11:45 PM Friday5 - December 2025
ಬ್ರೇಕಿಂಗ್ ನ್ಯೂಸ್
ತೋಟಕ್ಕೆ ತೆರಳಿದ್ದ ಸಂದರ್ಭ ಏಕಾಏಕಿ ಹೆಜ್ಜೇನು ದಾಳಿ: ಮಹಿಳೆ ಸಹಿತ 3 ಮಂದಿಗೆ… ವಿರಾಜಪೇಟೆ | ಕ್ಷುಲ್ಲಕ ಕಾರಣ: ಕುಡಿದ ಮತ್ತಿನಲ್ಲಿ ನಡುರಸ್ತೆಯಲ್ಲಿ ಯುವಕರ ಮಾರಮಾರಿ..!! “ಸ್ವಸ್ಥ ಮೈಸೂರು” ಅಭಿಯಾನ ಒಪ್ಪಂದಕ್ಕೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸಹಿ New Delhi | ಬೆಳ್ಳಿ ವಸ್ತು, ಆಭರಣಗಳಿಗಿನ್ನು BIS ಹಾಲ್‌ಮಾರ್ಕ್‌, HUID ಕಡ್ಡಾಯ ರಾಜ್ಯ ಸರಕಾರ ಅನ್ನದಾತ ರೈತನ ಬಗ್ಗೆ ಕಾಳಜಿ ವಹಿಸುತ್ತಿಲ್ಲ: ಮಾಜಿ ಗೃಹ ಸಚಿವ… ವಿಶೇಷ ಚೇತನರು ಇನ್ನು ವಿಮಾನವೇರುವುದು ಸುಲಭ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ‘ಮೊಬಿಲಿಟಿ… ಕೊಡಗಿನಲ್ಲಿ ಮುಂದುವರಿದ ಆನೆ- ಮಾನವ ಸಂಘರ್ಷ: ಕುಶಾಲನಗರ ಬಳಿ ರೈಲ್ವೆ ಬ್ಯಾರಿಕೇಡ್ ಮುರಿದ… ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು

ಇತ್ತೀಚಿನ ಸುದ್ದಿ

ಬೆಂಗಳೂರು ಕನ್ನಡ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಬಂಟ್ವಾಳದ ಹಾ. ಮ. ಸತೀಶ್ ಆಯ್ಕೆ

21/04/2025, 10:48

ಜಯಾನಂದ ಪೆರಾಜೆ ಕಿನ್ನಿಗೋಳಿ

info.reporterkarnataka@gmail.com

ಬಿ.ಸಿ. ರೋಡಿನಲ್ಲಿ ಶಿಕ್ಷಕರಾಗಿ, ಪತ್ರಕರ್ತರಾಗಿ ಎರಡು ದಶಕಗಳ ಹಿಂದೆ ಸೇವೆ ಸಲ್ಲಿಸಿದ್ದ ಸಂಘಟಕ, ಸಾಹಿತಿ, ಹಾ. ಮ. ಸತೀಶ ಗೂಡಿನಬಳಿ ಅವರು ಬೆಂಗಳೂರು ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಶಾರೀರಿಕ ಶಿಕ್ಷಕರಾಗಿ ಸೇವೆ ಸೇವೆ ಸಲ್ಲಿಸುತ್ತಿದ್ದ ಅವರು ಚುಟುಕು ಕವಿಯಾಗಿ ಗುರುತಿಸಲ್ಪಟ್ಟಿದ್ದು, 1997ರಲ್ಲಿ ಬಂಟ್ವಾಳ ತಾಲೂಕು ಚುಟುಕು ಸಾಹಿತ್ಯ ಪರಿಷತ್ ಸ್ಥಾಪನೆ ಮಾಡಿ ಹಲವು ಸಮ್ಮೇಳನಗಳನ್ನು ನಡೆಸಿದ್ದರು. ಗೋಳ್ತಮಜಲಿನಲ್ಲಿ ನಡೆದ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಅದ್ದೂರಿ ಸಮ್ಮೇಳನ ನಡೆಸಿದ್ದರು. ನಂದಾವರದಲ್ಲಿ ಚುಟುಕು ಸಾಹಿತ್ಯ ಸಮ್ಮೇಳನ ನಡೆಸಿ ಹಲವು ಯುವಕವಿಗಳಿಗೆ ಅವಕಾಶ ನೀಡಿ ಸನ್ಮಾನ ಮಾಡಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಆಸರೆ, ಕೊನೆಯ ನಿಲ್ದಾಣ ಕವನ ಸಂಕಲನ, ಹನಿಹನಿ ಜೇನು, ಜಿನುಗುವ ಸೋನೆ ಮಳೆ ಹನಿಗವನಗಳು, ಭಕ್ತಿ ಗೀತೆ, ಗಝಲ್, ವೈಚಾರಿಕ ಲೇಖನಗಳ ಸಂಕಲನಗಳ ೧೩ ಕೃತಿಗಳನ್ನು ಸಾಹಿತ್ಯಲೋಕಕ್ಕೆ ಅರ್ಪಣೆ ಮಾಡಿದ್ದಾರೆ.
ಪರಿಷತ್ತು ಕೇಂದ್ರ ಸಮಿತಿಯ ಕರ್ನಾಟಕ ರಾಜ್ಯ ಸಂಚಾಲಕರಾದ ಜಯಾನಂದ ಪೆರಾಜೆ ಅವರು ನಾಮ ನಿರ್ದೇಶನ ಮಾಡಿದರು. ಇನ್ನೊರ್ವ ರಾಜ್ಯ ಸಂಚಾಲಕರಾದ ಡಾ. ಶಾಂತಾ ಪುತ್ತೂರು ಅನುಮೋದಿಸಿದರು. ಸರ್ವಾನುಮತಿಯಿಂದ ಆಯ್ಕೆಯಾದ ಹಾ. ಮ. ಸತೀಶ‌ ಅವರಿಗೆ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಸ್ಥಾಪಕರಾದ ಡಾ. ವಾಮನ್ ರಾವ್ ಬೇಕಲ್ ಕನ್ನಡ ಧ್ವಜ ನೀಡಿ ಅಧ್ಯಕ್ಷ ಪದವಿಯನ್ನು ಹಸ್ತಾಂತರಿಸಿ ಶುಭಕೋರಿದರು.
ಕಿನ್ನಿಗೋಳಿಯ ಯುಗ ಪುರುಷ ಸಭಾ ಭವನದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಘಟಕ ಉದ್ಘಾಟನಾ ಸಮಾರಂಭದಲ್ಲಿ ಅವರಿಗೆ ಅಧಿಕಾರ ನೀಡಲಾಯಿತು. ಕಾರ್ಯಕ್ರಮದಲ್ಲಿ ಸಂದ್ಯಾ ರಾಣಿ ಟೀಚರ್, ಸತೀಶ್ ಕೂಡ್ಲು, ದ.ಕ. ಜಿಲ್ಲಾಧ್ಯಕ್ಷ ಡಾ. ಕೊಳ್ಚಪ್ಪೆ ಗೋವಿಂದ ಭಟ್, ಲಕ್ಷ್ಮೀ ವಿ. ಭಟ್, ಸತ್ಯವತಿ ಭಟ್ ಕೊಳಚಪ್ಪು, ಕನ್ನಡ ಭವನ ಉಪಾಧ್ಯಕ್ಷ ಪ್ರಾಂಶುಪಾಲ ರಾಜೇಶ್ಚಂದ್ರ ಮೊದಲಾದವರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು