5:16 AM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯಾದ್ಯಂತ ಮಳೆ ಸಾಧ್ಯತೆ; ಸೆ. 9,10ರಂದು ಕರಾವಳಿಯಲ್ಲಿ ಭಾರಿ ವರ್ಷಧಾರೆ ನಿರೀಕ್ಷೆ

07/09/2023, 10:53

ಬೆಂಗಳೂರು(reporterkarnataka.com): ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯಾದ್ಯಂತ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ.
ಭಾರತೀಯ ಹವಾಮಾನ ಇಲಾಖೆ ನೀಡಿದ ಅಧಿಕೃತ ಮಾಹಿತಿ ಪ್ರಕಾರ ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಈ ವಾಯುಭಾರ ಕುಸಿತವು ಕರ್ನಾಟಕದ ಮೇಲೆ ಭಾರಿ ಮಳೆ ಸುರಿಸಲಿದೆ. ವಾಯುಭಾರ ಕುಸಿತ ಉಂಟಾದ ವಾಯವ್ಯ ಮತ್ತು ಪಶ್ಚಿಮ ಸಮುದ್ರ ಸ್ಥಳದಲ್ಲಿ ಸಮುದ್ರ ಮೇಲ್ಮೈನಲ್ಲಿ 7.6 ಕಿಲೋ ಮಿಟರ್ ಎತ್ತರದಲ್ಲಿ ಸುಳಿ ಗಾಳಿಯೊಂದು ಸೃಷ್ಟಿಯಾಗಿದೆ. ಇದು ದಕ್ಷಿಣಕ್ಕೆ ಓರೆಯಾಗಿದ್ದು, ಅದೇ ಮಾರ್ಗವಾಗಿ ದಟ್ಟಗಾಳಿ ಬೀಸುವ ಸಾಧ್ಯೆತೆಗಳು ಇದೆ.
ವಾಯುಭಾರ ಕುಸಿತ ಪ್ರಭಾವ ಕರ್ನಾಟಕದ ಉತ್ತರ ಒಳನಾಡು ಜಿಲ್ಲೆಗಳ ಮೇಲೆ ಹೆಚ್ಚಿರುತ್ತದೆ. ಈ ಕಾರಣದಿಂದ ಸೆಪ್ಟಂಬರ್ 7ರಂದು ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು ಜಿಲ್ಲೆಗಳಿಗೆ ಅತ್ಯಧಿಕ ಮಳೆ ಬರಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇದೇ ಭಾಗದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಹಗುರದಿಂದ ಸಾಧಾರಣವಾಗಿ ಮಳೆ ಆಗಲಿದೆ. ನಂತರ ಎರಡು ದಿನ ತುಂತುರು ಮಳೆ ಆಗಲಿದೆ. ಇದರೊಂದಿಗೆ ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟಂಬರ್ 9 ಮತ್ತು 10 ರಂದು ವ್ಯಾಪಕ ಮಳೆ ಬರಲಿದ್ದು, ಈ ಎರಡು ದಿನ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ತಜ್ಞರು ಮಾಹಿತಿ ನೀಡಿದ್ದಾರೆ.
ಮುಂದಿನ ನಾಲ್ಕೈದು ಹಗುರ ಮಳೆ ಕೆಲವು ಕಡೆಗಳಲ್ಲಿ ಮಾತ್ರ ಜೋರು ಮಳೆ ಆಗುವ ಲಕ್ಷಣಗಳು ಇವೆ ಎಂದು ಅವರು ಮಾಹಿತಿ ನೀಡಿದ್ದಾರೆ. ವಾಯುಭಾರ ಕುಸಿತ ಪರಿಣಾಮ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ತಾಪಮಾನ ಕಡಿಮೆಯಾಗಿ ಚಳಿ-ಮಳೆ ವಾತಾವರಣ ಹೆಚ್ಚಿರಲಿದೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು