10:09 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

Bangalore | ತುರ್ತು ಕಾಮಗಾರಿ: ಜೂನ್‌ 19 ರಂದು ಬಿಬಿಎಂಪಿ ವ್ಯಾಪ್ತಿಯಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ

17/06/2025, 11:20

ಬೆಂಗಳೂರು(reporterkarnataka.com): ಬೃಹತ್ ಬೆಂಗಳೂರು ನಗರದ ಜನತೆಗೆ ಯಾವುದೇ ಅಡತಡೆಯಿಲ್ಲದೇ ನೀರನ್ನು ಸರಬರಾಜು ಮಾಡುವ ಸದುದ್ದೇಶದಿಂದ ಟಿ.ಕೆ. ಹಳ್ಳಿಯಲ್ಲಿ ಕಾವೇರಿ 5ನೇ ಹಂತದ ಕೊಳವೆ ಮಾರ್ಗಕ್ಕೆ ಹೊಸ 3000 ಮಿ.ಮೀ. ವ್ಯಾಸ ಕೊಳವೆ ಮಾರ್ಗದ ಜೋಡಣೆ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮವು ಸೂಚಿಸಿರುವ ವಿದ್ಯುತ್ ಸ್ಥಾವರಗಳ ವಾರ್ಷಿಕ ನಿರ್ವಹಣೆ, ತುರ್ತು ಕಾಮಗಾರಿ ಮತ್ತು ವಿವಿಧ ವಾರ್ಷಿಕ/ನಿಯಮಿತ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಶೀಘ್ರವಾಗಿ ಕೈಗೆತ್ತಿಕೊಳ್ಳಬೇಕಾಗಿರುತ್ತದೆ.
ಆದ್ದರಿಂದ ತುರ್ತು ನಿರ್ವಹಣಾ ಕಾಮಗಾರಿಗಳನ್ನ ಕೈಗೊಳ್ಳುವ ಸಲುವಾಗಿ ದಿನಾಂಕ: 19-06-2025 ರ ಗುರುವಾರ ಬೆಳಿಗ್ಗೆ 6-00 ಗಂಟೆಯಿಂದ ದಿನಾಂಕ: 20-06-2025 ಶುಕ್ರವಾರದ ಬೆಳಿಗ್ಗೆ 6-0 ಗಂಟೆಯವರೆಗೆ ಒಟ್ಟು 24 ಗಂಟೆಗಳ ಕಾವೇರಿ ನೀರು ಸರಬರಾಜು ಯೋಜನೆಯ ಹಂತ-1 ರಿಂದ ಹಂತ – 5 ರ ಎಲ್ಲಾ ಜಲರೇಚಕ ಯಂತ್ರಾಗಾರಗಳನು ಸ್ಥಗಿತಗೊಳಿಸಲು ಸಕ್ಷಮ ಪ್ರಾಧಿಕಾರದಿಂದ ಅನುಮತಿ ದೊರೆತಿರುತ್ತದೆ.
ಈ ಹಿನ್ನಲೆಯಲ್ಲಿ, 24 ಗಂಟೆಗಳ ಕಾಲ ಕಾವೇರಿ ನೀರು ಸರಬರಾಜು ಯೋಜನೆಯ ಹಂತ-1ರಿಂದ ಹಂತ-5ರವರೆಗಿನ ಜಲರೇಚಕ ಯಂತ್ರಾಗಾರಗಳನ್ನು ಸ್ಥಗಿತಗೊಳಿಸಲಾಗುವುದು. ಇದರಿಂದಾಗಿ ಬೃಹತ್ ಬೆಂಗಳೂರು ನಗರ ಪ್ರದೇಶದ ವ್ಯಾಪ್ತಿಯಲ್ಲಿ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯವಾಗುವುದರಿಂದ ಬೆಂಗಳೂರಿನ ನಾಗರೀಕರಿಗೆ ಹಾಗೂ ವಾಣಿಜ್ಯ/ಕೈಗಾರಿಕಾ ಪ್ರದೇಶಗಳಿಗೆ ಮುಂಜಾಗ್ರತೆಯಾಗಿ ಅಗತ್ಯವಿರುವ ನೀರನ್ನು ಸಂಗ್ರಹಣೆ ಮಾಡಿಕೊಳ್ಳುವಂತೆ ಕೋರಿದೆ.

ಇತ್ತೀಚಿನ ಸುದ್ದಿ

ಜಾಹೀರಾತು