8:15 PM Sunday22 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

Bangalore | ಕುರ್ಚಿ ಕಿತ್ತಾಟದಲ್ಲಿ ರೈತರನ್ನೇ ಮರೆತ ಸರ್ಕಾರ: ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ

26/11/2025, 15:47

ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಕುರ್ಚಿಗಾಗಿ ನಡೆಯುತ್ತಿರುವ ಕಿತ್ತಾಟದಲ್ಲಿ ಕಾಂಗ್ರೆಸ್ ಸರ್ಕಾರ ಅನ್ನದಾತ ರೈತರನ್ನು ಸಂಪೂರ್ಣವಾಗಿ ಮರೆತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ಹೊರಹಾಕಿದ್ದಾರೆ.
ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಹೃದಯಹೀನ ಸರ್ಕಾರಕ್ಕೆ ಅನ್ನದಾತನ ಬದುಕಿಗಿಂತ ಅಧಿಕಾರವೇ ಮುಖ್ಯವಾಗಿದೆ. ಕರ್ನಾಟಕದ ಇತಿಹಾಸದಲ್ಲಿ ರೈತರ ನೋವಿಗೆ ಸ್ಪಂದಿಸದ ಈ ರೀತಿಯ ಸಂವೇದನಾರಹಿತ ಸರ್ಕಾರವನ್ನು ನಾನು ಈವರೆಗೆ ಕಂಡಿರಲಿಲ್ಲ. ಕೊಟ್ಟ ಮಾತಿನಂತೆ ಅನ್ನದಾತರ ಸಂಕಷ್ಟಕ್ಕೆ ಸ್ಪಂದಿಸಿ, ಸೂಕ್ತ ಪರಿಹಾರ ನೀಡಬೇಕಿದ್ದ ಸರ್ಕಾರ ಇಂದು ರೈತರ ಸಮಸ್ಯೆಗಳನ್ನು ನಿರ್ಲಕ್ಷಿಸಿದೆ. ರೈತರ ಬದುಕು ನಾಶವಾದರೂ ಪರವಾಗಿಲ್ಲ, ನಮ್ಮ ಕುರ್ಚಿ ಭದ್ರವಾಗಿರಲಿ ಎನ್ನುವಂತಿದೆ ಇಬ್ಬರೂ ನಡೆದುಕೊಳ್ಳುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.
ಗುರ್ಲಾಪುರದಲ್ಲಿ ಪ್ರತಿಭಟನಾ ನಿರತ ರೈತ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘೋರ ದುರಂತ ಸಂಭವಿಸಿತು. ಆದರೆ, ಈ ಹೃದಯಹೀನ ಸರ್ಕಾರದ ಯಾವ ಮಂತ್ರಿಯೂ ರೈತನ ಕಣ್ಣೀರು ಒರೆಸುವ ಕೆಲಸ ಮಾಡಲಿಲ್ಲ. ಸಕ್ಕರೆ ಸಚಿವರು, ಕೃಷಿ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು ತಲೆ ಮರೆಸಿಕೊಂಡಿದ್ದಾರೆ. ತಮ್ಮದೇ ಸರ್ಕಾರದ ಅಸಡ್ಡೆಯಿಂದಾಗಿ ಜೀವನ್ಮರಣದ ಹೋರಾಟದಲ್ಲಿದ್ದ ರೈತನಿಗೆ ಸಾಂತ್ವನ ಹೇಳುವಷ್ಟು ಕನಿಷ್ಠ ಮಾನವೀಯತೆಯೂ ಇಲ್ಲದ ಮಂತ್ರಿಗಳು ಈ ರಾಜ್ಯಕ್ಕೆ ಬೇಕೇ? ಎಂದು ಪ್ರಶ್ನೆ ಮಾಡಿದ್ದಾರೆ.
ರೈತರ ಬೇಡಿಕೆಯಂತೆ ಮೆಕ್ಕೆ ಜೋಳ ಖರೀದಿ ಕೇಂದ್ರಗಳನ್ನು ಆರಂಭಿಸಲು ಸಿಎಂ ಸಿದ್ದರಾಮಯ್ಯ ಯಾರ ಆದೇಶಕ್ಕಾಗಿ ಕಾಯುತ್ತಿದ್ದಾರೆ? ಇದಕ್ಕೂ ದೆಹಲಿ ಹೈಕಮಾಂಡ್‌ನಿಂದ ಸೂಚನೆ ಬರಬೇಕೇ? ರಾಹುಲ್ ಗಾಂಧಿ ಮತ್ತು ರಣದೀಪ್ ಸುರ್ಜೇವಾಲಾ ಅವರ ಅನುಮತಿ ಪತ್ರ ಬೇಕೇ? ರೈತರ ಜೀವ ಉಳಿಸಲು ಹೈಕಮಾಂಡ್‌ನ ಆದೇಶ ಬೇಕೆ? ಎಂದು ಪ್ರಶ್ನಿಸಿದ್ದಾರೆ.
ನನ್ನ 30 ವರ್ಷದ ರಾಜಕಾರಣದಲ್ಲಿ ಇಂತಹ ರೈತ ವಿರೋಧಿ, ಸಂವೇದನಾರಹಿತ ಸರ್ಕಾರವನ್ನು ನಾನು ಕಂಡಿಲ್ಲ. ಬರ ಪರಿಹಾರ, ಹೆಚ್ಚುವರಿ ಬೆಂಬಲ ಬೆಲೆ ಇಲ್ಲ, ಸಕಾಲಕ್ಕೆ ಖರೀದಿ ಕೇಂದ್ರಗಳ ಆರಂಭವಿಲ್ಲ, ನೀರಾವರಿ ಯೋಜನೆಗಳಿಲ್ಲ ಸಂಕಷ್ಟದಲ್ಲಿರುವ ರೈತನಿಗೆ ಸ್ಪಂದನೆಯಿಲ್ಲ. ಇದೇ ಈ ರೈತ ವಿರೋಧಿ ಕಾಂಗ್ರೆಸ್ ಸರ್ಕಾರದ ಸಾಧನೆಯಾಗಿದೆ. ರೈತರ ಆಕ್ರಂದನವನ್ನು ನಿರ್ಲಕ್ಷಿಸಿ ಕುರ್ಚಿ ಭದ್ರಪಡಿಸಿಕೊಳ್ಳಲು ಹೊರಟಿರುವ ಈ ಸರ್ಕಾರವನ್ನು ಬುಡಮೇಲು ಮಾಡುವವರೆಗೆ ನಮ್ಮ ಹೋರಾಟ ನಿಲ್ಲದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು