10:11 PM Saturday9 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್ ಭೇಟಿ: ಪರಿಶೀಲನೆ

06/11/2025, 20:08

ಬೆಂಗಳೂರು(reporterkarnataka.com): ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ವಾಹನಗಳ ನಿಲುಗಡೆಗಾಗಿ ಮೀಸಲಿರುವ ಪ್ರದೇಶವು ಸಮತಟ್ಟಾಗಿರದೇ, ಮಳೆ ಬಂದ ಸಂದರ್ಭದಲ್ಲಿ ನೀರು ನಿಂತು ವಾಹನಗಳ ಸುಗಮ ಸಂಚಾರಕ್ಕೆ ತೊಂದರೆ ಉಂಟಾಗುತ್ತಿರುವ ಬಗ್ಗೆ‌ ಪ್ರಯಾಣಿಕರು ಸಾರಿಗೆ ಸಚಿವರ ಗಮನಕ್ಕೆ ತಂದಿದ್ದರು.
ಈ‌ ಬಗ್ಗೆ ಸಚಿವರು ಕೂಡಲೇ ಕಾಮಗಾರಿ ಕೈಗೆತ್ತಿಕೊಂಡು ಬಸ್ ಗಳ ಸುಗಮ ಸಂಚಾರಕ್ಕೆ ಕ್ರಮ ತೆಗೆದುಕೊಳ್ಳಲು ತಿಳಿಸಿದ್ದರು. ಈ ಸಂಬಂಧ ತೆಗೆದುಕೊಂಡಿರುವ ಕ್ರಮವನ್ನು ಪರಿಶೀಲಿಸಲು ಬಸ್ ನಿಲ್ದಾಣಕ್ಕೆ ದಿಢೀರ್ ಭೇಟಿ ನೀಡಿ ಪರಾಮರ್ಶೆ ನಡೆಸಿದರು. ಮೊದಲನೇ ಹಂತದಲ್ಲಿ ಈ ಕಾಮಗಾರಿಯನ್ನು ಪೂರ್ಣಗೊಳಿಸಿ, ಮುಂದಿನ‌ ಹಂತದಲ್ಲಿ‌‌ ಇನ್ನೆರಡು‌ ಸ್ಥಳಗಳಲ್ಲಿ ( ಮಳೆಗ ಹಾನಿಗೆ ಸಿಲುಕುವ) ಕಾರ್ಯಕೈಗೊಳ್ಳಲು ಸೂಚನೆ‌ ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಬಸ್ ನಿಲ್ದಾಣದ ಎಲ್ಲಾ ಟರ್ಮಿನಲ್ ಗಳ ಪರಿವೀಕ್ಷಣೆ ನಡೆಸಿದರು. ಸಾರ್ವಜನಿಕ ಪ್ರಯಾಣಿಕರಿಗೆ ಸಮರ್ಪಕ ಸಾರಿಗೆ ಸೌಲಭ್ಯ ಒದಗಿಸುವುದರ ಜೊತೆಗೆ ವಾಣಿಜ್ಯ ಮಳಿಗೆಗಳು ಖಾಲಿ ಉಳಿಯದಂತೆ ಕ್ರಮವಹಿಸಲು ತಿಳಿಸಿದರು.
ಸಾರ್ವಜನಿಕ ಪ್ರಯಾಣಿಕರಿಗೆ ಹಾಗೂ ಚಾಲನಾ ಸಿಬ್ಬಂದಿಗಳಿಗೆ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ವಿದ್ಯುತ್ ದೀಪದ ಹಾಗೂ ಶೌಚಾಲಯದ ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸಲು ಸೂಚಿಸಿದರು. ಅಲ್ಲದೇ, ಬೆಂ.ಮ.ಸಾ.ಸಂಸ್ಥೆಯ ಬಸ್ ನಿಲ್ದಾಣಕ್ಕೂಭೇಟಿ ನೀಡಿ, ಕಟ್ಟಡದ ಮೇಲೆ ಬೆಳೆದಿರುವ ಗಿಡಗಳನ್ನು ತೆಗಿಸಿ, ಸ್ವಚ್ಛಗೊಳಿಸಲು ಸೂಚಿಸಿದರು.
ಕರಾರಸಾ ನಿಗಮದ ಮಾನ್ಯ ನಿರ್ದೇಶಕರು (ಸಿಬ್ಬಂದಿ ಮತ್ತು ಜಾಗೃತಿ), ನಿರ್ದೇಶಕರು (ಮಾಹಿತಿ ತಂತ್ರಜ್ಞಾನ) ರವರು ಹಾಜರಿದ್ದು ಚಾಲನಾ ಸಿಬ್ಬಂದಿಗಳ ವಿಶ್ರಾಂತಿ ಗೃಹ ಹಾಗೂ ಇನ್ನಿತರೆ ವ್ಯವಸ್ಥೆಗಳ ಕುರಿತು ಪರಿವೀಕ್ಷಣೆ ನಡೆಸಿದರು.
ಕೇಂದ್ರ ಕಚೇರಿಯ ಇಲಾಖಾ ಮುಖ್ಯಸ್ಥರು ಕೆಂಪೇಗೌಡ ಬಸ್ ನಿಲ್ದಾಣ ವಿಭಾಗದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು