12:48 AM Wednesday30 - July 2025
ಬ್ರೇಕಿಂಗ್ ನ್ಯೂಸ್
ಮೈಸೂರಿನಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ತಯಾರಿಕಾ ಘಟಕ ಪತ್ತೆ: ಸಂಸತ್ ನಲ್ಲಿ ಯದುವೀರ್… 3 ವರ್ಷ ಬಳಿಕ ಯಾವ ಪಕ್ಷದಿಂದ ಸ್ಪರ್ಧಿಸುತ್ತೇನೋ ಗೊತ್ತಿಲ್ಲ: ಶಾಸಕಿ ನಯನಾ ಮೋಟಮ್ಮ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಏನಿಲ್ಲ ಏನಿಲ್ಲ ಎನ್ನುವುದರ ನಡುವೆ ಸಿಕ್ಕೇ ಬಿಡ್ತು… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಸ್ಪಾಟ್ ನಂಬರ್ 4ರ ಉತ್ಖನನ ಪ್ರಕ್ರಿಯೆ ಆರಂಭ ಬಾಲಮಂದಿರ, ಮಹಿಳಾ ನಿಲಯಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದಿಢೀರ್ ಭೇಟಿ: ಚಿಣ್ಣರನ್ನು ಮುದ್ದಾಡಿದ… USA | ಡ್ರೈವರ್ ಇಲ್ಲದ ಕಾರಿನಲ್ಲಿ ಪ್ರಯಾಣಿಸಿದ ಸ್ಪೀಕರ್ ಯು.ಟಿ. ಖಾದರ್!: ಇದು… Bangaluru | ಪತ್ರಿಕಾ ಸಂಪಾದಕರ ಕೈಕಟ್ಟಿ ಹಾಕಲಾಗುತ್ತಿದೆ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ… Mandya | ಒಂದೇ ದಿನ 1146 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ… ಬಾಳೆಬೈಲು – ಕುರುವಳ್ಳಿ ಬೈಪಾಸ್ ರಸ್ತೆಯಲ್ಲಿ ಕುಸಿಯುತ್ತಿರುವ ಗುಡ್ಡ: ಬ್ಯಾರಿಕೆಡ್ ಹಾಕಿರುವ ಪೊಲೀಸರು Shivamogga | ತೀರ್ಥಹಳ್ಳಿ: ಬೆಜ್ಜವಳ್ಳಿ ಸಮೀಪ ಸ್ಕೂಟಿಗೆ ಹಿಂಭಾಗದಿಂದ ಬಸ್ ಡಿಕ್ಕಿ; ಸವಾರ…

ಇತ್ತೀಚಿನ ಸುದ್ದಿ

Bangalore | ಸರ್ವಜ್ಞನಗರ ಸರಕಾರಿ ಶಾಲೆಗಳ ಅಭಿವೃದ್ಧಿಗೆ ಕ್ರಮ: ಸಚಿವ ಕೆ.ಜೆ.ಜಾರ್ಜ್ ಸೂಚನೆ

14/06/2025, 21:50

ಬೆಂಗಳೂರು(reporterkarnataka.com): ಸರ್ವಜ್ಞನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕ್ಷೇತ್ರದ ಶಾಸಕರೂ ಆಗಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಸರ್ವಜ್ಞನಗರ ಕ್ಷೇತ್ರದ ಸುಬ್ಬಣ್ಣಪಾಳ್ಯ ವಾರ್ಡ್ ಆರ್.ಎಸ್.ಪಾಳ್ಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂಬೆಸಿ ಗಾಲ್ಫ್ ಲಿಂಕ್ಸ್ ತನ್ನ ಸಾಮಾಜಿಕ ಹೊಣೆಗಾರಿಕೆ ನಿಧಿ (ಸಿಎಸ್ಆರ್) ಅಡಿ ನಿರ್ಮಿಸಿರುವ 2 ಶಾಲಾ ಕೊಠಡಿಗಳು ಮತ್ತು ಒಂದು ಭೋಜನ ಕೊಠಡಿಯನ್ನು ಉದ್ಘಾಟಿಸಿದ ಬಳಿಕ ಶಾಲೆಯ ಮುಖ್ಯ ಶಿಕ್ಷಕರು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಪ್ರಾಥಮಿಕ ಶಿಕ್ಷಣ ಆದ್ಯತೆಯಾಗಿರುವುದರಿಂದ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದರು.
ಶಾಲೆಯಲ್ಲಿ ಕೆಲವು ಕುಂದುಕೊರತೆಗಳಿರುವ ಬಗ್ಗೆ ವಿದ್ಯಾರ್ಥಿಗಳ ಪೋಷಕರು ಮತ್ತು ಸ್ಥಳೀಯ ಕಾಂಗ್ರೆಸ್ ಮುಖಂಡರು ತಮ್ಮ ಗಮನಕ್ಕೆ ತಂದಾಗ ಪ್ರತಿಕ್ರಿಯಿಸಿದ ಸಚಿವರು, ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದಲ್ಲದೆ, ಅವಶ್ಯಕತೆ ಇದ್ದರೆ ಬಿಬಿಎಂಪಿ ಮುಖ್ಯ ಆಯುಕ್ತರೊಂದಿಗೆ ಚರ್ಚಿಸುವಂತೆಯೂ ತಿಳಿಸಿದರು.


ಹೊಸದಾಗಿ ನಿರ್ಮಿಸಿರುವ ಭೋಜನ ಕೊಠಡಿಯಲ್ಲಿ ಏಕಕಾಲದಲ್ಲಿ 200ರಿದ 250 ಮಕ್ಕಳು ಕುಳಿತು ಊಟ ಮಾಡಲು ಅವಕಾಶವಿದೆ. ಇಂತಹ ಭೋಜನ ಕೊಠಡಿ ಜತೆಗೆ ಶಾಲಾ ಕೊಠಡಿಗಳನ್ನು ನಿರ್ಮಿಸಿಕೊಟ್ಟ ಸಚಿವರಿಗೆ ಶಾಲಾ ಮಕ್ಕಳು ಮತ್ತು ಸಿಬ್ಬಂದಿ ಕೃತಜ್ಞತೆ ಸಲ್ಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು