3:46 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

Bangalore | ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರಕ್ಕೆ: ಬೆಂಗಳೂರು ಮೆಟ್ರೋ 2ರ ಹಳದಿ ಮಾರ್ಗ ಪ್ರಧಾನಿ ಮೋದಿ ಉದ್ಘಾಟನೆ; ಮೆಟ್ರೋದಲ್ಲೇ ಪಿಎಂ ಪಯಣ

10/08/2025, 18:42

ಬೆಂಗಳೂರು (reporterkarnataka.com): ಆರ್.ವಿ. ರಸ್ತೆ ರಾಗಿಗುಡ್ಡ ಮೆಟ್ರೋ ರೈಲು ನಿಲ್ದಾಣದಲ್ಲಿ ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರದ ವರೆಗಿನ ಬೆಂಗಳೂರು ಮೆಟ್ರೋ 2ರ ಹಳದಿ ಮಾರ್ಗದ ಉದ್ಘಾಟನೆ ಮಾಡಿ ಮೆಟ್ರೋ ರೈಲಿನ ಮೂಲಕ ಕೊನಪ್ಪನ ಅಗ್ರಹಾರದ ವರೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರಯಾಣಸಿದರು.


ಈ ಸಮಯದಲ್ಲಿ ಗೌರವಾನ್ವಿತ ಪ್ರಧಾನ ಮಂತ್ರಿಗಳೊಂದಿಗೆ ರಾಜ್ಯಪಾಲರಾದ ಥಾವರ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಹಾಗೂ ವಿದ್ಯುತ್ ಸಚಿವರಾದ ಮನೋಹರ್ ಲಾಲ್, ಮಾನ್ಯ ಕೇಂದ್ರ ರೈಲ್ವೆ ಮಾಹಿತಿ ಮತ್ತು ಪ್ರಸಾರ, ವಿದ್ಯುನ್ಮಾನ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವರಾದ ಅಶ್ವಿನಿ ವೈಷ್ಣವ್, ಮಾನ್ಯ ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವರಾದ ವಿ. ಸೋಮಣ್ಣ, ಮಾನ್ಯ ಕೇಂದ್ರ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ದಿಮೆಗಳು ಹಾಗೂ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವರಾದ ಕುಮಾರಿ ಶೋಭಾ ಕರಂದ್ಲಾಜೆ, ಉಪ ಮುಖ್ಯ ಮಂತ್ರಿಗಳಾದ ಡಿ.ಕೆ. ಶಿವಕುಮಾರ್, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ಸಂಸದರಾದ ತೇಜಸ್ವಿ ಸೂರ್ಯ, ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಸಂಸದರಾದ ಡಾ.ಸಿ.ಎನ್. ಮಂಜುನಾಥ್ ಸೇರಿದಂತೆ, ಗಣ್ಯರು, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು