8:52 AM Sunday1 - November 2026
ಬ್ರೇಕಿಂಗ್ ನ್ಯೂಸ್
ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಎಸ್‌ಐಟಿ ನೂತನ ಮುಖ್ಯಸ್ಥರಾಗಿ ಚೇತನ್… ಭೂತಾನ್‌ನಲ್ಲಿ ಹಿಮನದಿ ಸರೋವರ ಸ್ಫೋಟ: ಅಸ್ಸಾಂ, ಬಂಗಾಳದಲ್ಲಿ ಪ್ರವಾಹದ ಎಚ್ಚರಿಕೆ ರಾಜ್ಯಾದ್ಯಂತ ನೀರಿನ ಘಟಕಗಳ ಮೇಲೆ ಅಧಿಕಾರಿಗಳ ದಾಳಿ: 24 ಘಟಕಗಳಿಗೆ ನೋಟಿಸ್; ಮುಳಬಾಗಿಲಿನಲ್ಲಿ… ಅತ್ಯಾಚಾರ ಎಸಗಿದ ಯುವಕರನ್ನು ಅಪಹರಿಸಿ ಹಣದ ಬೇಡಿಕೆಯಿಟ್ಟ ಸಂತ್ರಸ್ತೆ: 10 ಮಂದಿ ಆರೋಪಿಗಳ… ಮಾಜಿ ಸಚಿವ, ಹಿರಿಯ ರಾಜಕಾರಣಿ ಶಿವಾನಂದ ಕೌಜಲಗಿ ನಿಧನ 4 ಎಂಎಲ್‌ಸಿ ಕ್ಷೇತ್ರ ಗೆದ್ದ ಮಾತ್ರಕ್ಕೆ ಬಿಜೆಪಿ ಬಿಗೋದು ಬೇಡ: ಕಲಬುರಗಿಯಲ್ಲಿ ಆರೋಗ್ಯ… ಮುಂದಿನ ಚುನಾವಣೆಯಲ್ಲಿ 130 ಸ್ಥಾನ ಗೆದ್ದು ಎನ್‌ಡಿಎ ಅಧಿಕಾರಕ್ಕೆ’: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.… Chikkamagaluru | ಕಡೂರು ಬಳಿ ಬಸ್ಸಿಗೆ ಹಿಂಭಾಗದಿಂದ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ… ಮೈಸೂರು ಅರಮನೆ ವಿಚಾರವಾಗಿ ಸಚಿವ ಯತೀಂದ್ರ ಹೇಳಿಕೆಗೆ ವಿರೋಧ: ಪ್ರಮೋದಾದೇವಿ ಒಡೆಯರ್ ಬೆಂಬಲಕ್ಕೆ… Chikkamagaluru | ಆಟೋ‌- ಬೈಕ್ ನಡುವೆ ಮುಖಾಮುಖಿ ‌ಡಿಕ್ಕಿ: ಬೈಕ್ ಸವಾರರ ಸ್ಥಳದಲ್ಲೇ…

ಇತ್ತೀಚಿನ ಸುದ್ದಿ

Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ ಅರೆಸ್ಟ್, 15 ಕೋಟಿ ರೂ. ಜಪ್ತಿ

27/05/2026, 17:44

ಬೆಂಗಳೂರು(reporterkarnataka.com): ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆ ವಿರುದ್ಧ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಪ್ರತ್ಯೇಕವಾಗಿ 23 ಜನರನ್ನು ಬಂಧಿಸಲಾಗಿದ್ದು, 15 ಕೋಟಿ ರೂ. ಜಪ್ತಿ ಮಾಡಿದ್ದಾರೆ.
ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಈ ಬಗ್ಗೆ ಮಾಹಿತಿ ನೀಡಿದ್ದು, ಪ್ರಸಕ್ತ ಐಪಿಎಲ್ ಪಂದ್ಯಾವಳಿ ನಡೆಯುವ ವೇಳೆ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದವರ ವಿರುದ್ಧ ಕಾರ್ಯಾಚರಣೆ ನಡೆಸಲಾಗಿದೆ.ಸಿಸಿಬಿ ಡಿಸಿಪಿ ಬಿ.ಎಲ್.ಹರಿಬಾಬು ನೇತೃತ್ವದಲ್ಲಿ ಅಧಿಕಾರಿಗಳು ಐಪಿಎಲ್ ಪಂದ್ಯಾವಳಿ ವೇಳೆ ನಡೆಯುವ ಕ್ರಿಕೆಟ್ ಬೆಟ್ಟಿಂಗ್ ಮೇಲೆ ನಿಗಾ ವಹಿಸಿದ್ದರು. ಕ್ರಿಕೆಟ್ ಬೆಟ್ಟಿಂಗ್ ಸಂಬಂಧ ವಿವಿಧ ಪೊಲೀಸ್ ಠಾಣೆಗಳಲ್ಲಿ 17 ಪ್ರಕರಣ ದಾಖಲಾಗಿದ್ದು. 23 ಆರೋಪಿಗಳನ್ನು ಬಂಧಿಸಲಾಗಿದೆ.

ಸಿಸಿಬಿ ಪೊಲೀಸ್ ಠಾಣೆಗಳಲ್ಲಿ 9 ಪ್ರಕರಣ ದಾಖಲಾಗಿವೆ. 4 ಪ್ರಕರಣಗಳಲ್ಲಿ ಬಂಧಿತರಾದ 5 ಆರೋಪಿಗಳಿಂದ 1.10 ಲಕ್ಷ ರೂ. ಮೌಲ್ಯದ 7 ಮೊಬೈಲ್ ಜಪ್ತಿ ಮಾಡಲಾಗಿದೆ. 13.37 ಕೋಟಿ ರೂ. ಮೌಲ್ಯದ ಗೇಮಿಂಗ್ ಆಯಪ್ ಗಳ ಚಿಪ್ಸ್ ಗಳನ್ನು ಜಪ್ತಿ ಮಾಡಲಾಗಿದೆ. ಕ್ರಿಕೆಟ್ ಬೆಟ್ಟಿಂಗ್ ಸಂಬಂಧ ಒಟ್ಟು 15 ಕೋಟಿ ರೂ. ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು