ಇತ್ತೀಚಿನ ಸುದ್ದಿ
Bangalore | ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಬೆಂಗಳೂರು ನಗರ ಜಿಲ್ಲಾ ಪದಾಧಿಕಾರಿಗಳ ಸಭೆ
06/07/2026, 09:17
ಬೆಂಗಳೂರು(reporterkarnataka.com): ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಬೆಂಗಳೂರು ನಗರ ಜಿಲ್ಲಾ ಪದಾಧಿಕಾರಿಗಳ ಸಭೆ ಬೆಂಗಳೂರಿನ ಗಾಂಧಿನಗರದಲ್ಲಿರುವ ಪ್ರತಿಷ್ಠಿತ ಹೋಟೆಲಾದ ಸಿಎನ್ ಆರ್ ಸಭಾಭವನದಲ್ಲಿ ನಡೆಯಿತು.
ಅಧ್ಯಕ್ಷತೆಯನ್ನು ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ವಹಿಸಿದ್ದರು.

ಪ್ರಸ್ತುತ ಈ ಸಭೆಯಲ್ಲಿ ಕಾನಿಪ ಧ್ವನಿ ಬೆಂಗಳೂರು ನಗರ ಜಿಲ್ಲಾ ಪದಾಧಿಕಾರಿಗಳ ಪದಗ್ರಹಣದ ದಿನಾಂಕವನ್ನು ನಿಗದಿಪಡಿಸುವುದರ ಜೊತೆಗೆ ಪತ್ರಿಕಾ ದಿನಾಚರಣೆಯನ್ನು ಸೆಪ್ಟಂಬರ್ ತಿಂಗಳಿನಲ್ಲಿ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ನಡೆಸುವ ವಿಚಾರವಾಗಿ ಎಲ್ಲಾ ಪದಾಧಿಕಾರಿಗಳು ಮುಕ್ತವಾಗಿ ಚರ್ಚೆ ನಡೆಸಿದರು.












