12:16 AM Sunday12 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ಬಂಗಾಳಕೊಲ್ಲಿಯಲ್ಲಿ ಮತ್ತೆ ಚಂಡಮಾರುತ: ಕರಾವಳಿ ಸಹಿತ ರಾಜ್ಯದ ಹಲವೆಡೆ ಭಾರಿ ಮಳೆ ಸಾಧ್ಯತೆ; ಮೀನುಗಾರರಿಗೆ ಎಚ್ಚರಿಕೆ

08/05/2022, 23:10

ಬೆಂಗಳೂರು(reporterkarnataka.com): ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಅಸಾನಿ ಚಂಡಮಾರುತ ಸೃಷ್ಟಿಯಾಗಿದ್ದು, ಉತ್ತರ ಆಂಧ್ರಪ್ರದೇಶ, ಪಶ್ಚಿಮ ಬಂಗಾಳ ಹಾಗೂ ಕರಾವಳಿ ಓರಿಸ್ಸಾದತ್ತ ಮಾರುತಗಳು ಚಲಿಸಲಿದ್ದು, ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

ಇನ್ನು ಗಾಳಿಯ ವೇಗ ಹೆಚ್ಚಿರುವ ಹಿನ್ನೆಲೆಯಲ್ಲಿ ಸಮುದ್ರದಲ್ಲಿ ಮೀನುಗಾರಿಕೆಯಲ್ಲಿ ತೊಡಗಿರುವ ಮೀನುಗಾರರು ತಕ್ಷಣ ವಾಪಸ್ ಬರುವಂತೆ ಹವಾಮಾನ ಇಲಾಖೆ ಸೂಚಿಸಿದೆ.

ಅಸಾನಿ ಚಂಡಮಾರುತ ಹಿನ್ನೆಲೆ ಕರ್ನಾಟಕದಲ್ಲಿಯೂ ಉತ್ತಮ ವರ್ಷಧಾರೆ ಬರಲಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಬೆಂಗಳೂರು, ಬೆಂ.ಗ್ರಾಮಾಂತರ, ಕೋಲಾರ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ, ಹಾವೇರಿ, ಬಳ್ಳಾರಿ, ಗದಗ, ಧಾರವಾಡ, ಬೆಳಗಾವಿ, ಕೊಪ್ಪಳ, ಬಾಗಲಕೋಟೆ, ಕಲಬುರಗಿ ಮತ್ತು ಬೀದರ್‌ನಲ್ಲಿ ಮೇ 9ರಂದು ಭಾರಿ ಮಳೆ ಸುರಿಯಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಕೊಟ್ಟಿದೆ.

ಯಾದಗಿರಿ, ರಾಯಚೂರು ಮತ್ತು ವಿಜಯಪುರ ಸಾಧಾರಣ ಮಳೆ ಬೀಳಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು