9:38 PM Thursday26 - March 2026
ಬ್ರೇಕಿಂಗ್ ನ್ಯೂಸ್
ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್…

ಇತ್ತೀಚಿನ ಸುದ್ದಿ

ಬಾಣಂತಿಯರ ಸಾವು: ಬಳ್ಳಾರಿ ಜಿಲ್ಲಾಸ್ಪತ್ರೆ ವಿಮ್ಸ್‌ಗೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ಭೇಟಿ ​

07/12/2024, 15:54

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmal.com

ಬಾಣಂತಿಯರ ಸರಣಿ ಸಾವಿನ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲಾಸ್ಪತ್ರೆ ಮತ್ತು ವಿಮ್ಸ್‌ಗೆ ಶನಿವಾರ ದಿಢೀರ್ ಭೇಟಿ ನೀಡಿರುವ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ಆರಂಭಿಸಿದ್ದಾರೆ.
ಲೋಕಾಯುಕ್ತ ಬಳ್ಳಾರಿ ಜಿಲ್ಲಾ ಎಸ್‌ಪಿ ಸಿದ್ದರಾಜು ನೇತೃತ್ವದ 25ಕ್ಕೂ ಹೆಚ್ಚಿನ ಸಿಬ್ಬಂದಿಯ ತಂಡ ಎರಡು ಭಾಗಗಳಾಗಿ ಜಿಲ್ಲಾಸ್ಪತ್ರೆ, ವಿಮ್ಸ್‌ಗೆ ತೆರಳಿವೆ.
ಬಳ್ಳಾರಿಯಲ್ಲಿ ಆಗಿರುವ ಬಾಣಂತಿಯರ ಸರಣಿ ಸಾವು ಸಂಬಂಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿದೆ. ಅದರ ಭಾಗವಾಗಿ ಇಂದು ಪರಿಶೀಲನೆ ನಡೆಯುತ್ತಿರುವುದಾಗಿ ಮಾಹಿತಿ ಲಭ್ಯವಾಗಿದೆ.
ಪರಿಶೀಲನೆಯಲ್ಲಿ ಹೊಸಪೇಟೆ ಜಿಲ್ಲೆಯ ಲೋಕಾಯುಕ್ತ ಸಿಬ್ಬಂದಿಯೂ ಇದ್ದಾರೆ. ಆಸ್ಪತ್ರೆಗಳ ಹೆರಿಗೆ, ಐಸಿಯು, ಔಷಧ ಉಗ್ರಾಣಗಳನ್ನು ಅಧಿಕಾರಿಗಳು ಜಾಲಾಡುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು