7:16 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಬಂಡೀಪುರ: ಕಾಡಾನೆ ಜತೆ ಸೆಲ್ಫಿಗೆ ಹೋಗಿ ದಾಳಿಗೊಳಗಾಗಿದ್ದ ವ್ಯಕ್ತಿಗೆ 25 ಸಾವಿರ ರೂ. ದಂಡ!

12/08/2025, 14:16

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnata@gmail.com

ಬಂಡೀಪುರ ರಸ್ತೆಯಲ್ಲಿ ಕಾಡಾನೆ ಜತೆ ಸೆಲ್ಫೀ ತೆಗೆಯಲು ಹೋಗಿ ದಾಳಿಗೆ ಒಳಗಾದ ವ್ಯಕ್ತಿ ಯಾರೆಂಬುದು ಪತ್ತೆಯಾಗಿದೆ. ಆರಂಭದಲ್ಲಿ ಆತ ಕೇರಳ ಮೂಲದವರು ಎಂದು ಭಾವಿಸಲಾಗಿತ್ತು. ಆದರೆ, ಆ ವ್ಯಕ್ತಿ ನಂಜನಗೂಡು ಮೂಲದ ಬಸವರಾಜು ಎಂಬುದು ಗೊತ್ತಾಗಿದೆ. ಘಟನೆ ಬಳಿಕ ಅರಣ್ಯ ಇಲಾಖೆ ಕಣ್ತಪ್ಪಿಸಿ, ಮೊಬೈಲ್ ಸ್ವಿಚ್ ಆಫ್ ಮಾಡಿ ಕೇರಳ ಕಡೆಗೆ ಹೋಗಿ ಬಂದಿದ್ದರು. ಆದರೆ, ನಂತರ ಅವರನ್ನು ಪತ್ತೆ ಮಾಡಿದ ಅರಣ್ಯ ಇಲಾಖೆ, 25 ಸಾವಿರ ರೂ. ದಂಡ ವಿಧಿಸಿದೆ. ಅಲ್ಲದೆ, ಅವರಿಂದಲೇ ಸಾರ್ವಜನಿಕರಿಗೆ ಎಚ್ಚರಿಕೆಯ ಸಂದೇಶ ಸಾರುವ ವಿಡಿಯೋ ಮಾಡಿಸಿ ಬಿಡುಗಡೆ ಮಾಡಿಸಿದೆ.
ಕಾಡಾನೆ ದಾಳಿಗೊಳಗಾದ ಬಸವರಾಜು ಹೇಳಿದ್ದೇನು?
‘ನಾನು ಬಂಕಾಪುರದ ದೇವಸ್ಥಾನಕ್ಕೆ ಹೋಗಿದ್ದೆ. ವಾಪಸ್ ಬರುವಾಗ ಮೋಜು ಮಸ್ತಿಗೆ ಕಾಡಾನೆ ಜತೆ ಸೆಲ್ಫೀ ತೆಗೆಯಲು ಮುಂದಾಗಿದ್ದೆ. ಈ ವೇಳೆ ನನ್ನ ಮೇಲೆ ಕಾಡಾನೆ ದಾಳಿ ನಡೆಸಿತು. ನನ್ನ ಪ್ರಾಣ ಉಳಿದಿದ್ದೇ ಹೆಚ್ಚು. ಯಾರು ಕೂಡ ಕಾಡು ಪ್ರಾಣಿಗಳ ಜೊತೆ ಚೆಲ್ಲಾಟ ಆಡಬೇಡಿ. ಇನ್ಮುಂದೆ ಯಾರೂ ಕೂಡ ಅರಣ್ಯ ಪ್ರದೇಶದಲ್ಲಿ ವಾಹನ ನಿಲ್ಲಿಸಬೇಡಿ, ಯಾರು ಕೂಡ ದುಸ್ಸಾಹಸಕ್ಕೆ ಕೈ ಹಾಕಬೇಡಿ. ನನ್ನ ವಿರುದ್ಧ ಅರಣ್ಯ ಇಲಾಖೆ ಕ್ರಮ ಕೈಗೊಂಡು ದಂಡ ವಿಧಿಸಿದೆ. ಅದಕ್ಕಿಂತಲೂ ಜೀವ ಉಳಿದಿದ್ದು ಮುಖ್ಯ’ ಎಂದು ಬಸವರಾಜು ವಿಡಿಯೋ ಸಂದೇಶದಲ್ಲಿ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು