3:16 PM Wednesday16 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

Bangalore | ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಎಂಎಸ್ಸಿ ಸೈಬರ್ ಭದ್ರತೆ ಮತ್ತು ಕೃತಕ ಬುದ್ಧಿಮತ್ತೆ ಕೋರ್ಸ್ ಚಾಲನೆ

20/07/2026, 19:02

ಬೆಂಗಳೂರು(reporterkarnata.com): ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದ ಮಾಹಿತಿ ತಂತ್ರಜ್ಞಾನ ಶಾಲೆಯ ಕಂಪ್ಯೂಟರ್ ವಿಜ್ಞಾನ ವಿಭಾಗವು ಹೊಸ ಎಂಎಸ್ಸಿ ಸೈಬರ್ ಭದ್ರತೆ ಮತ್ತು ಕೃತಕ ಬುದ್ಧಿಮತ್ತೆ (Cybersecurity and Artificial Intelligence) ಸ್ನಾತಕೋತ್ತರ ಕೋರ್ಸ್ ಶನಿವಾರ ಚಾಲನೆ ನೀಡಿತು. ವಿಶ್ವವಿದ್ಯಾಲಯದ ಪಿಜಿ ಬ್ಲಾಕ್ನ ಕ್ಸೇವಿಯರ್ ಸಭಾಂಗಣದಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ಹೆವ್ಲೆಟ್ ಪ್ಯಾಕರ್ಡ್ ಎಂಟರ್ಪ್ರೈಸ್ (HPE) ಸಂಸ್ಥೆಯ ಭಾರತ, ಏಷ್ಯಾ-ಪೆಸಿಫಿಕ್ ಮತ್ತು ಜಪಾನ್ ವಿಭಾಗದ ಉಪಾಧ್ಯಕ್ಷ ಹಾಗೂ ಪ್ರಾದೇಶಿಕ ಮಾನವ ಸಂಪನ್ಮೂಲ ಮುಖ್ಯಸ್ಥ ಸೈಲೇಶ್ ಎ. ಜೆ. ಮಿನೆಜಸ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.


ಕಾರ್ಯಕ್ರಮದಲ್ಲಿ ಮಾಹಿತಿ ತಂತ್ರಜ್ಞಾನ ಶಾಲೆಯ ನಿರ್ದೇಶಕರಾದ ಫಾ. ಡೆನ್ಜಿಲ್ ಲೋಬೊ ಎಸ್.ಜೆ. ಮಾತನಾಡಿ, ಕೃತಕ ಬುದ್ಧಿಮತ್ತೆ (AI) ಸಮಾಜದಲ್ಲಿ ಮಹತ್ತರ ಬದಲಾವಣೆಗಳನ್ನು ತರಬಲ್ಲ ತಂತ್ರಜ್ಞಾನವಾಗಿದ್ದು, ಅದನ್ನು ನೈತಿಕತೆ, ಪಾರದರ್ಶಕತೆ ಮತ್ತು ಜವಾಬ್ದಾರಿಯೊಂದಿಗೆ ಬಳಸಬೇಕಾದ ಅಗತ್ಯವನ್ನು ಒತ್ತಿಹೇಳಿದರು. ಕುತೂಹಲ, ನಿರಂತರ ಪ್ರಯೋಗ ಮತ್ತು ನೈತಿಕತೆ ಯಶಸ್ಸಿನ ಮೂರು ಪ್ರಮುಖ ಆಧಾರಗಳೆಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಮುಖ್ಯ ಅತಿಥಿ ಸೈಲೇಶ್ ಮಿನೆಜಸ್ ಅವರು ಮಾತನಾಡಿ, ಕೃತಕ ಬುದ್ಧಿಮತ್ತೆ ಸಮಾಜದ ಅಭಿವೃದ್ಧಿಗೆ ಮಹತ್ವದ ಸಾಧನವಾಗಿದ್ದು, ತಂತ್ರಜ್ಞಾನವನ್ನು ವ್ಯವಹಾರಿಕ ಫಲಿತಾಂಶಗಳಿಗೆ ಪರಿವರ್ತಿಸುವ ಸಾಮರ್ಥ್ಯ, ಕಲಿಯುವ ಮನೋಭಾವ, ಕುತೂಹಲ ಮತ್ತು ಬದಲಾವಣೆಗಳಿಗೆ ಹೊಂದಿಕೊಳ್ಳುವ ಗುಣಗಳು ಇಂದಿನ ಯುವಜನತೆಗೆ ಅತ್ಯಗತ್ಯವೆಂದು ಹೇಳಿದರು.

ಸಮಾರಂಭದಲ್ಲಿ ಮಾಹಿತಿ ತಂತ್ರಜ್ಞಾನ ಶಾಲೆಯ ಡೀನ್ ಡಾ. ಎ. ಎಂ. ಬೋಜಮ್ಮ, ಕಂಪ್ಯೂಟರ್ ವಿಜ್ಞಾನ ವಿಭಾಗದ ಮುಖ್ಯಸ್ಥೆ ಡಾ. ಬಿ. ಜಿ. ಪ್ರಸಾಂತಿ, ಪಿಜಿ ಸಂಯೋಜಕಿ ಡಾ. ನಿತ್ಯಾ, ಕಾರ್ಯಕ್ರಮ ಸಂಯೋಜಕಿ ಡಾ. ಮೃಣ್ಮಯೀ ಭಟ್ಟಾಚಾರ್ಯ ಹಾಗೂ ಪ್ರಥಮ ಬ್ಯಾಚ್ನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವು ಪ್ರಾರ್ಥನಾ ಗೀತೆ ಮತ್ತು ದೀಪ ಪ್ರಜ್ವಲನೆಯೊಂದಿಗೆ ಆರಂಭಗೊಂಡು, ವಂದನಾರ್ಪಣೆಯೊಂದಿಗೆ ಸಮಾಪ್ತಿಯಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು