1:27 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಬಂಡೇ ಬಸಾಪುರ ತಾಂಡದ ದೇವನಾಯ್ಕ ನಿಧನ: ಸಿಐಟಿಯು ಸಂತಾಪ

22/08/2021, 21:13

ಕೂಡ್ಲಗಿ(reporterkarnataka.com): ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಶಿವಪುರ ಗ್ರಾಪಂ ವ್ಯ‍‍ಾಪ್ತಿ ಬಂಡೇ ಬಸಾಪುರ ತಾಂಡ ವಾಸಿ, ಗಾರೆ ಕೆಲಸ ಮಾಡುತಿದ್ದ ದೇವನಾಯ್ಕ (45) ಅವರು ಶನಿವಾರ ರಾತ್ರಿ ನಿಧನರಾಗಿದ್ದಾರೆ.

ಅವರು ಬಹುದಿನಗಳಿಂದ ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದರು.
ಅವರಿಗೆ ಪತ್ನಿ ಹಾಗು ಓರ್ವ ಪುತ್ರಿ,ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಕಾರ್ಮಿಕರಿಂದ ಸಂತಾಪ:- ಕಟ್ಟಡ ಕಾರ್ಮಿಕ ದೇವನಾಯ್ಕ ನಿಧನಕ್ಕೆ ಸಿಐಟಿಯು ತಾಲೂಕು ಮುಖಂಡರಾದ ಗುನ್ನಳ್ಳಿ ರಾಘವೇಂದ್ರ,

ಕಟ್ಟಡ ಕಾರ್ಮಿಕ ಸಂಘದ ಅಧ್ಯಕ್ಷ ಕೆ.ಕೆ.ಹಟ್ಟಿ ಕೊತ್ಲಪ್ಪ ಹಾಗೂ ನಬಿಸಾಬ್ ಅವರು ಮೃತರ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ.

ದೇವನಾಯ್ಕ ಅವರ ಅಗಲಿಕೆಗೆ ತಾಲೂಕಿನ ಕಟ್ಟಡ ಕಾರ್ಮಿಕರ ಸಂಘದ ಪದಾಧಿಕಾರಿಗಳು, ಬಂಜಾರ ಸಮುದಾಯ ಸೇರಿದಂತೆ ವಿವಿದ ಸಮುದಾಯದ ನಾಗರೀಕರು ಹಾಗೂ ತಾಂಡಗಳಲ್ಲಿನ ಸಂಘಟನೆಗಳು ಸೇರಿದಂತೆ ವಿವಿದ ಸಂಘ ಸಂಸ್ಥೆಗಳ ಪದಾಧಿಕಾರಿಗಳು  ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ.

ಮೃತರ  ಅಂತ್ಯಕ್ರಿಯೆ ಭಾನುವಾರ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು