10:06 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

Bangalore | ನೆಹರೂ ಹಾಕಿದ ಅಡಿಪಾಯಗಳಿಂದ ಭಾರತ ವಿಶ್ವದ 5ನೇ ದೊಡ್ಡ ಆರ್ಥಿಕ ಶಕ್ತಿಯಾಗಿದೆ: ಸಿಎಂ ಸಿದ್ದರಾಮಯ್ಯ

27/05/2025, 18:28

*ವಿಜ್ಞಾನ-ತಂತ್ರಜ್ಞಾನದ ಪ್ರಗತಿ ಮೂಲಕ ವೈಜ್ಞಾನಿಕ ಭಾರತದ ನಿರ್ಮಾತೃ ನೆಹರೂ : ಸಿಎಂ*

ಬೆಂಗಳೂರು(reporterkarnataka.com): ನೆಹರೂ ಹಾಕಿದ ಅಡಿಪಾಯಗಳಿಂದ ಭಾರತ ವಿಶ್ವದ ಐದನೇ ದೊಡ್ಡ ಆರ್ಥಿಕ ಶಕ್ತಿಯಾಗಿದೆ. ಅಪಾರ ಶಿಕ್ಷಣ ಮತ್ತು ಜ್ಞಾನ ಹೊಂದಿದ್ದ ನೆಹರೂ ಆಧುನಿಕ‌ ಭಾರತದ ನಿರ್ಮಾಣಕ್ಕೆ ಭದ್ರವಾದ ಅಡಿಪಾಯ ಹಾಕಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿವರಿಸಿದರು.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಆಧುನಿಕ ಭಾರತದ ನಿರ್ಮಾತೃ ಜವಾಹರಲಾಲ್ ನೆಹರೂ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ದೇಶದಲ್ಲಿ ಭಾರತೀಯರ ಕಣ್ಣೀರು ಒರೆಸುವ, ನೋವುಗಳಿಗೆ ಪರಿಹಾರ ಒದಗಿಸುವುದು ನಮ್ಮ ಕೆಲಸ ಎಂದು ಆರಂಭದಲ್ಲಿ ಘೋಷಣೆ ಮಾಡಿ ನೆಹರೂ ದೇಶ ನಿರ್ಮಾಣದಲ್ಲಿ ತೊಡಗಿಸಿಕೊಂಡರು ಎಂದು ಸಿಎಂ ವಿವರಿಸಿದರು.
ಬ್ರಿಟೀಷರು ಲೂಟಿ ಮಾಡಿದ್ದ ದೇಶದಲ್ಲಿ ಯಾವ ಸವಲತ್ತುಗಳೂ ಇರಲಿಲ್ಲ. ಅಂಥಾ ಹೊತ್ತಲ್ಲಿ ಪ್ರಧಾನಿಯಾಗಿ ದೇಶದ ಚುಕ್ಕಾಣಿ ಹಿಡಿದ ನೆಹರೂ ದೇಶವನ್ನು ದಶ ದಿಕ್ಕುಗಳಿಂದ ಕಟ್ಟಿ ನಿಲ್ಲಿಸಿದ್ದನ್ನು ವಿವರಿಸಿದರು.
ಅಪಾರ ಶ್ರೀಮಂತ ಕುಟುಂಬದ ನೆಹರೂ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿ ದೇಶದ ಪ್ರತಿಯೊಂದು ಕ್ಷೇತ್ರಗಳೂ ಪ್ರಗತಿ ಪಥದಲ್ಲಿ ಸಾಗುವಂತೆ ನೋಡಿಕೊಂಡಿದ್ದನ್ನು ಅಂಕಿ ಅಂಶಗಳ ಸಮೇತ ತಿಳಿಸಿದರು.


ಆಹಾರ ಕ್ರಾಂತಿ, ಹಸಿರು ಕ್ರಾಂತಿಯ ಜೊತೆಗೆ ವಿಜ್ಞಾನ-ತಂತ್ರಜ್ಞಾನದ ಪ್ರಗತಿಗೆ ಕಾರ್ಯಕ್ರಮಗಳು, ತಾಂತ್ರಿಕ‌ ವಿಶ್ವ ವಿದ್ಯಾನಿಲಯಗಳನ್ನು ಸ್ಥಾಪಿಸುವ ಮೂಲಕ , ತಾಂತ್ರಿಕ ಕ್ಷೇತ್ರ ಪ್ರಗತಿ ಮೂಲಕ ವೈಜ್ಞಾನಿಕ ಭಾರತದ ನಿರ್ಮಾತೃ ಕೂಡ ಆದ ನೆಹರೂ ಅವರ ಕೊಡುಗೆಯನ್ನು ಬಿಜೆಪಿ , ಆರೆಸ್ಸೆಸ್ ಎಷ್ಟೇ ಅಳಿಸಲು ಹೆಣಗಾಡಿದರೂ ಅದು ಸಾಧ್ಯವಾಗುತ್ತಿಲ್ಲ ಎಂದರು.
ಸ್ವಾತಂತ್ರ್ಯ ಹೋರಾಟದಲ್ಲೇ ಭಾಗವಹಿಸದೆ ಬ್ರಿಟೀಷರ ಜೊತೆಗಿದ್ದ RSS, BJP ಯವರು ಈಗ ದೇಶಭಕ್ತಿ ಬಗ್ಗೆ ಬರಿ ಭಾಷಣ ಮಾಡುವುದು ಡೋಂಗಿತನ ಎಂದು ಟೀಕಿಸಿದರು.
ಪ್ರಜಾಪ್ರಭುತ್ವ, ಸಂಸದೀಯ ವ್ಯವಸ್ಥೆಯಲ್ಲಿ, ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಲ್ಲದ ಬಿಜೆಪಿಯವರು ಸಾಮಾಜಿಕ ನ್ಯಾಯದ ಪರವಾಗಿದ್ದ ಅಂಬೇಡ್ಕರ್, ನೆಹರೂ ಬಗ್ಗೆ ಬಿಜೆಪಿ, RSS ಸಹಸ್ರ ಸಹಸ್ರ ಸುಳ್ಳುಗಳನ್ನು ಸೃಷ್ಟಿಸುತ್ತಿದೆ ಎಂದರು.
ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದು ಡಾಂಗೆ ಮತ್ತು ಸಾವರ್ಕರ್ ಎಂದು ಸ್ವತಃ ಅಂಬೇಡ್ಕರ್ ಅವರೇ ತಮ್ಮದೇ ಹಸ್ತಾಕ್ಷರದಲ್ಲಿ ಪತ್ರ ಬರೆದಿದ್ದಾರೆ. ಆದರೂ ಬಿಜೆಪಿ, RSS ಅಂಬೇಡ್ಕರ್ ಸೋಲಿಗೆ ಕಾಂಗ್ರೆಸ್ ಕಾರಣ ಎಂದು ಹಸಿ ಹಸಿ ಸುಳ್ಳುಗಳನ್ನು ಹಂಚುತ್ತಾ ತಿರುಗುತ್ತಿದ್ದಾರೆ ಎಂದರು.

*ಬಿಜೆಪಿಗೆ ಗೊತ್ತಿರುವುದು ಬರಿ ಹಿಂಸೆ ಮತ್ತು ಸುಳ್ಳು:*
ಬಿಜೆಪಿಗೆ ಗೊತ್ತಿರುವುದು ಬರಿ ಹಿಂಸೆ ಮತ್ತು ಸುಳ್ಳು. ದಲಿತರು, ಶೂದ್ರರ ಮೇಲೆ ಕೇಸುಗಳು ಬೀಳುವಂತೆ ಮಾಡುವುದು ಇದೇ BJP ಮತ್ತು RSS. ಆಮೇಲೆ ಅವರನ್ನು ಜೈಲಿನಿಂದ ಕರೆದುಕೊಂಡು ಬರುವುದೂ ಇವರೇ. ಇದೇ ನಾಟಕ ಆಡಿಕೊಂಡೇ ಅವರು ಕಾಲ‌ಕಳೆಯುತ್ತಿದ್ದಾರೆ ಎಂದು ಟೀಕಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು