ಕಸರತ್ತು ಸಾಥ್ ನೀಡಿತು.
ಪಾಶ್ಚಾತ್ಯ, ಭಾರತೀಯ, ಕಸರತ್ತುಗಳ ಮಿಶ್ರಣದಂತೆ ಸಂಕಲಿಸಿದ ಸೃಜನಾತ್ಮಕ ನೃತ್ಯ ಹೊಸ ಲೋಕಕ್ಕೆ ಕೊಂಡೊಯ್ಯಿತು.
ಆಳ್ವಾಸ್ ಸಾಂಸ್ಕೃತಿಕ ತಂಡದ ಕಲಾ ವೈಭವದ ಅನಂತರ ಉಡುಪಿಯ ಕೊಡವೂರು ನೃತ್ಯ ನಿಕೇತನ ತಂಡವು ‘ಕಾಂತಾರ’ ಖ್ಯಾತಿಯ ಮಾನಸಿ ಸುಧೀರ್ ನೇತೃತ್ವದಲ್ಲಿ ಪುಷ್ಪಾಂಜಲಿ’ ನೃತ್ಯ ಪ್ರಸ್ತುತ ಪಡಿಸಿತು.


ವಿದ್ವಾನ್ ಸುಧೀರ್ ರಾವ್ ಹಾಗೂ ಮಾನಸಿ ಸುಧೀರ್ ಸಂಯೋಜನೆಯಲ್ಲಿ ನೃತ್ಯ ಮೂಡಿಬಂತು. ಬಳಿಕ ಸುರಭಿ ಕೃಷ್ಣನಾಗಿ ‘ಕಾಳಿಂಗ ಮರ್ಧನ’ ಪ್ರಸ್ತುತ ಪಡಿಸಿದರು.
ಬೆಂಗಳೂರಿನ ಚಿಗುರು ನೃತ್ಯಾಲಯ ಸರಿತಾ ಕೊಠಾರಿ ನಿರ್ದೇಶನದಲ್ಲಿ ‘ಗಣಪತಿ ತಾಳಂ’ ಹಾಗೂ ‘ ಅಭಂಗ’ಭರತನಾಟ್ಯ ರೂಪಕ ಪ್ರಸ್ತುತ ಪಡಿಸಿದರು. ಮನಮೋಹನ ರಾಧಾರಮಣನ ಆರಾಧನೆ ನಡೆಯಿತು. ನಾಟ್ಯ ಪಾಂಡುರಂಗ ನರ್ತನ ಮನಸೆಳೆಯಿತು.
ಮಂಗಳೂರಿನ ಸನಾತನ ನಾಟ್ಯಾಲಯದ ವಿದ್ಯಾರ್ಥಿಗಳು ವಿದ್ವಾನ್ ಶಾರದಾ ಮಣಿಶೇಖರ್ ಹಾಗೂ ಶ್ರೀಲತಾ ನಾಗರಾಜ್ ನಿರ್ದೇಶನದಲ್ಲಿ ‘ ಶ್ರೀ ರಾಮ ತೋಡಯ್ಯ ಮಂಗಳಂ’ ಪ್ರಸ್ತುತ ಪಡಿಸಿದರು.
ಕುಂದಾಪುರದ ನೃತ್ಯ ವಸಂತ ನಾಟ್ಯಾಲಯದ ಪ್ರವಿತಾ ಅಶೋಕ್ ನಿರ್ದೇಶನದಲ್ಲಿ ರಾಧಾಕೃಷ್ಣ, ಗೀತೋಪದೇಶ ಬಿಂಬಿಸುವ ‘ಗೋಕುಲ ವೃಂದಾವನ’ ಪ್ರಸ್ತುತ ಪಡಿಸಿದರು. ‘ಗೋಕುಲ ಬೃಂದಾವನ ಸುಂದರಂ ಗೋಪಾಲಕೃಷ್ಣಂ ಭಜೆ’ ಸ್ತುತಿಗೆ ನೃತ್ಯ ಮಾಡಿದರು.
ಮಂಗಳೂರಿನ ಗಾನ ನೃತ್ಯ ಅಕಾಡೆಮಿಯ ವಿದ್ಯಾಶ್ರೀ ರಾಧಾಕೃಷ್ಣ ನಿರ್ದೇಶನದಲ್ಲಿ ‘ ಭಜನ್ ನಾಟ್ಯ ಸೌರಭ’ ಪ್ರಸ್ತುತ ಪಡಿಸಿದರು. ರಾಮ – ಕೃಷ್ಣ ರ ಭಜನೆ ‘ಜಯ ಜಯ ರಾಮ ಹರೇ ಕೃಷ್ಣ ಹರೇ…’ ಮೊಳಗಿತು.
ನಿತೀಶ್ ಮಾರ್ನಾಡು ಕಾರ್ಯಕ್ರಮ ನಿರೂಫಿಸಿದರು.
ಇದಕ್ಕೂ ಮೊದಲು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ನೇತೃತ್ವದಲ್ಲಿ ಅತಿಥಿಗಳಾದ ಮಂಗಳೂರು ಭಾರತ್ ಇನ್‍ಫ್ರಾಟೆಕ್‍ನ ಮುಸ್ತಾಫ ಎಸ್.ಎಂ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಗಣೇಶ್ ಕಾರ್ಣಿಕ್, ಉದ್ಯಮಿ ಶ್ರೀಪತಿ ಭಟ್ ದೀಪ ಪ್ರಜ್ವಲನ ಮಾಡಿದರು.
ಕಾರ್ಯಕ್ರಮದಲ್ಲಿ ಉಡುಪಿ ಪೇಜಾವರ ಮಠದ ವಿಶ್ವ ಪ್ರಸನ್ನ, ಮೂಡುಬಿದಿರೆ ಜೈನಮಠದ ಭಟ್ಟಾರಕ ಪಂಡಿತಾಚಾರ್ಯವರ್ಯ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು