10:40 AM Friday31 - October 2025
ಬ್ರೇಕಿಂಗ್ ನ್ಯೂಸ್
Bangalore | ರಾಜ್ಯದಲ್ಲಿ‌ ಕುಡಿಯುವ ನೀರು, ಒಳಚರಂಡಿ ಯೋಜನೆ: ಕೇಂದ್ರಕ್ಕೆ 6,500 ಕೋಟಿ… ಸೋಮವಾರಪೇಟೆ | ಸುಮಾರು 2.4 ಲಕ್ಷ ರೂ. ಮೌಲ್ಯದ ಕಾಳು ಮೆಣಸು ಕಳ್ಳತನ:… ಸಂವಿಧಾನ ರಕ್ಷಣೆ | ರಾಹುಲ್ ಗಾಂಧಿ, ಸಿದ್ದರಾಮಯ್ಯ ಹೇಳುವುದು ಆಚಾರ, ತಿನ್ನುವುದು ಬದನೆಕಾಯಿ:… ಕನ್ನಡ ರಾಜ್ಯೋತ್ಸವ ಆಚರಣೆಗೆ ಅವಕಾಶ ನೀಡದ ಕೇಂದ್ರ ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಶಿಫಾರಸ್ಸು:… Kodagu | ಮಡಿಕೇರಿ: 15 ದಿನಗಳಿಂದ ನಾಪತ್ತೆಯಾಗಿದ್ದ ಯುವಕ ಕೊನೆಗೂ ಕಾಡಿನಲ್ಲಿ ಪತ್ತೆ ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ ಮಾಡುವುದಿಲ್ಲ: ಮಾಜಿ ಸಚಿವ ರೇಣುಕಾಚಾರ್ಯ ಭವಿಷ್ಯ Kalburgi | ರಾಘಪುರ ದರ್ಗಾ ಹುಂಡಿ ಕಳವು ಪ್ರಕರಣ: ಮುಧೋಳ್ ಪೊಲೀಸರಿಂದ ಓರ್ವ… New Delhi | ಸೌರ ಗುರಿಸಾಧನೆಯಲ್ಲಿ ಜಿ.20 ರಾಷ್ಟ್ರಗಳ ಪೈಕಿ ಭಾರತವೇ ಮುಂಚೂಣಿ:… ಕೇರಳ ಪ್ರವಾಸಿ ಬಸ್ ಗಳಲ್ಲಿ ಡಿಜೆ ಅಳವಡಿಕೆ: ಶಬ್ದ ಮಾಲಿನ್ಯದ ವಿರುದ್ಧ ಆಕ್ಷೇಪ;… ಕಾಂಗ್ರೆಸ್‌ ಸರ್ಕಾರ ರಸ್ತೆಗಳ ಅಭಿವೃದ್ಧಿ ಮರೆತಿದೆ, ಒಂದು ಲೇಯರ್‌ ಗೆ 4-5 ಸಾವಿರ…

ಇತ್ತೀಚಿನ ಸುದ್ದಿ

ಬಂಗಾಳ ಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ: ರಾಜ್ಯದ 8 ಜಿಲ್ಲೆಗಳಲ್ಲಿ 3 ದಿನ ಭಾರೀ ಮಳೆ ನಿರೀಕ್ಷೆ

18/08/2021, 16:20

ಮಂಗಳೂರು(reporterkarnataka.com): ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದ 8 ಜಿಲ್ಲೆಗಳ ವಿವಿಧೆಡೆ ಮುಂದಿನ 3 ದಿನಗಳ ಕಾಲ ಮಳೆಯಾಗುವ ನಿರೀಕ್ಷೆಯಿದೆ.

ರಾಜ್ಯದ ಕರಾವಳಿ. ಮಲೆನಾಡು ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧ ಕಡೆಯಲ್ಲಿ ಸಾಧಾರಣದಿಂದ ಭಾರಿ ಮಳೆಯಾಗಲಿದೆ. ನೆರೆಯ ಕೇರಳ, ತಮಿಳುನಾಡಿನಲ್ಲೂ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿ 7ರಿಂದ 11 ಸೆಂ.ಮೀ ಮಳೆಯಾಗುವ ನಿರೀಕ್ಷೆಯಿದೆ. ರಾಜ್ಯದ 8 ಜಿಲ್ಲೆಗಳಲ್ಲಿ 3 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ವರುಣನ ಅಬ್ಬರ ಮುಂದುವರೆಯಲಿದೆ. ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ 3 ದಿನ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು