10:00 PM Wednesday12 - November 2025
ಬ್ರೇಕಿಂಗ್ ನ್ಯೂಸ್
ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ

ಇತ್ತೀಚಿನ ಸುದ್ದಿ

Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್ ಸೇವೆ ಆರಂಭ

12/11/2025, 21:52

*ಫ್ಲೈ ಬಸ್ ಪ್ರಯಾಣಿಕರಿಗೆ ನಂದಿನಿ ಉತ್ಪನ್ನಗಳ ಸ್ಯ್ನಾಕ್ಸ್ ವಿತರಣೆಗೆ ಚಾಲನೆ*

ಬೆಂಗಳೂರು(reporterkarnataka.com): ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್ ಸೇವೆ ಆರಂಭಿಸಲಾಗಿದೆ.
ಈ ಸಂದರ್ಭದಲ್ಲಿ ಸಾರಿಗೆ ಸಚಿವ ರಾಮಲಿಂಗೇಗೌಡ ಅವರು ಮಾತನಾಡಿ, ಸಾರಿಗೆ ಸಚಿವರಾಗಿದ್ದ ತಮ್ಮ ಮೊದಲ ಅವಧಿಯಲ್ಲಿ ಮೊದಲ ಬಾರಿಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರಿಂದ ಮೈಸೂರಿಗೆ ನೇರ ಫ್ಲೈಬಸ್ ಸಾರಿಗೆ ವ್ಯವಸ್ಥೆಯು ಆಗಸ್ಟ್ 2013 ರಿಂದ ಪ್ರಾರಂಭಿಸಲಾಗಿತ್ತು.
ನಂತರದ ದಿನಗಳಲ್ಲಿ ಮಡಿಕೇರಿ, ಕುಂದಾಪುರಕ್ಕೆ ಫ್ಲೈ ಬಸ್ ಸೇವೆಯನ್ನು ವಿಸ್ತರಿಸಲಾಯಿತು.


ಸಾರ್ವಜನಿಕ ಸಾರಿಗೆಯನ್ನು ಉತ್ತೀಜಿಸುವುದು ಹೆಚ್ಚು ಹೆಚ್ಚು ಬಳಸುವಂತೆ ಮಾಡುವುದು ನಮ್ಮ ಪ್ರಥಮ ಆದ್ಯತೆಯಾಗಿರಬೇಕು. ಆ ನಿಟ್ಟಿನಲ್ಲಿ ಇಂದು ಬೆಂಗಳೂರು – ದಾವಣಗೆರೆ‌ ನಡುವೆ ನೇರ ಫ್ಲೈ ಬಸ್ ಸೇವೆ ಆರಂಭಿಸಲಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳು ಹೊಸ ಹೊಸ ಸೇವೆ ಮತ್ತು‌ ಉಪಕ್ರಮಗಳನ್ನು ಅನುಷ್ಠಾನಗೊಳಿಸುವಲ್ಲಿ ಮುಂಚೂಣಿಯಲ್ಲಿದೆ. ಭಾರತ‌ ಸರ್ಕಾರದಿಂದ ಇತ್ತೀಚೆಗೆ ಮೈಸೂರು ನಗರದ ಧ್ವನಿ‌ಸ್ಪಂದನ ಉಪಕ್ರಮಕ್ಕೆ ಉತ್ಕೃಷ್ಟತಾ‌ ಪ್ರಶಸ್ತಿ‌ ಲಭಿಸಿದೆ. ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಜನಸ್ನೇಹಿಯಾಗಿಸಲು ಫ್ಲೈ ಬಸ್ ಗಳಲ್ಲಿ ಇನ್ನು ಮುಂದೆ ಸ್ಯ್ನಾಕ್ಸ್ ಕಿಟ್ ಉಚಿತವಾಗಿ ನೀಡಲಾಗುತ್ತಿದೆ.
ಪ್ರಸ್ತುತ ಕಾರ್ಯಾಚರಣೆಯಲ್ಲಿರುವ ಫ್ಲೈಬಸ್ ಸಾರಿಗೆಗಳ ವಿವರ:
ಒಟ್ಟು ಮಾರ್ಗಗಳು: 13
ಮೈಸೂರು: 09
ಮಡಿಕೇರಿ: 02
ದಾವಣಗೆರೆ: 02
ಕುಂದಾಪುರ: 02 (ಅಂಬಾರಿ ಉತ್ಸವ)
ದಿನವಹಿ ಟ್ರಿಪ್ ಗಳು: 44
ದಿನವಹಿ ಕಿಮೀ: 10240
ಪ್ರತಿ ಕಿಮೀ ಆದಾಯ: ₹90
ದಿನವಹಿ ಸರಾಸರಿ ಪ್ರಯಾಣಿಕರ ಸಂಖ್ಯೆ: 1050
ಹೊಸದಾಗಿ ಪ್ರಾರಂಭಿಸುತ್ತಿರುವ ಬೆಂಗಳೂರು- ದಾವಣಗೆರೆ ಮಾರ್ಗದ ಫ್ಳೈ ಬಸ್ ವೇಳಾಪಟ್ಟಿ ಈ ಕೆಳಗಿನಂತಿದೆ.
ಬೆಂಗಳೂರು ವಿಮಾನ ನಿಲ್ದಾಣದಿಂದ ಹೊರಟು ದಾವಣಗೆರೆ ತಲುಪುವ ಸಮಯ
# 00.45 hrs > 05.45 hrs
# 10.00 hrs > 15.00 hrs
ದಾವಣಗೆರೆ ಇಂದ ಹೊರಟು ಬೆಂಗಳೂರು ವಿಮಾನ ನಿಲ್ದಾಣ ತಲುಪುವ ಸಮಯ
# 08.00 hrs > 13.00 hrs
# 17.00 hrs > 22.00 hrs

*ಮಾರ್ಗ ವಿವರ:*
ಬೆಂಗಳೂರು ವಿಮಾನ ನಿಲ್ದಾಣ > ಸ್ಯಾಟಲೈಟ್ ಟೌನ್ ರಿಂಗ್ ರೋಡ್ ಮೂಲಕ ದೊಡ್ಡಬಳ್ಳಾಪುರ ಬೈಪಾಸ್ > ಡಾಬಸ್ ಪೇಟೆ > ತುಮಕೂರು ಬೈಪಾಸ್ > ಚಿತ್ರದುರ್ಗ ಬೈಪಾಸ್ ಮೂಲಕ ನೇರವಾಗಿ ದಾವಣಗೆರೆ.
ಪ್ರಯಾಣಿಕರ ಅನುಕೂಲಕ್ಕಾಗಿ ತುಮಕೂರು ಬೈಪಾಸ್ ಹಾಗೂ ಚಿತ್ರದುರ್ಗ ಬೈಪಾಸ್ ಸೇರಿ ಎರಡು ಮಾರ್ಗಮಧ್ಯದ ಪಿಕಪ್ ಮತ್ತು ಡ್ರಾಪ್ ಪಾಯಿಂಟ್ ನೀಡಲಾಗಿದೆ.

*ದರ ವಿವರ:*
ಬೆಂಗಳೂರು ವಿಮಾನ ನಿಲ್ದಾಣದಿಂದ
# ತುಮಕೂರು ₹400
# ಚಿತ್ರದುರ್ಗ ₹980
# ದಾವಣಗೆರೆ ₹1250

*KMF ರವರಿಂದ ನಂದಿನಿ ಉತ್ಪನ್ನಗಳ ಸ್ನ್ಯಾಕ್ಸ್ ಬಾಕ್ಸ್ ಎಲ್ಲಾ ಫ್ಲೈಬಸ್ ಪ್ರಯಾಣಿಕರಿಗೆ ಉಚಿತವಾಗಿ ವಿತರಿಸಲಾಗುವುದು

ಕಿಟ್ ನಲ್ಲಿ ನೀರಿನ ಬಾಟಲ್, Flavoured Milk, Cookies ( Sweet & Kara) ಕೇಕ್,‌ಕೋಡುಬಳೆ ‌ಪ್ಯಾಕೆಟ್ ಇರುತ್ತದೆ. ಸದರಿ‌ ಕಿಟ್ ಅನ್ನು ಬ್ರ್ಯಾಂಡ್‌ ಮಾಡಲಾಗಿದ್ದು, ಅದರ ಹಿಂಬದಿಯಲ್ಲಿ ನಿಗಮದ‌ ಪ್ರತಿಷ್ಠಿತ ಸೇವೆಗಳು‌‌‌ ದಕ್ಷಿಣ ಭಾರತದಾದ್ಯಂತ ‌ಕಾರ್ಯಾಚರಣೆಯಾಗುವ ಸ್ಥಳಗಳ‌ ಮಾಹಿತಿ ಮತ್ತು QR Scanner Code ಟಿಕೇಟ್ ಬುಕ್‌ಮಾಡಲು ಅನುವಾಗುವಂತೆ ಮುದ್ರಿಸಲಾಗಿದೆ.

ಕಾರ್ಯಕ್ರಮದಲ್ಲಿ ಅಕ್ರಂ‌ ಪಾಷ ಭಾಆಸೇ, ವ್ಯವಸ್ಥಾಪಕ ನಿರ್ದೇಶಕರು, ಡಾ.ಕೆ ನಂದಿನಿ ದೇವಿ ಭಾಆಸೇ,ನಿರ್ದೇಶಕರು (ಸಿಬ್ಬಂದಿ & ಜಾಗೃತ), ಇಬ್ರಾಹಿಂ ಮೈಗೂರ ಭಾಆಸೇ, ನಿರ್ದೇಶಕರು (ಮಾಹಿತಿ ‌ತಂತ್ರಜ್ಞಾನ), ಕೆನೆತ್, ಮುಖ್ಯ ವಾಣಿಜ್ಯ ಅಧಿಕಾರಿ, KIAL, ಪ್ರವತ್ , ಉಪಾಧ್ಯಕ್ಷರು, ವಾಣಿಜ್ಯ, KIAL, ಸಂಜಯ್ ಚಂದ್ರ,ವ್ಯವಸ್ಥಾಪಕರು, ವಾಣಿಜ್ಯ KIAL, ಸ್ವಾತಿ ರೆಡ್ಡಿ, KMF ಹಾಗೂ ನಿಗಮದ ಅಧಿಕಾರಿ‌ ಹಾಗೂ ಸಿಬ್ಬಂದಿಗಳು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು