6:25 PM Wednesday19 - August 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :…

ಇತ್ತೀಚಿನ ಸುದ್ದಿ

Bangalore | ಭೂಕುಸಿತ: ಪಶ್ಚಿಮಘಟ್ಟ ಧಾರಣ ಸಾಮರ್ಥ್ಯದ ಅಧ್ಯಯನಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

01/06/2025, 14:40

ಬೆಂಗಳೂರು(reporterkarnataka.com): ದಕ್ಷಿಣ ಕನ್ನಡ, ಕೊಡಗು ಮೊದಲಾದ ಭಾಗದಲ್ಲಿ ಮುಂಗಾರು ಪೂರ್ವ ಮಳೆಗೇ ಭೂಕುಸಿತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.
ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಲಿಖಿತ ಸೂಚನೆ ನೀಡಿರುವ ಅವರು, ಪಶ್ಚಿಮ ಘಟ್ಟದಲ್ಲಿ ಹಲವು ರಸ್ತೆ, ಮತ್ತಿತರ ಯೋಜನೆಗಳು ಕಾರ್ಯಗತವಾಗುತ್ತಿದ್ದು, ಇದರಿಂದ ಘಟ್ಟ ಅಪಾಯಕ್ಕೆ ಸಿಲುಕಿದೆ, ಆಸ್ತಿಹಾನಿ, ಬೆಳೆ ಹಾನಿ, ಜೀವಿಹಾನಿಯ ಜೊತೆಗೆ ವನ್ಯ ಜೀವಿಗಳೂ ಸಂಕಷ್ಟ ಎದುರಿಸುವಂತಾಗಿದೆ ಎಂದು ತಜ್ಞರು ಆತಂಕ ವ್ಯಕ್ತಪಡಿಸಿರುವುದಾಗಿ ತಿಳಿಸಿದ್ದಾರೆ.
ಪಶ್ಚಿಮಘಟ್ಟ ಕ್ಷೀಣಿಸಿದರೆ ಮುಂಬರುವ ದಿನಮಾನಗಳಲ್ಲಿ ತೀವ್ರ ಜಲಕ್ಷಾಮ ಎದುರಾಗುವ ಭೀತಿ ಇದೆ ಎಂಬ ತಜ್ಞರ ಅಭಿಪ್ರಾಯ ಉಲ್ಲೇಖಿಸಿರುವ ಅವರು ಈ ನಿಟ್ಟಿನಲ್ಲಿ ಅಧ್ಯಯನ ಮಾಡಿ 3 ತಿಂಗಳೊಳಗೆ ಪಶ್ಚಿಮಘಟ್ಟದ ತಾಳಿಕೊಳ್ಳುವ ಸಾಮರ್ತ್ಯದ ಬಗ್ಗೆ ವರದಿ ಸಲ್ಲಿಸಲು ಜೀವವೈವಿಧ್ಯಮಂಡಳಿಯ ಸದಸ್ಯ ಕಾರ್ಯದರ್ಶಿ, ಮೌಲ್ಯಮಾಪನ, ಕಾರ್ಯಯೋಜನೆ, ಸಂಶೋಧನೆ ಮತ್ತು ತರಬೇತಿ ಹಾಗೂ ಅರಣ್ಯ ಸಂರಕ್ಷಣೆ ವಿಭಾಗದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೂ ಸೂಚಿಸಿದ್ದಾರೆ.
ಜೀವವೈವಿಧ್ಯತೆಯ ತಾಣವಾದ ಪಶ್ಚಿಮಘಟ್ಟದಲ್ಲಿ ಕರ್ನಾಟಕದ ಅರಣ್ಯಗಳ ಪೈಕಿ ಶೇ.60ರಷ್ಟು ಅರಣ್ಯ ಪ್ರದೇಶ ಇದ್ದು, ಇದು ಸಸ್ಯಸಂಕುಲ, ಪ್ರಾಣಿ ಸಂಕುಲ, ಕೀಟ ಸಂಕುಲಗಳ ನೆಲೆವೀಡಾಗಿದೆ. ಪಶ್ಚಿಮಘಟ್ಟಗಳು ಮಳೆಯ ಮಾರುತ ತಡೆದು ಮಳೆ ಸುರಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ತಿಳಿಸಿರುವ ಈಶ್ವರ ಖಂಡ್ರೆ ಪಶ್ಚಿಮ ಘಟ್ಟದ ಪ್ರಾಮುಖ್ಯತೆ, ಸಂರಕ್ಷಣೆಯ ಮನವರಿಕೆ ಮಾಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು