2:06 PM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಬಂಗಾಳ ಕೊಲ್ಲಿಯಲ್ಲಿ ‘ಯಾಸ್ ‘ ಚಂಡಮಾರುತ ಅಬ್ಬರ : ರಾಜ್ಯದಲ್ಲಿ 5 ದಿನ ಭಾರಿ ಮಳೆ  ಸಾಧ್ಯತೆ

24/05/2021, 11:24

ಬೆಂಗಳೂರು(reporterkarnataka news):

‘ತೌಕ್ತೆ’ ಚಂಡಮಾರುತದ ಬೆನ್ನಲ್ಲಿಯೇ ‘ಯಾಸ್’ ಚಂಡಮಾರುತದ ಅಬ್ಬರ ಶುರುವಾಗಿದ್ದು, ರಾಜ್ಯದಲ್ಲಿ 5  ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. 

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಸೃಷ್ಟಿಯಾದ ಚಂಡಮಾರುತ ಮೇ 26 ರಂದು ಓಡಿಶಾ ಮತ್ತು ಪಶ್ಚಿಮ ಬಂಗಾಳ ಕರಾವಳಿಗೆ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ಚಂಡಮಾರುತದ ಪರಿಣಾಮ ಪೂರ್ವ ಕರಾವಳಿಯಲ್ಲಿ ಭಾರಿ ಮಳೆಯಾಗಲಿದೆ. ಪಶ್ಚಿಮ ಕರಾವಳಿ ಪ್ರದೇಶದಲ್ಲಿ ಅದರ ಪರಿಣಾಮ ಇರಲಿದೆ. ಅರಬ್ಬಿ ಸಮುದ್ರದಲ್ಲಿ ಎದ್ದಿರುವ ಸುಳಿಗಾಳಿ ಪ್ರಭಾವದಿಂದ ಮೇ 26 ರವರೆಗೆ ರಾಜ್ಯದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಮೇ 25ರ ವರೆಗೆ ಮೈಸೂರು, ಬೆಂಗಳೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ. ಅದೇ ರೀತಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು,

ಕೊಡಗು, ಹಾಸನ ಭಾಗದಲ್ಲಿಯೂ ಮೂರ್ನಾಲ್ಕು ದಿನ ಭಾರಿ ಮಳೆಯಾಗುವ ಸಾಧ್ಯತೆಯಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮೇ 29 ರವರೆಗೆ ಭಾರೀ ಮಳೆಯಾಗಲಿದೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು