6:44 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

Bangalore | ಕಿಲ್ಲರ್​ ಬಿಎಂಟಿಸಿ: ಒಂದೇ ಕುಟುಂಬದ ಮೂವರು ಬಲಿ: ಓರ್ವ ಮಗು ಗಂಭೀರ

19/06/2026, 20:39

ಬೆಂಗಳೂರು(reporterkarnataka.com): ಕಿಲ್ಲರ್​ ಬಿಎಂಟಿಸಿಗೆ ಒಂದೇ ಕುಟುಂಬದ ಮೂವರು ಬಲಿಯಾಗಿರುವ ಅಘಾತಕಾರಿ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆ ಬಳಿ ನಡೆದಿದೆ. ಬೈಕ್​ಗೆ ಬಿಎಂಟಿಸಿ ಬಸ್​ ಡಿಕ್ಕಿಯಾದ ಪರಿಣಾಮ ದಂಪತಿ, ಪುತ್ರಿ ಮತಪಟ್ಟಿದ್ದಾರೆ. ಮೃತರನ್ನು ಅರುಣ್(35), ಅನುಷಾ(32) ಮತ್ತು ಹರ್ನಾ(2) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ 5 ವರ್ಷದ ಅನುಶಿಕಾಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸೂಲಿಬೆಲೆಯಿಂದ ಹೊಸಕೋಟೆ ಕಡೆಗೆ ಹೋಗ್ತಿದ್ದ ಬಿಎಂಟಿಸಿ ಬಸ್ ದೇವನಹಳ್ಳಿ ಕಡೆ ಇಬ್ಬರು ಮಕ್ಕಳೊಂದಿಗೆ ದಂಪತಿ ತೆರಳುತ್ತಿದ್ದ ಬೈಕ್​​ಗೆ ಡಿಕ್ಕಿ ಹೊಡೆದಿದೆ. ರಾಂಗ್ ರೂಟ್​ನಲ್ಲಿ ಬಿಎಂಟಿಸಿ ಬಸ್ ಬಂದಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಮೃತರು ದೇವನಹಳ್ಳಿ ತಾಲೂಕಿನ ತೆಲ್ಲಹಳ್ಳಿ ಗ್ರಾಮದ ನಿವಾಸಿಗಳು ಎಂಬುದು ಗೊತ್ತಾಗಿದೆ. ಘಟನಾ ಸ್ಥಳಕ್ಕೆ ಸೂಲಿಬೆಲೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

*2 ದಿನಗಳಲ್ಲಿ ಬಿಎಂಟಿಸಿಗೆ ನಾಲ್ವರು ಬಲಿ:*
ಬಿಎಂಟಿಸಿ ಎಲೆಕ್ಟ್ರಿಕ್ ‌ಬಸ್ ಹರಿದು ಪಾದಚಾರಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜ್ಞಾನಭಾರತಿ ಮಂಗನಹಳ್ಳಿ ಕ್ರಾಸ್ ಬಳಿ ನಿನ್ನೆ (ಜೂನ್​​ 18) ಸಂಜೆ 7 ಗಂಟೆ ಸುಮಾರಿಗೆ ಘಟನೆ ನಡೆದಿತ್ತು. ರಾಜು(58) ಮೃತ ದುರ್ದೈವಿಯಾಗಿದ್ದು, ಗಾರೆ ಕೆಲಸ ಮಾಡಿಕೊಂಡಿದ್ದ ಈತ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಬಸ್ ಹರಿದು ದುರಂತ ಸಂಭವಿಸಿತ್ತು. ಮನೆಗೆ ತರಕಾರಿ ತರೋಣ ಅಂತಾ ಹೊರಗೆ ಬಂದಿದ್ದ ರಾಜು, ಮಂಗನಹಳ್ಳಿ ಕ್ರಾಸ್ ಬಳಿ ರಸ್ತೆ ದಾಟುವ ವೇಳೆ ಅಮ್ಮ ಆಶ್ರಮ ಸರ್ಕಲ್ ಕಡೆಯಿಂದ ಅತಿ ವೇಗವಾಗಿ ಬಂದ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ರಾಜು ಮೈ ಮೇಲೆ ಹರಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿದ್ದ. ಈ ಘಟನೆ ಮಾಸುವ ಮುನ್ನವೇ ಬಿಎಂಟಿಸಿ ಬಸ್​​ ಈಗ ಮತ್ತೆ ಮೂವರ ಬಲಿ ಪಡೆದಿರೋದು ಆತಂಕಕ್ಕೆ ಕಾರಣವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು