3:46 PM Tuesday30 - December 2025
ಬ್ರೇಕಿಂಗ್ ನ್ಯೂಸ್
ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ

ಇತ್ತೀಚಿನ ಸುದ್ದಿ

ಭಂಡಾರಿಬೆಟ್ಟು: 18ರಂದು ಬಂಟ್ವಾಳ ಭಂಡಾರಿ ಸಮಾಜದ ಕ್ರೀಡೋತ್ಸವ

17/02/2024, 03:44

ಬಂಟ್ವಾಳ(reporterkarnataka.com): ಭಂಡಾರಿ ಸಮಾಜ ಸಂಘ ಭಂಡಾರಿ ಮತ್ತು ಯುವ ವೇದಿಕೆ ಹಾಗೂ ಭಂಡಾರಿ ಮಹಿಳಾ ವೇದಿಕೆಯ ನೇತೃತ್ವದಲ್ಲಿ ಭಂಡಾರಿ ಸಮಾಜ ಬಾಂಧವರ ಕ್ರೀಡೋತ್ಸವವು 18 ಭಾನುವಾರದಂದು ಬಂಟ್ವಾಳ ಭಂಡಾರಿಬೆಟ್ಟು ಎಸ್. ವಿ. ಎಸ್. ಶಾಲಾ ಮೈದಾನದಲ್ಲಿ ಸಂಘದ ಅಧ್ಯಕ್ಷ ಗೋಪಾಲ ಭಂಡಾರಿ ಪುಣ್ಕೇದಡಿ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಪತ್ರಕರ್ತ ಕಿರಣ್ ಸರಪಾಡಿ ಕ್ರೀಡೋತ್ಸವವನ್ನು ಉದ್ಘಾಟಿಸಲಿದ್ದಾರೆ. ಸಂಘದ ಗೌರವ ಅಧ್ಯಕ್ಷ ದಿವಾಕರ ಶಂಭೂರು, ಅಮಾಟಡಿ ಗ್ರಾಮ ಪಂಚಾಯತ್ ಸದಸ್ಯ ಬಿ.ಬಾಬು ಭಂಡಾರಿ,ಬಿ.ಎಸ್.ಎನ್.ಎಲ್. ನ ನಿವೃತ್ತ ಅಧೀಕ್ಷಕಿ ಯಶೋಧಾ ಎನ್. ಭಂಡಾರಿ, ಬಾಳ್ತಿಲ ಗ್ರಾಮ ಪಂಚಾಯತ್ ಆಡಳಿತ ಅಧಿಕಾರಿ ಯಶ್ವಿತಾ ಮಂಜುನಾಥ್, ಬಂಟ್ವಾಳ ಪುರಸಭೆ ಸದ್ಯಸ್ಯೆ ಶಶಿಕಲಾ ಪ್ರಭಾಕರ್ ಭಂಡಾರಿ,ಯುವ ವೇದಿಕೆ ಅಧ್ಯಕ್ಷ ರಮೇಶ್ ಭಂಡಾರಿ ಮೈರನಪಾದೆ,ಭಂಡಾರಿ ಮಹಿಳಾ ವೇದಿಕೆ ಅಧ್ಯಕ್ಷೆ ಜಯಶ್ರೀ ಸುರೇಶ್ ತುಂಬೆ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಅಂದು ಸಾಯಂಕಾಲ ನಡೆಯುವ ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ ಉಪನ್ಯಾಸಕ ಸುರೇಶ್ ನಂದೊಟ್ಟು, ಪ್ರವೀಣ್ ಕುಮಾರ್ ಪಡೀಲ್ ಮಂಗಳೂರು ಪ್ರತಿಮಾ ಮನೋಹರ್ ಹಿರ್ಣಿ ಸಿವಿಲ್ ಇಂಜಿನಿಯರ್ ರಾಜೇಶ್ ಬಂಟ್ವಾಳ ಆಗಮಿಸಲಿದ್ದಾರೆ ಎಂಬುದಾಗಿ ಸಂಘದ ಕಾರ್ಯದರ್ಶಿ ಜಯರಾಮ್ ಭಂಡಾರಿ ನಿತ್ಯಾನಂದ ನಗರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು