8:00 PM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಬಾಣಂತಿಯರು, ನವಜಾತ ಶಿಶುಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

13/12/2024, 18:26

* *ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಅವರೊಂದಿಗೆ ಬಿಮ್ಸ್ ಗೆ ಭೇಟಿ ನೀಡಿದ ಸಚಿವರು*

* *ವಿಭಾಗದ ಮುಖ್ಯಸ್ಥರೊಂದಿಗೆ ಸಭೆ ನಡೆಸಿದ ಸಚಿದ್ವಯರು*

ಬೆಳಗಾವಿ(reporterkarnataka.com): ಬಾಣಂತಿ – ನವಜಾತ ಶಿಶುಗಳ ಬಗ್ಗೆ ಹೆಚ್ಚಿನ ನಿಗಾವಹಿಸಿ, ಜಿಲ್ಲಾ ಆಸ್ಪತ್ರೆಯಲ್ಲಿ (ಬಿಮ್ಸ್) ಯಾವುದೇ ಕುಂದು ಕೊರತೆಗಳು ಕಂಡು ಬಂದಲ್ಲಿ ಸರ್ಕಾರದ ಗಮನಕ್ಕೆ ತರಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಜೊತೆಗೂಡಿ ಶುಕ್ರವಾರ ಬೆಳಗಾವಿಯ ಜಿಲ್ಲಾ ಆಸ್ಪತ್ರೆಗಿಂದು (ಬಿಮ್ಸ್) ಭೇಟಿ ನೀಡಿದ ಸಚಿವರು, ಈ ವೇಳೆ ವಿವಿಧ ಘಟಕಗಳಿಗೆ ಭೇಟಿ ನೀಡಿ ವೈದ್ಯರಿಂದ ಮಾಹಿತಿ ಪಡೆದುಕೊಂಡರು. ಬಳಿಕ ನೂತನ ಕಟ್ಟಡಕ್ಕೂ ಸಚಿವರು ಭೇಟಿ ನೀಡಿದರು.
ಬಳಿಕ ಎಲ್ಲಾ ವಿಭಾಗದ ಮುಖ್ಯಸ್ಥರೊಂದಿಗೆ ಸಭೆ ನಡೆಸಿ, ಕುಂದು‌ ಕೊರತೆಗಳ ಬಗ್ಗೆ ವಿಚಾರಿಸಿದರು. ಬಾಣಂತಿಯರು ಹಾಗೂ ಹಸಿಗೂಸುಗಳ ಬಗ್ಗೆ ಹೆಚ್ಚಿನ ನಿಗಾವಹಿಸಿ, ಬಿಮ್ಸ್ ಗೆ ಉತ್ತಮ ಹೆಸರು ತರಲು ಎಲ್ಲರೂ ಪ್ರಯತ್ನಿಸಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು‌.
ಇದೇ ವೇಳೆ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಮೂರು ದಿನದ ನವಜಾತ ಹೆಣ್ಣು ಮಗು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಆರೂವರೆ ತಿಂಗಳ ಗರ್ಭಿಣಿ ಕಾಲು ಜಾರಿ ಬಿದ್ದಿದ್ದಾರೆ. ತೀವ್ರ ನೋವಿನ ಕಾರಣಕ್ಕೆ ಬೈಲಹೊಂಗಲ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೆಚ್ಚಿನ ಚಿಕಿತ್ಸೆಗೆ ಬೆಳಗಾವಿ ಬಿಮ್ಸ್‌ಗೆ ಕರೆ ತರಲಾಗಿತ್ತು. ಮಗುವಿನ ಅಂಗಾಂಗ ಬೆಳವಣಿಗೆ ಆಗಿರಲಿಲ್ಲ, ಆದರೂ ಸಮರ್ಪಕ ಚಿಕಿತ್ಸೆ ನೀಡಲಾಗಿತ್ತು. ನವಜಾತ ಶಿಶುವನ್ನು ಆಸ್ಪತ್ರೆಯಲ್ಲಿ ಬಿಟ್ಟು ತಾಯಿ ಪರಾರಿ ಆಗಿದ್ದು ದುರ್ದೈವ. ಈಗಾಗಲೇ ಎಫ್ಐಆರ್ ದಾಖಲಾಗಿದೆ, ತನಿಖೆ ನಡೆಯುತ್ತಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಈ ವೇಳೆ ಬೆಳಗಾವಿ ಉತ್ತರ ಕ್ಷೇತ್ರದ ಶಾಸಕರಾದ ರಾಜು ಸೇಠ್, ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಮೊಹಮ್ಮದ್ ಮೊಸೀನ್, ಬಿಮ್ಸ್ ನಿರ್ದೇಶಕರಾದ ಅಶೋಕ್ ಶೆಟ್ಟಿ, ಅಧೀಕ್ಷಕರಾದ ಡಾ.ವೀರಣ್ಣ ಪಲ್ಲೆದ್, ಮುಖ್ಯ ಆಡಳಿತಾಧಿಕಾರಿ ಸಿದ್ದು ಹುಲ್ಲಳ್ಳಿ, ಜಿಲ್ಲಾ ಸರ್ಜನ್ ಡಾ.ವಿಠಲ್ ಶಿಂಧೆ, ಶಿಲ್ಪಾ ವಾಲಿ, ಡಾ.ಸರೋಜ ತಗಡಿ, ಡಾ.ಉಮೇಶ್ ಕುಲಕರ್ಣಿ ‌ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು