1:09 AM Monday22 - September 2025
ಬ್ರೇಕಿಂಗ್ ನ್ಯೂಸ್
ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್…

ಇತ್ತೀಚಿನ ಸುದ್ದಿ

ಬಂಧಿಸಲು ಬಂದ ಸಿಸಿಬಿ ಸಿಬ್ಬಂದಿಗಳ ಮೇಲೆ ಹಲ್ಲೆ ಯತ್ನ: ಪೊಲೀಸರಿಂದ ಕಾಲಿಗೆ ಫೈಯರಿಂಗ್; ಹಲವು ಪ್ರಕರಣಗಳ ರೂವಾರಿ ಆಕಾಶಭವನ ಶರಣ್ ಸೆರೆ

10/01/2024, 09:10

ಮಂಗಳೂರು(reporterkarnataka.com): ಸುಳ್ಯ ಕೆವಿಜಿ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ರಾಮಕೃಷ್ಣ ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿ ತಲೆ ಮರೆಸಿಕೊಂಡಿದ್ದ ಶರಣ್ ಆಕಾಶಭವನ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು ನಗರದಲ್ಲಿ ಕೊಲೆ, ಕೊಲೆಯತ್ನ, ದರೋಡೆ, ಅತ್ಯಾಚಾರ, ಹಫ್ತಾ ವಸೂಲಿ ಹಾಗೂ ಫೋಕ್ಸೋ ಸೇರಿದಂತೆ ಸುಮಾರು 25 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿದ್ದು ಹಲವು ಪ್ರಕರಣಗಳಲ್ಲಿ ದಸ್ತಗಿರಿ ವಾರಂಟ್ ಇರುವ ಆರೋಪಿತನಾದ ರೋಹಿದಾಸ್ ಕೆ ಅಲಿಯಾಸ್ ಶರಣ್ ಅಲಿಯಾಸ್
ಶರಣ್ ಪೂಜಾರಿ ಅಲಿಯಾಸ್ ಶರಣ್ ಆಕಾಶಭವನ ಎಂಬಾತನ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರು ಪಡಿಸುವ ಬಗ್ಗೆ ಪೊಲೀಸ್ ಆಯುಕ್ತರು ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ರವರ ನೇತೃತ್ವದಲ್ಲಿ ಸಿಸಿಬಿ ಘಟಕದ ತಂಡ ರಚಿಸಿರುತ್ತಾರೆ. ಅದರಂತೆ ಆರೋಪಿ ಪತ್ತೆ ಬಗ್ಗೆ ಕಾರ್ಯಾಚರಣೆಗಿಳಿದ ಸಿಸಿಬಿ ಘಟಕದ ಪಿಎಸ್ಐ ಸುದೀಪ್ ಮತ್ತು ಪಿಎಸ್ಐ ಶರಣಪ್ಪ ಹಾಗೂ ಸಿಬ್ಬಂದಿಗಳ ತಂಡ ಸುಮಾರು 20 ದಿನಗಳಿಂದ ಕಾರ್ಯಾಚರಣೆ ನಡೆಸಿರುತ್ತದೆ. ಆರೋಪಿಗೆ ಆಶ್ರಯ ನೀಡಿದ ಹಾಗೂ ಆತನಿಗೆ ತಪ್ಪಿಸಿಕೊಳ್ಳಲು ಸಹಕರಿಸಿದ ಆರೋಪದ ಮೇಲೆ ಕೋಡಿಕಲ್ ನ ಶೀಲಾ ಎಂಬವರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿ ಆಶ್ರಯ ನೀಡಿರುವ ಬಗ್ಗೆ ಕಾವೂರು ಪೊಲೀಸ್ ಠಾಣಾ ಹಾಗೂ ಉಡುಪಿಯ ಸಂತೆಕಟ್ಟೆಯ ಶರತ್ ಭಂಡಾರಿ ಹಾಗೂ ಆತನ ಪತ್ನಿ ಮಯೂರಿ ಭಂಡಾರಿ ಎಂಬವರ ವಿರುದ್ಧ ಕಾವೂರು ಪೊಲೀಸ್ ಠಾಣಾ ಮತ್ತು ಧನಂಜಯ ಅಲಿಯಾಸ್ ಧನು ಹಾಗೂ ಚೇತನ್ ಅಲಿಯಾಸ್ ಬುಳ್ಳ ಎಂಬವರ ವಿರುದ್ಧ ಕಾವೂರು ಪೊಲೀಸ್ ಠಾಣೆ ಹಾಗೂ ಇನ್ನೋರ್ವ ಆಶ್ರಯ ನೀಡಿದ ಆರೋಪಿ ಶಿವ ಕರ್ಬಿಸ್ಥಾನ ಎಂಬಾತನ ಮೇಲೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಮತ್ತು ಶಾನು ಶೆಟ್ಟಿ ಎಂಬಾತನ ವಿರುದ್ಧ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತವೆ. ಆರೋಪಿಗೆ ಆಶ್ರಯ ನೀಡಿದ ಬಗ್ಗೆ ಮಂಗಳೂರಿನ ಬೇರೆ ಬೇರೆ ಠಾಣೆಗಳಲ್ಲಿ 7 ಜನರ ಮೇಲೆ ಒಟ್ಟು 5 ಪ್ರಕರಣಗಳು ದಾಖಲಾಗಿ ತನಿಖೆ ನಡೆಯುತ್ತಿದೆ. ಈ ಮಧ್ಯೆ ಜನವರಿ 2ರಂದು ಆರೋಪಿಯು ಮಂಗಳೂರಿನಲ್ಲಿ ಬಿಳಿ ಬಣ್ಣದ ಸ್ವಿಪ್ಟ್ ಕಾರಿನಲ್ಲಿ ತಿರುಗಾಡುತ್ತಿದ್ದಾನೆ ಎಂಬ ಮಾಹಿತಿ ಮೇರೆಗೆ ಆರೋಪಿಯ ಪತ್ತೆಯ ಬಗ್ಗೆ ತೆರಳಿದ್ದ ಪಿಎಸ್ಐ ಸುದೀಪ್ ಹಾಗೂ ತಂಡದವರ ಮೇಲೆ ಮೇರಿಹಿಲ್ ಬಳಿ ಕಾರನ್ನು ಹಾಯಿಸಿ ಕೊಲೆ ಮಾಡಲು ಪ್ರಯತ್ನ ಪಟ್ಟಿರುತ್ತಾನೆ. ಈ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ
ಪ್ರಕರಣ ದಾಖಲಾಗಿದೆ.
ಮಂಗಳವಾರದಂದು ಆರೋಪಿ
ಶರಣ್ ಆಕಾಶಭವನ ಎಂಬಾತನು ಉಡುಪಿಯಲ್ಲಿದ್ದಾನೆಂದು ದೊರೆತ ಖಚಿತ ಮಾಹಿತಿ ಮೇರೆಗೆ ಆತನ ಪತ್ತೆಯ ಬಗ್ಗೆ ಸಿಸಿಬಿ ಘಟಕದ ತಂಡ ಉಡುಪಿಯಲ್ಲಿ ಬೀಡು ಬಿಟ್ಟಿದ್ದು ಅಲ್ಲಿ ಆತನ ಪತ್ತೆಯ ಬಗ್ಗೆ ಪ್ರಯತ್ನದಲ್ಲಿರುವಾಗ ಆತನು ಬಿಳಿ ಬಣ್ಣದ ಐ20 ಕಾರಿನಲ್ಲಿ ಮಂಗಳೂರು ಕಡೆಗೆ ಹೋಗುತ್ತಿದ್ದಾನೆಂದು ಮಾಹಿತಿ ತಿಳಿದು ಸಿಸಿಬಿ ಘಟಕದ ವಿಶೇಷ ತಂಡದವರು ಆರೋಪಿಯನ್ನು ಹಿಂಬಾಲಿಸುತ್ತಾ ಮಂಗಳೂರು ಕಡೆಗೆ ಬಂದಿದ್ದು, ಮಂಗಳೂರು ಕಡೆಗೆ ಬಂದು ತನ್ನ ಕಾರಿನಲ್ಲಿ ಜಪ್ಪಿನಮೊಗರು ಕುಡುಪ್ಪಾಡಿ ಎಂಬಲ್ಲಿ ಇದ್ದಾನೆಂದು ಮಾಹಿತಿ ಬಂದಿದ್ದು ಅಲ್ಲಿಗೆ ಸಿಸಿಬಿ ತಂಡ ಹೋಗಿ ನೋಡಿದಾಗ ಆತನು ಐ 20 ಕಾರಿನಲ್ಲಿ ಇದ್ದವನು. ಸಿಸಿಬಿ ತಂಡವನ್ನು ನೋಡಿದ ಕೂಡಲೇ ಕಾರನ್ನು ವೇಗವಾಗಿ ಚಲಾಯಿಸಿಕೊಂಡು ಪರಾರಿಯಾಗಲು ಪ್ರಯತ್ನ ನಡೆಸಿದ ಸಮಯ ಕಾರನ್ನು ಅಡ್ಡಹಾಕಿ ಆತನನ್ನು ಸುತ್ತುವರೆದಾಗ ತನ್ನಲ್ಲಿದ್ದ ಚೂರಿಯಿಂದ ಹಲ್ಲೆ ಮಾಡಿ, ಕೊಲೆ ಮಾಡಲು ಪ್ರಯತ್ನಿಸಿದಾಗ ಆತನನ್ನು ಹಿಡಿಯಲು ಹೋದ ಸಿಬ್ಬಂದಿ ಪ್ರಕಾಶ್ ಅವರಿಗೆ ಆತನಲ್ಲಿದ್ದ ಚೂರಿಯಿಂದ ಇರಿದು ಹಲ್ಲೆ ನಡೆಸಿದ್ದು, ಆ ಸಂದರ್ಭ ಪಿಎಸ್ಐ ಸುದೀಪ್ ರವರು ಆರೋಪಿಗೆ ಶರಣಾಗುವಂತೆ ಸೂಚಿಸಿದ್ದರೂ ಹಲ್ಲೆಗೆ ಮುಂದಾದಾಗ ತನ್ನ ಹಾಗೂ ತನ್ನ ಸಿಬ್ಬಂದಿಯವರ ಆತ್ಮ ರಕ್ಷಣೆಗಾಗಿ ಆತನ ಕಾಲಿಗೆ ಫೈರಿಂಗ್ ಮಾಡಿರುತ್ತಾರೆ. ನಂತರ ಆತನನ್ನು ಚಿಕಿತ್ಸೆಗಾಗಿ ಸ್ಥಳೀಯ ಕಂಕನಾಡಿ ಫಾದರ್ ಮುಲ್ಲರ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು