2:34 AM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಬಂಡಿಪೋರಾದಲ್ಲಿ ಎನ್‌ಕೌಂಟರ್ : ಇಬ್ಬರು ಉಗ್ರರನ್ನು ಸದೆಬಡಿದ ಭಾರತೀಯ ಸೈನಿಕರು

24/07/2021, 11:49

ಬಂಡಿಪೋರಾ(ReporterKarnataka.com)

ಜಮ್ಮು ಕಾಶ್ಮೀರದ ಬಂಡಿಪೋರಾದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ.

ಬಂಡಿಪೋರಾದ ಸುಂಬ್ಲಾರ್ ಎಂಬ ಪ್ರದೇಶದಲ್ಲಿ ಉಗ್ರರು ಅವಿತಿರುವ ಬಗ್ಗೆ ಖಚಿತ ಮಾಹಿತಿಯ ಮೇಲೆ ಭದ್ರತಾ ಪಡೆಗಳು ಕಾರ್ಯಾಚರಣೆ ಪ್ರಾರಂಭಿಸಿತ್ತು. ಈ ವೇಳೆ ಉಗ್ರರು ಏಕಾಏಕಿ ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ಕೂಡಲೇ ಸ್ಥಳವನ್ನು ಸುತ್ತುವರೆದ ಭದ್ರತಾ ಪಡೆಗಳು ಉಗ್ರರ ದಾಳಿಗೆ ದಿಟ್ಟ ಉತ್ತರವನ್ನು ನೀಡಿದ್ದಾರೆ. ಭದ್ರತಾ ಪಡೆಗಳು ಮೊದಲಿಗೆ ಶರಣಾಗುವ ಅವಕಾಶವನ್ನು ನೀಡಿದ್ದಾರೆ. ಆದರೆ, ಉಗ್ರರು ಈ ಅವಕಾಶವನ್ನು ನಿರಾಕರಿಸಿದ್ದಾರೆ. ಬಳಿಕ ಎನ್ಕೌಂಟರ್ ನಡೆಸಿ ಅಡಗಿದ್ದ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆಂದು ತಿಳಿದುಬಂದಿದೆ. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ವರದಿಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು