8:05 PM Thursday26 - March 2026
ಬ್ರೇಕಿಂಗ್ ನ್ಯೂಸ್
ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್…

ಇತ್ತೀಚಿನ ಸುದ್ದಿ

ಬಾಣಂತಿಯರ ಸರಣಿ ಸಾವು: ಬಳ್ಳಾರಿ ಜಿಲ್ಲಾಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ಚೌಧರಿ ಭೇಟಿ; ಪರಿಶೀಲನೆ

12/12/2024, 19:34

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ ಐವರು ಬಾಣಂತಿಯರ ಸಾವು ಪ್ರಕರಣ ಹಿನ್ನಲೆಯಲ್ಲಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ. ನಾಗಲಕ್ಷ್ಮೀ ಚೌಧರಿ ಅವರು ಬಳ್ಳಾರಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜಿಲ್ಲಾ ಆಸ್ಪತ್ರೆಯ ಹೆರಿಗೆ ವಿಭಾಗ, ಹೆರಿಗೆ ಕೋಣೆಗಳ ಸಮುಚ್ಚಯ, ಶಸ್ತ್ರಚಿಕಿತ್ಸೆ ಕೊಠಡಿ, ಬಾಣಂತಿಯರಿಗೆ ಮೂಲ ಸೌಕರ್ಯಗಳಾದ ಕುಡಿಯುವ ನೀರು, ಶೌಚಾಲಯ, ಬಿಸಿ ನೀರಿನ ವ್ಯವಸ್ಥೆ ಮತ್ತು ಆರೈಕೆ ಕ್ರಮಗಳ ಕುರಿತು ಚರ್ಚೆ ನಡೆಸಿ, ಮಾಹಿತಿ ಪಡೆದುಕೊಂಡರು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಜಿಲ್ಲಾಸ್ಪತ್ರೆಯಲ್ಲಿ ಈ ತರಹದ ಘಟನೆ ಸಂಭವಿಸಲಿರಲಿಲ್ಲ, ಬಾಣಂತಿಯರ ಸಾವಿಗೆ ಐವಿ ರಿಂಗರ್ ದ್ರಾವಣ ಕೂಡ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿರುವ ಹಿನ್ನಲೆಯಲ್ಲಿ ಆಗ ಸರಬರಾಜು ಆದ ಎಲ್ಲಾ ಐವಿ ರಿಂಗರ್ ಲ್ಯಾಕ್ಟೇಟ್ ದ್ರಾವಣ ಬ್ಯಾಚ್‌ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಬಳಿಕ ಪಾಸಿಟಿವ್ ವರದಿ ಬಂದಿದೆ. ಈಗಾಗಲೇ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು, ಐವಿ ದ್ರಾವಣ ಔಷಧ ಸರಬರಾಜು ಸ್ಥಗಿತಗೊಳಿಸಿದ್ದಾರೆ ಎಂದು ತಿಳಿಸಿದರು.
ಸರ್ಕಾರವು ಮೃತ ಹೊಂದಿದ ಬಾಣಂತಿಯರಿಗೆ ಘೋಷಿಸಿದ ಪರಿಹಾರದಲ್ಲಿ 2 ಲಕ್ಷದಿಂದ 5 ಲಕ್ಷದವರೆಗೆ ಹೆಚ್ಚಿಸಲಾಗಿದೆ. ಮಕ್ಕಳ ಬೆಳವಣಿಗೆಗೆ ಹಾಗೂ ಅವರ ವಿದ್ಯಾಭ್ಯಾಸ ಸೇರಿದಂತೆ ಸಂಪೂರ್ಣ ಜವಾಬ್ದಾರಿ ಸರ್ಕಾರ ವಹಿಸಬೇಕು. ಈ ಕುರಿತು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು ಎಂದರು.
ಜನಸಾಮಾನ್ಯರ ಆರೋಗ್ಯದ ಕಾಳಜಿಗೆ ಹೆಚ್ಚಿನ ಮುತುವರ್ಜಿ ವಹಿಸಬೇಕು. ಗುಣಮಟ್ಟದ ಔಷಧಿ ಸರಬರಾಜು ಮಾಡಬೇಕು. ಈ ಕುರಿತು ಸರ್ಕಾರದ ಗಮನ ಸೆಳೆಯಲಾಗುವುದು ಎಂದರು.
ಜಿಲ್ಲಾ ಆಸ್ಪತ್ರೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ಶಸ್ತ್ರ ಚಿಕಿತ್ಸಾ ಕೇಂದ್ರಗಳಲ್ಲಿ ಶುಚಿತ್ವ ಕಾಯ್ದುಕೊಳ್ಳಬೇಕು ಎಂದು ವೈದ್ಯಾಧಿಕಾರಿಗಳಿಗೆ ನಿರ್ದೇಶನ ನೀಡಿದರು.


ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ., ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ, ಜಿಲ್ಲಾ ಶಸ್ತçಚಿಕಿತ್ಸಕ ಡಾ.ಎನ್.ಬಸರೆಡ್ಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು, ಬಿಮ್ಸ್ ನಿರ್ದೇಶಕ ಡಾ.ಗಂಗಾಧರ ಗೌಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯ್ ಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಲಾಲಪ್ಪ, ಬಳ್ಳಾರಿ ತಾಲ್ಲೂಕು ತಹಶೀಲ್ದಾರ ಗುರುರಾಜ ಸೇರಿದಂತೆ ಜಿಲ್ಲಾಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳು, ಶುಶೂಶ್ರಕರು ಹಾಗೂ ಇತರರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು