3:51 AM Saturday15 - November 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್

ಇತ್ತೀಚಿನ ಸುದ್ದಿ

ಬಾಣಂತಿಯರ ಸಾವು ಸರಕಾರಿ ಪ್ರಾಯೋಜಿತ ಕೊಲೆ: ಬಿಜೆಪಿ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಮಂಜುಳಾ ಆರೋಪ

07/12/2024, 15:50

ಗಣೇಶ್ ಇನಾಂದರ ಬಳ್ಳಾರಿ

info.reporterkarnataka@gmail.com

ಬಳ್ಳಾರಿಯಲ್ಲಿ ಸಂಭವಿಸಿರುವ ಬಾಣಂತಿಯರ ಸರಣಿ ಸಾವುಗಳು ಸರ್ಕಾರಿ ಪ್ರಾಯೋಜಿತ ಕೊಲೆ ಎಂದು ಬಿಜೆಪಿ ಮಹಿಳಾ ಮೋರ್ಚಾದ ರಾಜ್ಯ ಘಟಕದ ಅಧ್ಯಕ್ಷೆ ಸಿ. ಮಂಜುಳಾ ಆರೋಪಿಸಿದ್ದಾರೆ.
ಜಿಲ್ಲಾಸ್ಪತ್ರೆಗೆ ಶನಿವಾರ ಭೇಟಿ ನೀಡಿದ್ದ ಬಿಜೆಪಿ ನಿಯೋಗದ ನೇತೃತ್ವ ವಹಿಸಿದ್ದ ಅವರು, ಆಸ್ಪತ್ರೆ ಪರಿಶೀಲನೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು.
‘ಆರೋಗ್ಯವಾಗಿದ್ದ ಬಾಣಂತಿಯರೇ ಇಲ್ಲಿ ಮೃತಪಟ್ಟಿದ್ದಾರೆ. ಇದೊಂದು ಸರ್ಕಾರಿ ಪ್ರಾಯೋಜಿತ ಕೊಲೆಯಾಗಿದೆ. ಈ ಸರ್ಕಾರಕ್ಕೆ ಜನರ ಆರೋಗ್ಯದ ಬಗ್ಗೆ ಸ್ವಲ್ಪವೂ‌ ಕಾಳಜಿ ಇಲ್ಲ. ಅಧಿಕಾರ ಬಡಿದಾಟದಲ್ಲೇ ಸರ್ಕಾರ ಮುಳುಗಿ ಹೋಗಿದೆ. ಆರೋಗ್ಯ ಸಚಿವರಾಗಲಿ, ಜಿಲ್ಲಾ ಉಸ್ತುವಾರಿ ಸಚಿವರಾಗಲಿ ಇದುವರೆಗೂ ಇಲ್ಲಿಗೆ ಭೇಟಿ ನೀಡುವ ಸೌಜನ್ಯ ತೋರಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮೃತ ಬಾಣಂತಿಯರ ಕುಟುಂಬಗಳಿಗೆ ಕನಿಷ್ಠ ಸಾಂತ್ವನ ಹೇಳುವ ಕೆಲಸವನ್ನು ಸರ್ಕಾರ ಮಾಡಿಲ್ಲ. ಈ ಸರ್ಕಾರಕ್ಕೆ ಸ್ವಲ್ಪವೂ ವಿವೇಕವಿಲ್ಲ. ರಾಜ್ಯದ ಆರೋಗ್ಯ ಇಲಾಖೆಯಲ್ಲಿ ಏನು ನಡೆಯುತ್ತಿದೆ ಎನ್ನುವ ಪರಿಜ್ಞಾನವೂ ಇಲ್ಲ. ಜಿಲ್ಲಾ, ತಾಲೂಕು, ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಏನಾಗುತ್ತಿದೆ ಎಂದು ತಿಳಿದುಕೊಳ್ಳುವ ವ್ಯವದಾನವೂ ಈ ಸರಕಾರಕ್ಕೆ ಇಲ್ಲ’ ಎಂದು ಆರೋಪಿಸಿದರು.
ಮೃತ ಬಾಣಂತಿಯರ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಬೇಕು. ತಬ್ಬಲಿಯಾದ ಶಿಶುಗಳ ಪೋಷಣೆಗೆ ಸರ್ಕಾರ ಸಹಾಯ ಮಾಡಬೇಕು ಎಂದು ಇದೇ ವೇಳೆ ಅವರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು